Sagara ಅಪ್ರಾಪ್ತೆಗೆ ಪ್ರೀತಿಸುವಂತೆ ಪೀಡಿಸುತ್ತಿದ್ದ ಯುವಕ; ಪೋಕ್ಸೋ ಪ್ರಕರಣ ದಾಖಲು
Team Udayavani, Aug 27, 2023, 7:25 PM IST
ಸಾಗರ: ನಗರದಲ್ಲಿ ಕೆಲಸಕ್ಕೆ ಹೋಗುವ ಸಮಯದಲ್ಲಿ ಅಪ್ರಾಪ್ತೆಯನ್ನು ಪರಿಚಯ ಮಾಡಿಕೊಂಡು ನನ್ನನ್ನು ಪ್ರೀತಿ ಮಾಡಬೇಕು ಎಂದು ಪೀಡಿಸುತ್ತಿದ್ದ ಯುವಕನ ವಿರುದ್ಧ ಹಿಂದೂ ಜಾಗರಣಾ ವೇದಿಕೆಯ ಕಾರ‍್ಯಕರ್ತರು ನೀಡಿದ್ದ ದೂರಿನ ಅಡಿಯಲ್ಲಿ ನಗರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.
ಸಾಗರ ನಗರದ ನಿವಾಸಿಯಾಗಿರುವ 24 ವರ್ಷದ ಆಟೋ ಡ್ರೈವರ್ ಯುವಕ ಕಳೆದ ಆರು ತಿಂಗಳ ಹಿಂದೆ ಅಪ್ರಾಪ್ತೆ ತಂದೆಯನ್ನು ಕಳೆದುಕೊಂಡ ಸಂದರ್ಭದಲ್ಲಿ ಪರಿಚಿತನಾಗಿದ್ದ. ಈ ಹಂತದಲ್ಲಿ ಅವಳಿಗೆ ತನ್ನನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದ. ಯುವಕನ ಕೋರಿಕೆಯನ್ನು ಅಪ್ರಾಪ್ತೆ ತಿರಸ್ಕರಿಸಿದ್ದರೂ ಆತ ಒತ್ತಾಯವನ್ನು ಮುಂದುವರೆಸಿದ್ದ. ಶನಿವಾರ ಮನೆಗೆ ಬಂದ ಆತ ಪ್ರೀತಿಸದಿದ್ದರೆ ಜೀವ ಹಾನಿ ಮಾಡುವುದಾಗಿ ಬೆದರಿಕೆ ಹಾಕಿ ಚಾಕು ತೋರಿಸಿದ್ದ ಎನ್ನಲಾಗಿದೆ.
ಇದರಿಂದ ಬೆದರಿದ ಆಕೆ ಹಿಂದೂ ಜಾಗರಣಾ ವೇದಿಕೆ ಕಾರ‍್ಯಕರ್ತರ ನೆರವು ಪಡೆದು ನಗರ ಠಾಣೆಯಲ್ಲಿ ಶನಿವಾರ ದೂರು ನೀಡಿದ್ದರು. ಆರೋಪಿಯ ಮೊಬೈಲ್ ಜಾಡು ಹಿಡಿದ ಪೊಲೀಸರು ಮಧ್ಯಾಹ್ನ 3 ಗಂಟೆ ಸುಮಾರಿಗೆ ವರದಹಳ್ಳಿ ರಸ್ತೆಯಲ್ಲಿ ವಶಕ್ಕೆ ಪಡೆದಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಗರದಲ್ಲಿ ಅನ್ಯ ಕೋಮಿನ ಯುವಕರು ಲವ್ ಜಿಹಾದ್ ಮೂಲಕ ಹಿಂದೂ ಯುವತಿಯರನ್ನು ವಂಚಿಸುತ್ತಿರುವ ಪ್ರಕರಣಗಳನ್ನು ಖಂಡಿಸಿ ಹಿಂದೂ ಜಾಗರಣಾ ವೇದಿಕೆಯ ಕಾರ‍್ಯಕರ್ತರು ಪೊಲೀಸ್ ಠಾಣೆಗೆ ಜಮಾಯಿಸಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
B. Y. Raghavendra: 10 ವರ್ಷದಲ್ಲಿ ವಕ್ಫ್ ಆಸ್ತಿ ಶೇ.135 ಹೆಚ್ಚಳ
Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿಟ್ಟು ವ್ಯಕ್ತಿ ನಾಪತ್ತೆ ಪ್ರಕರಣ; ಶವ ಪತ್ತೆ
ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?
Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.