ಮಾರಿಕಾಂಬಾ ಜಾತ್ರೆಗೆ ಭರದ ಸಿದ್ಧತೆ

ಜಾತ್ರೆಗೆ ಅಂಕೆ ಹಾಕುವ ಶಾಸ್ತ್ರ ಸಂಪನ್ನ | 18ರಿಂದ 26ರವರೆಗೆ ವಿವಿಧ ಕಾರ್ಯಕ್ರಮ

Team Udayavani, Feb 12, 2020, 3:32 PM IST

12-February-20

ಸಾಗರ: ನಗರದ ಮಾರಿಕಾಂಬಾ ಜಾತ್ರೆಗೆ ಅಂಕೆ ಹಾಕುವ ಶಾಸ್ತ್ರ ನಡೆಸುವ ಸಿದ್ಧತೆ ಮಂಗಳವಾರ ನಡೆದಿದ್ದು, ತಡರಾತ್ರಿಯಲ್ಲಿ ಸಂಪನ್ನಗೊಳ್ಳುವ ಮೂಲಕ ಜಾತ್ರೆಯ ಧಾರ್ಮಿಕ ಪ್ರಕ್ರಿಯೆ ಆರಂಭಗೊಂಡಿದೆ. 18ರಿಂದ ಒಂದು ವಾರಗಳ ಕಾಲ ಇಡೀ ನಗರವು ವಿವಿಧ ಧಾರ್ಮಿಕ, ಸಾಂಪ್ರದಾಯಿಕ ಆಚರಣೆಗಳಿಂದ ಕಳೆಕಟ್ಟುವುದು ಖಚಿತವಿದೆ. ಈ ಹಿನ್ನೆಲೆಯಲ್ಲಿ ಕಡೆಯ ವಾರದ ಸಿದ್ಧತೆಗಳು ಭರದಿಂದ ಸಾಗಿವೆ. ಜಾತ್ರೆ ಆರಂಭ ದಿನದಿಂದ ಫೆ. 26ರವರೆಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.

ರಾಜ್ಯದ ಪ್ರಸಿದ್ಧ ಕಲಾವಿದರು ಸಂಗೀತ, ನೃತ್ಯ, ಗಾಯನ ಸೇರಿದಂತೆ ವಿವಿಧ ರೀತಿಯ ಕಾರ್ಯಕ್ರಮಗಳನ್ನು ನೀಡಲಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವೂ ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡಲಾಗಿದೆ. ಇದೇ ಮೊದಲ ಬಾರಿಗೆ ನಗರದ ತಿಲಕ್‌ ರಸ್ತೆಯ ಶ್ರೀ ಮಾರಿಕಾಂಬಾ ಕಲಾವೇದಿಕೆಯಲ್ಲಿ ಪ್ರತಿ ನಿತ್ಯ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಸಾಂಸ್ಕೃತಿಕ ಸಮಿತಿ ಸಂಚಾಲಕ ಲೋಕೇಶ್‌ ಕುಮಾರ್‌ ಗುಡಿಗಾರ್‌ ನೇತೃತ್ವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿವೆ ಎಂದು ಮಾರಿಕಾಂಬಾ ವ್ಯವಸ್ಥಾಪಕ ಸಮಿತಿ ಖಜಾಂಚಿ ನಾಗೇಂದ್ರ ಎಸ್‌. ಕುಮಟಾ ತಿಳಿಸಿದ್ದಾರೆ. ಫೆ. 18ರಿಂದ 26ರವರೆಗೆ ಪ್ರತಿ ನಿತ್ಯ ಸಾಗರದ ಗಂಡನ ಮನೆ ಮಾರಿಕಾಂಬಾ ದೇವಸ್ಥಾನದ ಆವರಣದಲ್ಲಿ ಭಜನಾ ಕಾರ್ಯಕ್ರಮ ನಡೆಯಲಿದೆ. ಜಿಲ್ಲೆಯ 40ಕ್ಕೂ ಹೆಚ್ಚು ಭಜನಾ ತಂಡಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿವೆ.

