Sagara: ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಅಗತ್ಯ ನ್ಯಾಯ ಒದಗಿಸಲು ಬದ್ಧ; ಮಧು ಬಂಗಾರಪ್ಪ


Team Udayavani, Oct 3, 2024, 6:47 PM IST

Sagara: ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಅಗತ್ಯ ನ್ಯಾಯ; ಮಧು ಬಂಗಾರಪ್ಪ ಭರವಸೆ

ಸಾಗರ: ಹಲವು ವರ್ಷಗಳಿಂದ ಭೂಮಿ ಸಮಸ್ಯೆ ಎದುರಿಸುತ್ತಿರುವ ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಅಗತ್ಯ ನ್ಯಾಯ ಒದಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದರು.

ತಾಲೂಕಿನ ಶರಾವತಿ ಹಿನ್ನೀರಿನ ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ಆರಂಭವಾದ ನವರಾತ್ರಿ ಉತ್ಸವಕ್ಕೆ ಗುರುವಾರ ಚಾಲನೆ ನೀಡಿ ಮಾತನಾಡಿದ ಅವರು, ಶರಾವತಿ ಮುಳುಗಡೆ ಸಂತ್ರಸ್ತರಿಗೆ ನ್ಯಾಯ ಒದಗಿಸುವುದಕ್ಕೂ ಸರ್ಕಾರ ಬದ್ಧ. ನಮ್ಮ ಸರ್ಕಾರ ಶರಾವತಿ ಮುಳುಗಡೆ ಸಂತ್ರಸ್ತರ ಪರವಾಗಿ ಅಂದಿನಿಂದಲೂ ಇದೆ. ಈಗಾಗಲೇ ಸಂತ್ರಸ್ತರ ಸಮಸ್ಯೆ ಬಗ್ಗೆ ಸಮಗ್ರವಾಗಿ ಮುಖ್ಯಮಂತ್ರಿಗಳ ಜೊತೆಗೆ ಚರ್ಚಿಸಿ ಅಗತ್ಯ ಕ್ರಮಕ್ಕೆ ಮನವಿ ಮಾಡಲಾಗಿದೆ. ಮುಳುಗಡೆ ಸಂತ್ರಸ್ತರ ರೈತರಿಗೆ ನಮ್ಮ ಅವಧಿಯಲ್ಲಿ ನಾನು ಅಧಿಕಾರ ವಹಿಸಿಕೊಂಡ ಬಳಿಕ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಯಾವುದೇ ತ್ಯಾಗಕ್ಕೂ ಸಿದ್ಧ ಎಂದು ಘೋಷಿಸಿದರು.

ಸಿಗಂದೂರು ಧರ್ಮಾಧಿಕಾರಿ ಡಾ. ಎಸ್. ರಾಮಪ್ಪ ಮಾತನಾಡಿ, ಬ್ರಹ್ಮಶ್ರೀ ನಾರಾಯಣ ಗುರುಗಳು ಶಾಲೆಗಳ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಸಂದೇಶ ನೀಡಿದ್ದರು. ಇಂದು ಅವರ ಆಶಯದಂತೆ ಸಿಗಂದೂರು ಕ್ಷೇತ್ರದ ಧರ್ಮಾಧಿಕಾರಿಗಳು ಗ್ರಾಮೀಣ ಶಾಲೆಗಳ ಅಭಿವೃದ್ಧಿಗೆ ಯೋಜನೆ ಹಮ್ಮಿಕೊಂಡಿದ್ದಾರೆ. ರಾಜ್ಯಾದ್ಯಂತ ಸರ್ಕಾರಿ ಶಾಲೆಗಳ ಉಳಿವಿಗೆ ದೇವಾಲಯದ ಈ ಕಾರ್ಯ ಮಾದರಿಯಾಗಬೇಕು. ಮುಂದಿನ ದಿನಗಳಲ್ಲಿ ಈ ಯೋಜನೆಯು ರಾಜ್ಯಾದ್ಯಂತ ವಿಸ್ತರಣೆಯಾಗಲಿ ಎಂದು ಒತ್ತಾಯಿಸಿದರು.

ಭೂ ಮಂಜೂರಾತಿಗೆ ರೈತರ 70 ವರ್ಷಗಳ ದಾಖಲೆ ಕೇಳುತ್ತಿರುವುದು ಸರಿಯಲ್ಲ, ಶರಾವತಿ ಮುಳುಗಡೆ ಸಂತ್ರಸ್ತರಿಗೆ ಈ ನಿಯಮವನ್ನು ಸಡಿಲಿಸಿ ವಿಶೇಷ ಪ್ಯಾಕೇಜ್ ಮೂಲಕ ಅನುಭವದ ಮಿತಿಯನ್ನು ಕನಿಷ್ಠ 25 ವರ್ಷಗಳಿಗೆ ಇಳಿಕೆ ಮಾಡಬೇಕು. ಇದರಿಂದ ಸಾವಿರಾರು ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಅನುಕೂಲ ಕಲ್ಪಿಸಬೇಕು ಎಂದು ಹೇಳಿದರು.

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಡೋಲು ಬಡಿದು ಭಕ್ತಾದಿಗಳಿಗೆ ದಸರಾ ಹಬ್ಬದ ಶುಭಾಶಯಗಳನ್ನು ಹೇಳಿದರು. ಈ ವೇಳೆ ರತ್ನಾಕರ ಹೋನಗೋಡು, ಪ್ರಸನ್ನ ಕುಮಾರ, ಶ್ರೀದೇವಿ ರಾಮಚಂದ್ರ, ಸತ್ಯನಾರಾಯಣ ಜಿ.ಟಿ., ಸರಸ್ವತಿ ಗಣಪತಿ, ಮಂಜಪ್ಪ ಮರಸ, ಅರುಣ್ ಪ್ರಸಾದ್, ಯೋಗರಾಜ ಯಮಗಳಲೆ, ಶ್ರೀ ಕ್ಷೇತ್ರದ ಕಾರ್ಯದರ್ಶಿ ರವಿಕುಮಾರ್ ಎಚ್.ಆರ್. ಇತರರು ಇದ್ದರು.

ದೇವಿಗೆ ವಿಶೇಷ ಪೂಜೆ: ನವರಾತ್ರಿ ಉತ್ಸವದ ಅಂಗವಾಗಿ ದೇವಸ್ಥಾನದಲ್ಲಿ ಚಂಡಿಕಾ ಹವನ, ದೇವಿಗೆ ಮಹಾಭಿಷೇಕ, ಪಂಚಾಮೃತ ಅಭಿಷೇಕ, ಪಾರಾಯಣ, ನವ ಚಂಡಿಕಾ ಹವನ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಅರ್ಚಕ ರಘುಪತಿ ಭಟ್ ನೇತೃತ್ವದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿತು.

ಟಾಪ್ ನ್ಯೂಸ್

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

Mulki-kambala

Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ

IND-W vs WI: ವನಿತೆಯರ ಏಕದಿನ ಮುಖಾಮುಖಿ

IND-W vs WI: ವನಿತೆಯರ ಏಕದಿನ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರುಕಲಾದ ಬಸ್

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.