ಸಾಗರ: ಮೊಬೈಲ್ ಚಾರ್ಜ್ ವಿಚಾರದ ಜಗಳ ಸಾವಿನಲ್ಲಿ ಅಂತ್ಯ
Team Udayavani, Nov 10, 2022, 8:23 PM IST
ಸಾಗರ: ಮೊಬೈಲ್‌ಗೆ ವಿದ್ಯುತ್ ಚಾರ್ಜ್ ಮಾಡಿಕೊಡಲು ನಿರಾಕರಿಸಿದ ನೆರೆಯವನ ಜೊತೆ ಆರಂಭಗೊಂಡ ಜಗಳದಿಂದ ನಡೆದ ಹಲ್ಲೆ ವ್ಯಕ್ತಿಯೋರ್ವನ ಸಾವಿನಲ್ಲಿ ಅಂತ್ಯಗೊಂಡ ಘಟನೆ ತಾಲೂಕಿನ ಕಾರ್ಗಲ್ ಸಮೀಪದ ಗ್ರಾಮವೊಂದರಲ್ಲಿ ನಡೆದಿದೆ. ಕ್ಷುಲ್ಲಕ ಕಾರಣಕ್ಕಾಗಿ ಸ್ನೇಹಿತನಿಂದಲೇ ಹೊಡೆತ ತಿಂದ ಮುರಳ್ಳಿಯ ತಿಮ್ಮಪ್ಪ(52) ಕೊಲೆಯಾಗಿರುವ ದುರ್ದೈವಿ.
ಕಾರ್ಗಲ್ ಪೋಲೀಸ್ ಠಾಣಾ ವ್ಯಾಪ್ತಿಯ ಮುರಳ್ಳಿ ಗ್ರಾಮದ ತನ್ನ ಮನೆಯಲ್ಲಿ ವಿದ್ಯುತ್ ಸಮಸ್ಯೆಯಿದ್ದ ಹಿನ್ನೆಲೆಯಲ್ಲಿ ಸಿದ್ದು ಎಂಬಾತ ಅದೇ ಊರಿನ ಸ್ನೇಹಿತ ತಿಮ್ಮಪ್ಪ ಅವರ ಮನೆಗೆ ಮೊಬೈಲ್ ಚಾರ್ಜ್ ಮಾಡಿಕೊಳ್ಳಲು ಸೋಮವಾರ ರಾತ್ರಿ ತೆರಳಿದ್ದಾನೆ. ಆದರೆ ತಿಮ್ಮಪ್ಪ ಮೊಬೈಲ್ ಚಾರ್ಜ್ ಮಾಡಿಕೊಡಲು ನಿರಾಕರಿಸಿದ್ದಾನೆ. ಇದು ಮಾತಿಗೆ ಮಾತು ಬೆಳೆಯಲು ಕಾರಣವಾಗಿ, ಒಂದು ಹಂತದಲ್ಲಿ ಆರೋಪಿ ಸಿದ್ದು ತಿಮ್ಮಪ್ಪ ಅವರ ತಲೆಗೆ ದೊಣ್ಣೆಯಿಂದ ಹೊಡೆದಿದ್ದಾನೆ.
ಈ ಹೊಡೆದಾಟದ ಸಂದರ್ಭದಲ್ಲಿ ಕಣ್ಣಿಗೆ ಬಲವಾದ ಏಟು ಬಿದ್ದರೂ ಸಾರಿಗೆ ವ್ಯವಸ್ಥೆಯ ಕೊರತೆಯ ಹಿನ್ನೆಲೆಯಲ್ಲಿ ಮರುದಿನ ತಿಮ್ಮಪ್ಪ ಅವರನ್ನು ಚಿಕಿತ್ಸೆಗೆ ಬ್ಯಾಕೋಡು ಪ್ರಾಥಮಿಕ ಆರೋಗ್ಯ ಕೇಂದ್ರ, ಅಲ್ಲಿಂದ ಸಾಗರ ಮತ್ತು ನಂತರದಲ್ಲಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸೇರಿಸಲಾಗಿದೆ. ಪರಿಸ್ಥಿತಿ ಬಿಗಡಾಯಿಸಿದ ಕಾರಣ ಹೆಚ್ಚಿನ ಚಿಕಿತ್ಸೆಗೆ ಉಡುಪಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ತಿಮ್ಮಪ್ಪ ಬುಧವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ. ಅಸಹಜ ಸಾವಿನ ಪ್ರಕರಣ ದಾಖಲಿಸಿಕೊಂಡಿರುವ ಕಾರ್ಗಲ್ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.