ಸಾಗರದ ಸಹಕಾರಿ ಧುರೀಣ, ಮಾಜಿ ಶಾಸಕ ಎಲ್.ಟಿ. ತಿಮ್ಮಪ್ಪ ಹೆಗಡೆ ಇನ್ನಿಲ್ಲ
Team Udayavani, Jan 17, 2023, 7:38 AM IST
ಸಾಗರ: ಸಾಗರ ಪ್ರಾಂತ್ಯ ಅಡಿಕೆ ಬೆಳೆಗಾರರ ಸಂಘ ಸ್ಥಾಪನೆ ಸೇರಿದಂತೆ ಅಂತರರಾಜ್ಯ ಸಂಸ್ಥೆ ಕ್ಯಾಂಪ್ಕೋ, ಸಾಗರದ ಆಪ್ಸ್‌ಕೋಸ್‌ನಂತಹ ಸಂಸ್ಥೆಗಳನ್ನು ಹುಟ್ಟು ಹಾಕುವಲ್ಲಿ ಅತ್ಯಂತ ಮುಖ್ಯ ಪಾತ್ರ ವಹಿಸಿದ್ದ ಮಾಜಿ ಶಾಸಕ, ಸಹಕಾರಿ ಧುರೀಣ ಎಲ್.ಟಿ.ತಿಮ್ಮಪ್ಪ ಹೆಗಡೆ(94) ವಯೋಸಹಜ ಕಾರಣಗಳಿಂದ ಮಂಗಳವಾರ (ಜ.17) ಬೆಳಿಗ್ಗೆ ನಿಧನ ಹೊಂದಿದರು.
ಒಟ್ಟು ಕುಟುಂಬ ಜೀವನದ ಮೌಲ್ಯಗಳನ್ನು ಎತ್ತಿಹಿಡಿದಿದ್ದ ಹೆಗಡೆಯವರು ತಮ್ಮ ಜೊತೆಗಿದ್ದ ಸಹೋದರ ಗಣಪತಿ ಹೆಗಡೆ, ಪತ್ನಿ ಸಾವಿತ್ರಮ್ಮ, ಪುತ್ರರಾದ ತಿಮ್ಮಪ್ಪ ಹಾಗೂ ಅಶೋಕ, ಸೊಸೆ, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧುಬಾಂಧವರನ್ನು ಅಗಲಿದ್ದಾರೆ.
ಸಾಗರದ ಆಪ್ಸ್‌ಕೋಸ್, ತೋಟಗಾರ್ಸ್, ಅಡಿಕೆ ಬೆಳೆಗಾರರ ಸಂಘಗಳ ಸಂಸ್ಥಾಪಕ ಅಧ್ಯಕ್ಷರಾಗಿದ್ದ ಹೆಗಡೆಯವರು ಕ್ಯಾಂಪ್ಕೋ ಸಂಸ್ಥೆಯ ಸಂಸ್ಥಾಪಕ ನಿರ್ದೇಶಕರಾಗಿಯೂ ಕಾರ್ಯ ನಿರ್ವಹಿಸಿದ್ದರು. 1978, 83 ರಲ್ಲಿ ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿ ಕಾರ್ಯನಿರ್ವಹಿಸಿದ್ದರು. ಹಟ್ಟಿಯಂಗಡಿಯ ಸಿದ್ಧಿವಿನಾಯಕ ಕ್ಷೇತ್ರಾಭಿವೃದ್ಧಿ ಟ್ರಸ್ಟ್ ಹಾಗೂ ಸಿದ್ಧಿ ಶಿಕ್ಷಣ ಪ್ರತಿಷ್ಠಾನ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷರಾಗಿ ಹಟ್ಟಿಯಂಗಡಿ ಗಣಪತಿ ದೇವಸ್ಥಾನ ಹಾಗೂ ಶಿಕ್ಷಣ ಸಂಸ್ಥೆಗಳ ಬೆಳವಣಿಗೆಯಲ್ಲಿ ಪಾತ್ರ ವಹಿಸಿದ್ದರು.
ಹೊಸನಗರದ ರಾಮಚಂದ್ರಾಪುರ ಮಠದ ಚಟುವಟಿಕೆಯಲ್ಲಿ ಮುಂಚೂಣಿಯ ನಾಯಕತ್ವ ವಹಿಸಿದ್ದರು. ಸಾಗರದ ಶಿಕ್ಷಣ ಸಂಸ್ಥೆ ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಎಲ್‌ಬಿ ಕಾಲೇಜು, ಪ್ರಗತಿ ಸಂಯುಕ್ತ ಶಾಲೆ ಮೊದಲಾದವುಗಳ ಸ್ಥಾಪನೆಯಲ್ಲಿ ಭಾಗವಹಿಸಿ ಸಂಸ್ಥೆಯ ಉಪಾಧ್ಯಕ್ಷ ಹುದ್ದೆಯನ್ನು ಬಹುಕಾಲ ನಿರ್ವಹಿಸಿದರು. ಕೇಂದ್ರ ಸಾಂಬಾರು ಮಂಡಳಿಯ ನಿರ್ದೇಶಕರಾಗಿ, ಭೂ ನ್ಯಾಯ ಮಂಡಳಿ, ಲ್ಯಾಂಡ್ ಗ್ರಾಂಟ್ ಸಮಿತಿಗಳಲ್ಲಿ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.