ಸಾಂಸ್ಕೃತಿಕ ಸಿರಿ ಕಾರ್ಯಕ್ರಮ: 18ರ ಸಂಜೆ 5ಕ್ಕೆ ವಸ್ತು ಪ್ರದರ್ಶನವನ್ನು ಶಾಸಕ ಹರತಾಳು ಹಾಲಪ್ಪ ಉದ್ಘಾಟಿಸುವರು. ಎಂಎಲ್‌ಸಿ ಆಯನೂರು ಮಂಜುನಾಥ್‌, ಎಸ್‌. ರುದ್ರೇಗೌಡ,
ಆರ್‌. ಪ್ರಸನ್ನಕುಮಾರ್‌, ಭೋಜೆಗೌಡ, ಜಿಪಂ ಅಧ್ಯಕ್ಷೆ ಜ್ಯೋತಿ ಕುಮಾರ್‌ ಉಪಸ್ಥಿತರಿರುವರು. ಜಾತ್ರೆಯ ಪ್ರಯುಕ್ತ 19ರಿಂದ 26ರವರೆಗೆ ಪ್ರತಿ ನಿತ್ಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. 19ರ ಸಂಜೆ 5.30ಕ್ಕೆ ಬೆಂಗಳೂರಿನ ಭೂಮಿಕಾ ಅವರಿಂದ ಭರತನಾಟ್ಯ, 6ಕ್ಕೆ ವಿಶಾಲ್‌ ಹರಿಕಿರಣ್‌ ಅವರಿಂದ ಕೂಚುಪುಡಿ, 6-30ಕ್ಕೆ ಸಾಯಿ ಗ್ರೂಪ್‌ ಡ್ಯಾನ್ಸ್‌ ಅವರಿಂದ ನೃತ್ಯ, ರಾತ್ರಿ 8ಕ್ಕೆ ಎಚ್‌.ಎಲ್‌. ರಾಘವೇಂದ್ರ ವೃಂದದಿಂದ ರಸಮಂಜರಿ, 9-30ಕ್ಕೆ ಉಡುಪಿ ಗಾಯಕ ಡಾ| ಅಭಿಷೇಕ್‌ ಕರೋಡ್ಕಲ್‌ ಅವರಿಂದ ರಸಮಂಜರಿ ನಡೆಯಲಿದೆ.

19ರ ಸಂಜೆ 7ಕ್ಕೆ ಆಯೋಜಿಸಿರುವ ಜಾತ್ರೆಯ “ಸಾಂಸ್ಕೃತಿಕ ಸಿರಿ’ ಉತ್ಸವಕ್ಕೆ ಸಿಎಂ ಬಿ.ಎಸ್‌.ಯಡಿಯೂರಪ್ಪ ಗೌರವ ಉಪಸ್ಥಿತಿಯಲ್ಲಿ ಶಾಸಕ ಎಚ್‌.ಹಾಲಪ್ಪ ಚಾಲನೆ ನೀಡುವರು. ಗ್ರಾಮೀಣಾಭಿವೃದ್ಧಿ  ಸಚಿವ ಕೆ.ಎಸ್‌. ಈಶ್ವರಪ್ಪ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಹಿರಿಯ ಚಲನಚಿತ್ರ ಕಲಾವಿದ ಶಿವರಾಂ, ಹಿರಿಯ ಸಾಹಿತಿ ಡಾ| ನಾ. ಡಿಸೋಜಾ, ಸಾಗರ ಉಪರಕ್ಷಣಾ ಧಿಕಾರಿ ಜೆ.ರಘು ಉಪಸ್ಥಿತರಿರುವರು. ಮಾರಿಕಾಂಬಾ ವ್ಯವಸ್ಥಾಪಕ ಸಮಿತಿ ಅಧ್ಯಕ್ಷ ಕೆ.ಎನ್‌ .ನಾಗೇಂದ್ರ ಅಧ್ಯಕ್ಷತೆ ವಹಿಸುವರು. ಸಾಂಸ್ಕೃತಿಕ ಸಮಿತಿ ಸಂಚಾಲಕ ಲೋಕೇಶ್‌ ಕುಮಾರ್‌ ಗುಡಿಗಾರ್‌, ಸಹ ಸಂಚಾಲಕ ರಾಮಚಂದ್ರ ಹಾಜರಿರುವರು.

ಟಾಪ್ ನ್ಯೂಸ್

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.