Sagara; ಹರಿದು ಹಾರುತ್ತಿರುವ ಬೃಹತ್ ರಾಷ್ಟ್ರಧ್ವಜ!


Team Udayavani, May 22, 2023, 5:56 PM IST

1-sadasd

ಸಾಗರ: ನಗರದ ಗಣಪತಿ ಕೆರೆಯ ಪಕ್ಕದಲ್ಲಿ ಎತ್ತರದಲ್ಲಿ ಹಾರಾಡುತ್ತಿರುವ ರಾಷ್ಟ್ರಧ್ವಜ ಗಾಳಿಯ ಬಿರುಸಿಗೆ ಸಿಕ್ಕು ಹರಿದು ಹಾಳಾಗಿದ್ದರೂ ಅದರ ನಿರ್ವಹಣೆ ನಡೆಸುವ ಸಾಗರ ನಗರಸಭೆಯ ಗಮನಕ್ಕೆ ಬಾರದಿದ್ದುದು ಸೋಮವಾರ ಕಂಡುಬಂದಿತು.

ನಗರದ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಬಿಎಚ್ ರಸ್ತೆಯ ಪಕ್ಕದಲ್ಲಿ 159 ಅಡಿ ಎತ್ತರದಲ್ಲಿ30-45 ಅಡಿ ಅಳತೆಯ ಬೃಹತ್ ರಾಷ್ಟ್ರಧ್ವಜ ಹಾರಾಡುತ್ತಿರುವುದು ಸಾಗರ ಪ್ರವೇಶಿಸುವ ಪ್ರವಾಸಿಗರಿಗೆ ವಿಶೇಷ ಆಕರ್ಷಣೆಯಂತೆ ಕಾಣುತ್ತದೆ.2020 ರ ಆಗಸ್ಟ್ 15 ರಂದು ಪ್ರಾಯೋಗಿಕ ಪರೀಕ್ಷೆಗೊಳಗಾದ ರಾಷ್ಟ್ರಧ್ವಜ 2021 ರ ಜನವರಿ 26 ರಿಂದ ನಿರಂತರವಾಗಿ ಹಾರಾಡುತ್ತಿದೆ. ಸುಮಾರು87 ಲಕ್ಷ ರೂ. ವೆಚ್ಚದಲ್ಲಿ ಧ್ವಜಸ್ತಂಭ, ಉದ್ಯಾನವನಗಳ ನಿರ್ಮಾಣವಾಗಿದೆ. ಗಣಪತಿ ಕೆರೆಯ ನೀರಿನ ಸೆಲೆಯ ಭಾಗವನ್ನು ಮುಚ್ಚಿ ಈ ರಾಷ್ಟ್ರಧ್ವಜ ಸ್ತಂಭ ನಿರ್ಮಾಣ ಮಾಡಲಾಗಿದೆ ಎಂಬುದು ಆ ಕಾಲದಲ್ಲಿ ವಿವಾದವೂ ಆಗಿತ್ತು.

ಮೀರತ್‌ನ 380 ಅಡಿ ಎತ್ತರದ ರಾಷ್ಟ್ರಧ್ವಜ, ಬೆಳಗಾವಿಯ 361 ಅಡಿ ಎತ್ತರದ ಬಾವುಟಗಳ ಹಿಂದೆ ಸಾಗರದ ರಾಷ್ಟಧ್ವಜಕ್ಕೆ ವಿಶೇಷ ಕೀರ್ತಿ ಲಭ್ಯವಾಗಿದೆ. ಬಳ್ಳಾರಿಯಲ್ಲಿ 152 ಅಡಿ ಎತ್ತರದಲ್ಲಿ ಹಾಗೂ ಹೊಸಪೇಟೆಯಲ್ಲಿ150 ಅಡಿ ಎತ್ತರದಲ್ಲಿ ರಾಷ್ಟ್ರಧ್ವಜ ಹಾರಾಡುತ್ತಿದೆ. ಮಲೆನಾಡಿನ ಮಳೆ, ಗಾಳಿಯ ಶೀತ ವಾತಾವರಣ, ಖಾದಿ ಧ್ವಜ ಹಾರಾಡಬೇಕಿರುವ ಕಾರಣ ಈಗಾಗಲೇ ಹಲವು ಬಾರಿ ಇಲ್ಲಿನ ರಾಷ್ಟ್ರಧ್ವಜ ಹರಿದು ಬದಲಾಯಿಸುವಂತಾಗಿದೆ.

