Sagara: ನಗರಸಭೆ ಬಿಜೆಪಿ ಸದಸ್ಯರ ದಲಿತ ವಿರೋಧಿ ನೀತಿ; ಕಾಂಗ್ರೆಸ್ ಖಂಡನೆ, ಪ್ರತಿಭಟನೆ
Team Udayavani, Oct 15, 2024, 8:01 PM IST
ಸಾಗರ: ನಗರಸಭೆ ಬಿಜೆಪಿ ಸದಸ್ಯರ ದಲಿತ ವಿರೋಧಿ ನೀತಿ ಮತ್ತು ಮಹಿಳಾ ದಮನಕಾರಿ ಧೋರಣೆಯನ್ನು ಖಂಡಿಸಿ ಅ.15ರ ಮಂಗಳವಾರ ಬ್ಲಾಕ್ ಕಾಂಗ್ರೆಸ್‌ನಿಂದ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಬಿ.ಆರ್.ಜಯಂತ್, ಬಿಜೆಪಿ ಅಧಿಕಾರದಲ್ಲಿ ಸಮಾನತೆ, ಮಹಿಳಾ ಗೌರವ ಸಿಗುವುದಿಲ್ಲ. ಕಾಂಗ್ರೆಸ್‌ನ ಚುನಾಯಿತ ಪ್ರತಿನಿಧಿ, ದಲಿತ ಮಹಿಳೆ ಲಲಿತಮ್ಮ ವಿರುದ್ಧ ಟಿ.ಡಿ.ಮೇಘರಾಜ್ ಅಗೌರವದಿಂದ ನಡೆದುಕೊಂಡಿದ್ದಾರೆ. ಬಿಜೆಪಿಯವರ ಮನಸ್ಥಿತಿಯೇ ಅಂತಹದ್ದು. ದಲಿತರು, ಮಹಿಳೆಯರನ್ನು ಅವರು ಪಶುಗಳಂತೆ ನಡೆಸಿಕೊಳ್ಳುತ್ತಾರೆ. ಸಾಮಾಜಿಕ ನ್ಯಾಯಕ್ಕಾಗಿ ಧ್ವನಿ ಎತ್ತಿದ ಲಲಿತಮ್ಮ ವಿರುದ್ಧ ಮೇಘರಾಜ್ ಮತ್ತಿತರರು ನಡೆದುಕೊಂಡ ರೀತಿ ಖಂಡನೀಯವಾದದ್ದು. ಇಂತಹದ್ದನ್ನು ಪ್ರಜ್ಞಾವಂತ ಸಮಾಜ ತೀವ್ರವಾಗಿ ಖಂಡಿಸಬೇಕು ಎಂದು ಹೇಳಿದರು.
ಕಾಂಗ್ರೆಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಅನಿತಾಕುಮಾರಿ ಮಾತನಾಡಿ, ಹಿಂದೆ ಬಂದಿದ್ದ ಮೀಸಲಾತಿ ಮತ್ತೆ ಬಂದಿರುವುದರಿಂದ ಲಲಿತಮ್ಮ ಅದರ ವಿರುದ್ಧ ನ್ಯಾಯಾಲಯಕ್ಕೆ ಹೋಗಿದ್ದಾರೆ. ಅದನ್ನು ತಪ್ಪು ಎಂದು ಬಿಂಬಿಸುವ ಕೆಲಸ ಬಿಜೆಪಿ ಮಾಡುತ್ತಿದೆ. ನ್ಯಾಯಾಲಯಕ್ಕೆ ಹೋಗಿರುವ ಲಲಿತಮ್ಮ ಅವರನ್ನು ಹೊರಗೆ ಕಳಿಸಿ ಎಂದು ಹೇಳಿ, ಅಪರಾಧಿ ಎಂದು ಹೇಳಿರುವುದು ತಪ್ಪು. ನಮ್ಮ ಸದಸ್ಯೆ ಬಗ್ಗೆ ಹೀಗೆಲ್ಲಾ ಮಾತನಾಡಿದರೆ ಹುಷಾರ್ ಎಂದ ಅವರು, ನಾಲ್ಕು ಬಾರಿ ನಗರಸಭೆ ಸದಸ್ಯರಾಗಿ ಲಲಿತಮ್ಮ ಆಯ್ಕೆಯಾಗಿದ್ದು ಬಿಜೆಪಿಯವರಿಗೆ ಮರೆತು ಹೋಗಿದೆ. ನಾವು ಜನಪರವಾಗಿದ್ದು ಮುಂದಿನ ನಗರಸಭೆ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕಪಾಠ ಕಲಿಸುತ್ತೇವೆ ಎಂದು ತಿಳಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲಸೆ ಚಂದ್ರಪ್ಪ ಮಾತನಾಡಿ, ಸಾಮಾಜಿಕ ನ್ಯಾಯದಡಿ ನ್ಯಾಯಾಲಯಕ್ಕೆ ಹೋಗಿದ್ದ ಲಲಿತಮ್ಮ ಅವರಿಗೆ ಬಿಜೆಪಿ ಅವಮಾನ ಮಾಡಿರುವುದು ದಲಿತ ಸಮುದಾಯಕ್ಕೆ ಅವಮಾನ ಮಾಡಿದಂತೆ. ಹೆಣ್ಣನ್ನು ತಾಯಿಗೆ ಹೋಲಿಸುವ ಬಿಜೆಪಿಯವರು ದಲಿತ ಮಹಿಳೆಗೆ ಅವಮಾನ ಮಾಡಿರುವುದು ಅವರ ದ್ವಿಮುಖನೀತಿಗೆ ಸಾಕ್ಷಿಯಾಗಿದೆ. ಬಿಜೆಪಿ ಆಡಳಿತದ ಅವಧಿಯಲ್ಲಿ ದೊಡ್ಡಮಟ್ಟದ ಭ್ರಷ್ಟಾಚಾರ ನಡೆದಿದೆ ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಎನ್.ಲಲಿತಮ್ಮ, ಗಣಪತಿ ಮಂಡಗಳಲೆ, ಈಶ್ವರ್, ನಾರಾಯಣ ಗೋಳಗೋಡು, ಲಕ್ಷ್ಮಣ್ ಸಾಗರ್, ಸೈಯದ್ ಜಾಕೀರ್, ಎಲ್.ಚಂದ್ರಪ್ಪ, ಉಷಾ ಎನ್., ಸೈಯದ್ ಜಾಕೀರ್, ಕೆ.ಸಿದ್ದಪ್ಪ, ಅನ್ವರ್ ಭಾಷಾ, ಡಿ.ದಿನೇಶ್, ಮಹ್ಮದ್ ಖಾಸಿಂ, ಸುಮಂಗಲಾ ರಾಮಕೃಷ್ಣ ಇನ್ನಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್ ಭಾಗ್ವತ್
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.