Sagara; ಡೆಂಘೀ ಬಾಧಿತೆಗೆ ಹೃದಯಾಘಾತ: ಗ್ರಾಪಂ ಮಾಜಿ ಅಧ್ಯಕ್ಷೆ ಮೃತ್ಯು
Team Udayavani, Jun 21, 2024, 6:36 PM IST
ಸಾಗರ: ಡೆಂಘೀ ಜ್ವರದಿಂದ ಬಳಲುತ್ತಿದ್ದ ಸೊರಬ ತಾಲೂಕಿನ ಮಹಿಳೆಯೋರ್ವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗಲೇ ಹೃದಯಾಘಾತದಿಂದ ಮೃತಪಟ್ಟ ಘಟನೆ ಇಲ್ಲಿನ ಉಪವಿಭಾಗೀಯ ಆಸ್ಪತ್ರೆಯಲ್ಲಿ ಶುಕ್ರವಾರ ನಡೆದಿದೆ.
ಸೊರಬ ತಾಲೂಕಿನ ಶಿಗ್ಗಾ ಗ್ರಾಮ ಪಂಚಾಯ್ತಿಯ ಮಾಜಿ ಅಧ್ಯಕ್ಷೆ ವಸಂತ (40) ಮೃತಪಟ್ಟವರು. ವಾಂತಿ, ಜ್ವರದ ಹಿನ್ನೆಲೆಯಲ್ಲಿ ಅವರನ್ನು ಗುರುವಾರ ರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷೆಗೊಳಪಡಿಸಿದಾಗ ಡೆಂಘೀ ಪಾಸಿಟಿವ್ ಬಂದಿತ್ತು. ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಗೆ ದಿಢೀರ್ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಮೃತರ ಪತಿ ಶಿವಮೂರ್ತಿ ಹಾಲಿ ಶಿಗ್ಗಾ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷರಾಗಿದ್ದು, ಮೃತರು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಸಾಗರ ತಾಲೂಕು ಸೇರಿದಂತೆ ಅಕ್ಕಪಕ್ಕದ ತಾಲೂಕುಗಳಲ್ಲಿ ಕೂಡ ಡೆಂಘೀ ಜ್ವರ ವಿಪರೀತವಾಗಿದ್ದು ಜನ ಆತಂಕಕ್ಕೊಳಗಾಗುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.