ಈ ಕೆಲಸಕ್ಕೆ ಎರಡು ಹೆಚ್‌ಪಿ ಯಂತ್ರ ಕೂಡ ನಗರಸಭೆಯಿಂದ ಅಳವಡಿಸಲಾಗಿದೆ. ಪದೇ ಪದೆ ರಾಷ್ಟ್ರಧ್ವಜ ಹರಿದು ತೊಂದರೆಯಾಗುವುದರಿಂದ ನಗರಸಭೆಯಲ್ಲಿ ಸದಾ ಐದು ಧ್ವಜಗಳನ್ನು ಸಂಗ್ರಹಿಸಲಾಗಿದೆ ಎಂಬ ಸ್ಪಷ್ಟೀಕರಣವೂ ನಗರಸಭೆಯಿಂದ ಸಿಕ್ಕಿತ್ತು. ಒಂದು ಕ್ಷಣವೂ ದೇಶದ ರಾಷ್ಟ್ರಧ್ವಜ ಹರಿದ ಸ್ಥಿತಿಯಲ್ಲಿ ಹಾರಾಡುವುದು ಸಮ್ಮತವಲ್ಲದ ಕಾರಣ ಸಾರ್ವಜನಿಕರು ಗಮನಕ್ಕೆ ತರುವ ಮುನ್ನವೇ ಆಡಳಿತದ ಗಮನಕ್ಕೆ ತರುವ ಹಾಗೂ ತಕ್ಷಣ ಬದಲಿಸುವ ವ್ಯವಸ್ಥೆಯನ್ನು ನಗರಸಭೆ ಮಾಡಿಕೊಳ್ಳಬೇಕು ಎಂದು ದೇಶಭಕ್ತರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Charmady Ghat: ಬಿದಿರುತಳ ಅರಣ್ಯದಲ್ಲಿ ಕಾಡ್ಗಿಚ್ಚು

Charmady Ghat: ಬಿದಿರುತಳ ಅರಣ್ಯದಲ್ಲಿ ಕಾಡ್ಗಿಚ್ಚು

1-eewq

ತುಬಚಿ- ಬಬಲೇಶ್ವರ ಏತ ನೀರಾವರಿ: 3,048 ಎಕರೆ ಸ್ವಾಧೀನ, ಹಣ ಬಿಡುಗಡೆಗೆ ಎಂ.ಬಿ.ಪಾಟೀಲ ಸೂಚನೆ

1-5555

Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ

Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!

Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!

renukaacharya

BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ

1-jan-26

R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು

1-sp

Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಪ್ರೋತ್ಸಾಹ ಧನ: ಸಚಿವ ಶಿವಾನಂದ ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ripponpet ಬೀದಿ ನಾಯಿ ಕೊಂದು ಆಟೋಗೆ ಕಟ್ಟಿಕೊಂಡು ಎಳೆದೊಯ್ದ ಕ್ರೂರಿ

Ripponpet ಬೀದಿ ನಾಯಿ ಕೊಂದು ಆಟೋಗೆ ಕಟ್ಟಿಕೊಂಡು ಎಳೆದೊಯ್ದ ಕ್ರೂರಿ

Shimoga: ಬೀದಿ ನಾಯಿಯನ್ನು ಕ್ರೂರವಾಗಿ ಕೊಂದು ಆಟೋದಲ್ಲಿ ಎಳೆದೊಯ್ದ ವ್ಯಕ್ತಿ

Shimoga: ಬೀದಿ ನಾಯಿಯನ್ನು ಕ್ರೂರವಾಗಿ ಕೊಂದು ಆಟೋದಲ್ಲಿ ಎಳೆದೊಯ್ದ ವ್ಯಕ್ತಿ

Sagra-Areca-1

ಅಡಿಕೆ ಬೆಳೆಗಾರರು ಆತಂಕವಿಲ್ಲದೆ ಕೃಷಿಯಲ್ಲಿ ತೊಡಗಿಕೊಳ್ಳಿ: ಶಿವರಾಜ್‌ ಸಿಂಗ್‌ ಚೌಹಾಣ್‌ 

Sagara: ಜ. 22ರಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ಡಾಕ್ಟರೇಟ್ ಪ್ರದಾನ 

Sagara: ಜ. 22ರಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ಡಾಕ್ಟರೇಟ್ ಪ್ರದಾನ 

ನಾನು ಪ್ರತಿಭಟನೆ, ಪಾದಯಾತ್ರೆ ಮಾಡಿದಷ್ಟು ಯಾವ ರಾಜಕಾರಣಿಯೂ ಮಾಡಿಲ್ಲ: ಕಿಮ್ಮನೆ

ನಾನು ಪ್ರತಿಭಟನೆ, ಪಾದಯಾತ್ರೆ ಮಾಡಿದಷ್ಟು ಯಾವ ರಾಜಕಾರಣಿಯೂ ಮಾಡಿಲ್ಲ: ಕಿಮ್ಮನೆ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

14

Sullia: ಚರಂಡಿಯಲ್ಲಿ ಸಿಲುಕಿದ ಶಾಲಾ ವಾಹನ

byndoor

Shirva: ಕಾರು ಢಿಕ್ಕಿ; ದ್ವಿಚಕ್ರ ಸವಾರನಿಗೆ ಗಾಯ

car-parkala

Kaup: ಉದ್ಯಾವರ; ಮಹಿಳೆಗೆ ಬೈಕ್‌ ಢಿಕ್ಕಿ

2

Udupi: ವೇಶ್ಯಾವಾಟಿಕೆ; ಓರ್ವನ ಬಂಧನ

Charmady Ghat: ಬಿದಿರುತಳ ಅರಣ್ಯದಲ್ಲಿ ಕಾಡ್ಗಿಚ್ಚು

Charmady Ghat: ಬಿದಿರುತಳ ಅರಣ್ಯದಲ್ಲಿ ಕಾಡ್ಗಿಚ್ಚು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.