Sagara ಅನುಮತಿ ಪಡೆಯದೆ ಬೈಕ್ ರ‍್ಯಾಲಿ; ದೂರು ದಾಖಲು
Team Udayavani, Sep 19, 2023, 5:58 PM IST
ಸಾಗರ: ಜಿಲ್ಲಾಧಿಕಾರಿಗಳ ಆದೇಶವಿದ್ದರೂ ಅನುಮತಿ ಪಡೆಯದೆ ಬೈಕ್ ರ‍್ಯಾಲಿ ನಡೆಸಿದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಸ್ವಯಂಪ್ರೇರಣೆಯಿಂದ ದೂರು ದಾಖಲಿಸಿಕೊಂಡ ಪೊಲೀಸರು ನಾಲ್ವರನ್ನು ನಗರ ಠಾಣೆಗೆ ಕರೆಸಿ ಮುಚ್ಚಳಿಕೆ ಬರೆಸಿ ಕಳುಹಿಸಿದ ಘಟನೆ ಸೋಮವಾರ ನಡೆದಿದೆ.
ಗಣಪತಿ ಹಬ್ಬದ ದಿನ ಮಧ್ಯಾಹ್ನ ಪಟ್ಟಣದ ವಿವಿಧೆಡೆ 10-15 ದ್ವಿಚಕ್ರ ವಾಹನಗಳಿಗೆ ಧ್ವಜ ಕಟ್ಟಿಕೊಂಡು ಯುವಕರು ಒಂದು ಕೋಮಿನ ಪ್ರಾರ್ಥನಾ ಮಂದಿರಗಳ ಎದುರು ದ್ವಿಚಕ್ರ ವಾಹನ ರ‍್ಯಾಲಿ ನಡೆಸಿದ್ದಾರೆ.
ಸುದ್ದಿ ತಿಳಿದ ಪೊಲೀಸರು ಸುಮೋಟೋ ದೂರು ದಾಖಲಿಸಿಕೊಂಡು, ಆಪಾದಿತರ ಪತ್ತೆಗೆ ಬೆನ್ನು ಬಿದ್ದಿದ್ದರು.
ಸಿಸಿಟಿವಿ ದೃಶ್ಯಾವಳಿ ಗಮನಿಸಿ, ಪ್ರಕರಣಕ್ಕೆ ಸಂಬಂಧಿಸಿದಂತೆ ರ‍್ಯಾಲಿಯಲ್ಲಿದ್ದವರ ವಿರುದ್ಧ ಐಪಿಸಿ ಸೆಕ್ಷನ್ 279, 188, 189, 190ರ ಅಡಿ ಕೇಸು ದಾಖಲಿಸಿದ್ದರು. ಅಲ್ಲದೆ ನಗರದ ನಾಲ್ವರನ್ನು ಠಾಣೆಗೆ ಕರೆಸಿಕೊಂಡು ವಿಚಾರಣೆ ನಡೆಸಿದ ಡಿವೈಎಸ್‌ಪಿ ಗೋಪಾಲಕೃಷ್ಣ ನಾಯಕ್ ನೇತೃತ್ವದಲ್ಲಿ ಪೊಲೀಸರು, ಮುಚ್ಚಳಿಕೆ ಬರೆಸಿಕೊಂಡು, ಯಾವುದೇ ಕಾರಣಕ್ಕೂ ಕಾನೂನು ಉಲ್ಲಂಘನೆಯಂತಹ ಪ್ರಕರಣ ನಡೆಯದಿರುವಂತೆ ಖಡಕ್ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ. ಬಾಕಿ ಉಳಿದವರಿಗಾಗಿ ಹುಡುಕಾಟ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
B. Y. Raghavendra: 10 ವರ್ಷದಲ್ಲಿ ವಕ್ಫ್ ಆಸ್ತಿ ಶೇ.135 ಹೆಚ್ಚಳ
Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿಟ್ಟು ವ್ಯಕ್ತಿ ನಾಪತ್ತೆ ಪ್ರಕರಣ; ಶವ ಪತ್ತೆ
ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?
Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.