ಗಾಳಿ-ಮಳೆ: ಮರ ಬಿದ್ದು ವ್ಯಕ್ತಿಗೆ ಗಾಯ
Team Udayavani, May 11, 2020, 12:13 PM IST
ಆನಂದಪುರ: ಆನಂದಪುರದಲ್ಲಿ ಭಾನುವಾರ ಸಂಜೆ ಸುಮಾರು ಒಂದು ತಾಸು ಗುಡುಗು-ಮಿಂಚು ಸಹಿತ ಭಾರಿ ಮಳೆಯಾಗಿದೆ. ಸುತ್ತಮುತ್ತಲಿನ ಎಡೆಹಳ್ಳಿ, ಆಚಾಪುರ, ಗಿಳಾಲಗುಂಡಿ, ಲಕ್ಕವಳ್ಳಿ, ಮುಂಬಾಳು, ಹೊಸೂರು, ಹೊಸಕೊಪ್ಪ, ಕಣ್ಣೂರು, ಇರುವಕ್ಕಿ ಭಾಗದಲ್ಲಿ ಮಳೆಯಾಗಿದೆ.
ಸಾಗರ: ತಾಲೂಕಿನ ಹಲವು ಕಡೆಗಳಲ್ಲಿ ಭಾನುವಾರ ಭಾರೀ ಗಾಳಿ-ಮಳೆ ಸುರಿದಿದ್ದು, ವಿದ್ಯುತ್ ಸಂಪರ್ಕದ ಕಂಬಗಳು ಧರೆಗುರುಳಿವೆ. ಮರ ಬಿದ್ದು ವ್ಯಕ್ತಿಯೊಬ್ಬ ಗಾಯಗೊಂಡಿದ್ದಾರೆ.
ಪಟ್ಟಣದ ಎಸ್‌ಎನ್ ನಗರದಲ್ಲಿ ಹಾಗೂ ಆವಿನಹಳ್ಳಿ ರಸ್ತೆಯಲ್ಲಿ ತಲಾ 2 ವಿದ್ಯುತ್ ಕಂಬಗಳು ಮುರಿದಿದ್ದು, ಬಹಳಷ್ಟು ಕಡೆಗಳಲ್ಲಿ ಮರದ ಕೊಂಬೆಗಳು ವಿದ್ಯುತ್ ತಂತಿಗಳ ಮೇಲೆ ಬಿದ್ದಿವೆ. ಎಸ್‌ಎನ್ ನಗರದ ರಕ್ತೇಶ್ವರಿ ದೇವಸ್ಥಾನದ ಬಳಿ ವಿದ್ಯುತ್ ಕಂಬವೊಂದು ರಸ್ತೆಗೆ ಅಡ್ಡವಾಗಿ ಬಿದ್ದಿದ್ದು, ಜನ ಹಾಗೂ ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು. ತೆರವುಗೊಳಿಸುವ ಕಾರ್ಯವನ್ನು ಇಲಾಖೆ ನಡೆಸುತ್ತಿದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ. ಇಲ್ಲಿನ ಆವಿನಹಳ್ಳಿ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಚಿಪ್ಪಳಿಗೆ ತೆರಳುತ್ತಿದ್ದ ಹಾನಂಬಿ ರಸ್ತೆಯ ವಾಸಿ ತಾಹೀರ್ ಎಂಬುವವರ ಮೇಲೆ ರಸ್ತೆ ಪಕ್ಕದ ಮರ ಬಿದ್ದು, ತಲೆಗೆ ಗಂಭೀರವಾದ ಪೆಟ್ಟಾಗಿದೆ. ಸ್ಥಳೀಯರು ತಕ್ಷಣ ಅವರನ್ನು ಇಲ್ಲಿನ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Gundlupete: ವಿದ್ಯುತ್ ತಂತಿಗೆ ಸಿಲುಕಿ ಮರಿಯಾನೆ ಸಾವು
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.