Sagara; ಹಸಿರುಮಕ್ಕಿ ಲಾಂಚ್ ಸೇವೆ ತಾತ್ಕಾಲಿಕ ಸ್ಥಗಿತ
Team Udayavani, May 21, 2024, 4:16 PM IST
ಸಾಗರ: ಶರಾವತಿ ಹಿನ್ನೀರು ಬತ್ತಿರುವ ಹಿನ್ನೆಲೆಯಲ್ಲಿ ಹಸಿರುಮಕ್ಕಿ ಲಾಂಚನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಮಳೆ ಕೊರತೆ ಮತ್ತು ವಿಪರೀತ ಬಿಸಿಲಿನ ಝಳದಿಂದಾಗಿ ಶರಾವತಿ ಹಿನ್ನೀರು ಬತ್ತಿ ಹೋಗಿದೆ. ನೀರಿನ ಆಳದಲ್ಲಿರುವ ಮರದ ದಿಮ್ಮಿಗಳು, ಕಲ್ಲುಬಂಡೆಗಳು ನೀರು ಇಳಿದಿರುವ ಹಿನ್ನೆಲೆಯಲ್ಲಿ ಲಾಂಚ್‌ಗೆ ತಾಗಿ ಹಾನಿ ಉಂಟಾಗುವ ಸಾಧ್ಯತೆ ಇದೆ.
ಈ ಹಿನ್ನೆಲೆಯಲ್ಲಿ ಲಾಂಚ್ ಸೇವೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಸಾಗರದಿಂದ ಹಸಿರುಮಕ್ಕಿ ಮೂಲಕ ಕೊಲ್ಲೂರು, ಕುಂದಾಪುರ, ಉಡುಪಿ, ಮಂಗಳೂರು ಕಡೆ ಪ್ರಯಾಣ ಬೆಳೆಸುವವರು ಈ ಅಂಶವನ್ನು ಗಮನಿಸಬೇಕಾಗಿದೆ.
ಕಳೆದ ಒಂದು ವಾರದಿಂದ ಹಸಿರುಮಕ್ಕಿ ಲಾಂಚ್‌ನಲ್ಲಿ ಜನರ ಜೊತೆಗೆ ಲಘು ವಾಹನ, ದ್ವಿಚಕ್ರ ವಾಹನವನ್ನು ಸಾಗಿಸಲಾಗುತ್ತಿತ್ತು. ಈಗ ಲಾಂಚ್ ಸೇವೆ ಸಂಪೂರ್ಣ ಸ್ಥಗಿತಗೊಂಡಿದ್ದು, ಮಳೆ ಬಂದು ನೀರಿನ ಮಟ್ಟ ಹೆಚ್ಚಳವಾಗುವವರೆಗೂ ಹಸಿರುಮಕ್ಕಿ ಲಾಂಚ್ ಸೇವೆ ಇರುವುದಿಲ್ಲ ಎಂದು ಆಂತರಿಕ ಜಲಾನಯನ ನಿಗಮ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.