![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jun 30, 2023, 4:38 PM IST
ಸಾಗರ: ಪೇಟೆ ಠಾಣೆ ವ್ಯಾಪ್ತಿಯಲ್ಲಿ ವೆಂಟಿಲೇಟರ್ ಮೂಲಕ ಮನೆಯೊಳಗೆ ಇಳಿದು ಕಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳನ್ನು ನಗರ ಠಾಣೆ ಪೊಲೀಸರು ಶುಕ್ರವಾರ ಮಾಲುಸಹಿತ ವಶಕ್ಕೆ ಪಡೆದಿದ್ದಾರೆ.
ನಗರದ ಶಿವಮೊಗ್ಗ ರಸ್ತೆಯ ತೋಟಗಾರಿಕೆ ಇಲಾಖೆ ಹತ್ತಿರದ ಮಹ್ಮದ್ ರಫೀಕ್ ಎಂಬುವವರ ಮನೆಯ ವೆಂಟಿಲೇಟರ್ ಮೂಲಕ ಮನೆಯೊಳಗೆ ಇಳಿದು ಚಿನ್ನಾಭರಣ, ಬೆಲೆಬಾಳುವ ವಾಚು ಸೇರಿದಂತೆ ವಿವಿಧ ವಸ್ತುಗಳನ್ನು ಕಳ್ಳತನ ಮಾಡಿ, ಕಾರಿನೊಂದಿಗೆ ಪರಾರಿಯಾಗಿದ್ದ ಆರೋಪಿಗಳನ್ನು ನಗರ ಠಾಣೆ ಪೊಲೀಸರು ಮೂರು ದಿನದಲ್ಲಿ ಮಾಲು ಸಹಿತ ಪತ್ತೆಹಚ್ಚಿದ್ದಾರೆ.
ಬಂಧಿತರಿಂದ ಕದ್ದ ಚಿನ್ನಾಭರಣ, ಕಾರು ಸಹಿತ ಒಟ್ಟು 7,45,729 ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಭಟ್ಕಳ ಮದೀನ ಕಾಲೋನಿ ನಿವಾಸಿ ಮಹ್ಮದ್ ಇಫ್ಜಾಲ್ ಅಲಿಯಾಸ್ ಇಫ್ಜಲ್, ಭಟ್ಕಳದ ಶಿರೂರು ವಾಸಿ ಯಾಸಿನ್ ಸಾಬ್, ಭಟ್ಕಳ ಹೆಗ್ಗಲ್ ರಸ್ತೆ ನಿವಾಸಿ ಮಹ್ಮದ್ ಮುಸಾದಿಕ್ ರನ್ನು ಬಂಧಿಸಲಾಗಿದೆ.
ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಅನಿಲ್ ಕುಮಾರ್ ಎಸ್. ಭೂಮರೆಡ್ಡಿ ಅವರ ಆದೇಶದ ಮೇರೆಗೆ ಪೊಲೀಸ್ ಉಪಾಧೀಕ್ಷಕ ರೋಹನ್ ಜಗದೀಶ್ ಇವರ ಸಾರಥ್ಯದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ನಗರ ಠಾಣೆ ವೃತ್ತ ನಿರೀಕ್ಷಕರಾದ ಸೀತಾರಾಮ್ ಜೆ., ಕೆ.ವಿ.ಕೃಷ್ಣಪ್ಪ ಮಾರ್ಗದರ್ಶನದಲ್ಲಿ ಪಿಎಸ್‌ಐ ಶ್ರೀಪತಿ, ತುಕಾರಾಮ್ ಸಾಗರ್‌ಕರ್, ಅಪರಾಧ ವಿಭಾಗದ ಸಿಬ್ಬಂದಿಗಳಾದ ರತ್ನಾಕರ್, ನಾಗರಾಜ್ ನಾಯ್ಕ, ಶ್ರೀಧರ್, ಪ್ರಭಾಕರ್, ವಿಶ್ವನಾಥ್, ಡಿ.ಕೆ.ರಾಮನಗೌಡ ಪಾಟೀಲ್ ಇನ್ನಿತರರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.