Sagara: ಸಿಗರೇಟ್ ಕಳ್ಳತನ ಪ್ರಕರಣ; ಅಂತರಾಜ್ಯ ಕಳ್ಳನ ಬಂಧನ
Team Udayavani, Mar 15, 2024, 8:39 AM IST
ಸಾಗರ: ನಗರದ ಯುನೈಟೆಡ್ ಟ್ರೇಡಿಂಗ್ ಕಂಪನಿಯಲ್ಲಿ 2023ರ ಮೇ ತಿಂಗಳಲ್ಲಿ ನಡೆದಿದ್ದ 17 ಲಕ್ಷ ಮೊತ್ತದ ಸಿಗರೇಟ್ ತುಂಬಿದ್ದ ಬಾಕ್ಸ್ ಕಳವು ಪ್ರಕರಣದಲ್ಲಿ ಓರ್ವ ಅಂತರಾಜ್ಯ ಕಳ್ಳನನ್ನು ಬಂಧಿಸಿರುವ ಪೇಟೆ ಪೋಲಿಸರು 6 ಲಕ್ಷ ರೂ. ವಶ ಪಡಿಸಿಕೊಂಡು, ಉಳಿದ ಮೂವರಿಗೆ ಹುಡುಕಾಟ ನಡೆಸಿದ್ದಾರೆ.
ಪಿಎಸ್‌ಐಗಳಾದ ಮಹೇಶ ಕುಮಾರ್, ಸಂತೋಷ್ ಬಾಗೋಜಿ ಮತ್ತು ಲಕ್ಷ್ಮಣ ಮೊದಲಾದವರಿದ್ದ ತನಿಖಾ ತಂಡ ರಾಜಸ್ಥಾನದ ಜಾಲೂರು ಜಿಲ್ಲೆಯ ಮಾಂಡವಾಲ ಗ್ರಾಮದ ನಿವಾಸಿ ಜೀತೇಂದ್ರ ಕುಮಾರ್ (27)ನನ್ನು ದಸ್ತಗಿರಿ ಮಾಡಿ, ಸಿಗರೇಟ್ ಮಾರಾಟ ಮಾಡಿ ಹಂಚಿಕೊಂಡಿದ್ದ 6 ಲಕ್ಷ ರೂ.ವನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಘಟನೆ ಹಿನ್ನೆಲೆ: ಕಳೆದ ವರ್ಷ ಮೇ 14ರಂದು ಸೊರಬ ರಸ್ತೆಯಲ್ಲಿರುವ ಅನುರಾಧಾ ಕಾಗೋಡುರವರಿಗೆ ಸೇರಿದ ಯುನೈಟೆಡ್ ಟ್ರೇಡಿಂಗ್ ಕಂಪೆನಿ ಕಟ್ಟಡದ ಹಿಂದಿನ ಬಾಗಿಲು ಒಡೆದು ಅಲ್ಲಿದ್ದ 17 ಲಕ್ಷ ಮೌಲ್ಯದ ಸಿಗರೇಟ್ ತುಂಬಿದ್ದ ಬಾಕ್ಸ್‌ಗಳನ್ನು ಕಳ್ಳತನ ಮಾಡಲಾಗಿತ್ತು. ಸ್ಥಳದಲ್ಲಿದ್ದ ಸಿಸಿಟಿವಿ ದೃಶ್ಯಾವಳಿ ಆಧರಿಸಿ ತನಿಖೆ ಪ್ರಾರಂಭಿಸಿದ್ದ ಪೊಲೀಸರಿಗೆ ವಾಹನದ ನಂಬರ್ ದೊರೆತಿತ್ತು. ಇದರ ಜಾಡು ಹಿಡಿದು, ಮಾಲೀಕರನ್ನು ಪ್ರಶ್ನಿಸಿದಾಗ ಹುಬ್ಬಳ್ಳಿಯಲ್ಲಿ ಬಾಡಿಗೆಗೆ ಬಂದಿದ್ದ ರಾಜಸ್ಥಾನ ಮೂಲದ ಮೂವರು ಯುವಕರು ಕಾರನ್ನು ಪಡೆದು, ಮಾಲೀಕನನ್ನು ಹೋಟೆಲ್‌ನಲ್ಲಿ ಬಿಟ್ಟು ಸಾಗರಕ್ಕೆ ಬಂದು, ಕಳ್ಳತನ ಮಾಡಿ ಪರಾರಿಯಾಗಿದ್ದು ತಿಳಿದು ಬಂದಿದೆ.
ಕದ್ದಿದ್ದ ಸಿಗರೇಟನ್ನು ಮಾರಾಟ ಮಾಡಿ ಬಂದ ಹಣವನ್ನು ಎಲ್ಲರೂ ಹಂಚಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಜಸ್ಥಾನ ಮೂಲದ ನಾಲ್ವರ ತಂಡ ರಾಜ್ಯದ ಬಿಜಾಪುರ, ಸಿಂಧಗಿ, ಸವದತ್ತಿ ಮೊದಲಾದೆಡೆಯೂ ಇದೇ ರೀತಿ ಹೋಲ್‌ಸೆಲ್ ಸಿಗರೇಟ್ ಮಾರಾಟ ಮಾಡುವವರನ್ನು ದೋಚಿರುವುದು ಇದೇ ವೇಳೆ ಪತ್ತೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Infectious Disease: ರಾಜ್ಯಕ್ಕೂ ಬೇಕಿದೆ “ವಿಷಾಣು ಯುದ್ಧ ಅಭ್ಯಾಸ್”
Sagara: ಭೀಕರ ಅಪಘಾತ… ರಿಕ್ಷಾ ಚಾಲಕ ಸೇರಿ ಇಬ್ಬರು ಮೃತ್ಯು, ಮೂವರಿಗೆ ಗಾಯ
Anandapura: ಬಟ್ಟೆ ತೊಳೆಯಲು ಹೋದ ಮಹಿಳೆ ಕೆರೆಗೆ ಬಿದ್ದು ಮೃತ್ಯು
Hosanagara: ಬಿಸಿ ಟೀ ಮೈ ಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದ ಎರಡು ವರ್ಷದ ಮಗು ಸಾವು
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.