ಸಾಗರ ನಗರಸಭೆಯಲ್ಲಿ ಇವತ್ತಿಗೂ ಬಿಎಸ್‌ವೈಯೇ ಸಿಎಂ!
Team Udayavani, Apr 4, 2022, 7:29 PM IST
ಸಾಗರ: ಶಿವಮೊಗ್ಗ ಜಿಲ್ಲೆಯವರೇ ಆದ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದು ಸರಿಸುಮಾರು ಒಂಬತ್ತು ತಿಂಗಳು ಕಳೆದಿದ್ದರೂ ಸಾಗರದ ನಗರಸಭೆ ಮಾತ್ರ ಈಗಲೂ ಅವರನ್ನೇ ಮುಖ್ಯಮಂತ್ರಿ ಸ್ಥಾನದಲ್ಲಿ ಇರಿಸಿ ಗೌರವಿಸುತ್ತಿದೆ!
ನಗರಸಭೆಯ ಅಧ್ಯಕ್ಷ ಉಪಾಧ್ಯಕ್ಷರ ಕೊಠಡಿಯಲ್ಲಿ ಒಂದೆಡೆ ಹಾಲಿ ಶಾಸಕ ಹಾಲಪ್ಪ ಹಾಗೂ ಸಂಸದ ಬಿ.ವೈ.ರಾಘವೇಂದ್ರ ಅವರ ಫೋಟೋಗಳನ್ನು ಹಾಕಲಾಗಿದೆ. ಇನ್ನೊಂದೆಡೆ ಭಾರತದ ಪ್ರಧಾನ ನರೇಂದ್ರ ಮೋದಿ, ದೇಶದ ರಾಷ್ಟ್ರಪತಿ ರಾಮನಾಥ್ ಕೋವಿದ್‌ರ ಫೋಟೋಗಳಿದ್ದು, ಅವರ ಜೊತೆ ಮುಖ್ಯಮಂತ್ರಿಗಳ ಫೋಟೋ ಇರುವಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಫೋಟೋ ರಾರಾಜಿಸುತ್ತಿದೆಯೇ ವಿನಃ ಇಡೀ ಹಾಲ್‌ನಲ್ಲಿ ಎಲ್ಲಿಯೂ ರಾಜ್ಯದ ಇಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಫೋಟೋ ಕಂಡುಬರುತ್ತಿಲ್ಲ. ಗೋಡೆಯ ಮಧ್ಯದಲ್ಲಿ ಕಾಣಿಸುವ ಭಾರತ ಮಾತೆ, ವಿವೇಕಾನಂದರು. ಗಾಂಧಿ, ಅಂಬೇಡ್ಕರ್‌ರ ಫೋಟೋ ಕೆಳಗೆ ಕೂಡ ನಗರಸಭೆಯ ಎಲ್ಲ ಸದಸ್ಯರು ಅವತ್ತಿನ ಮುಖ್ಯಮಂತ್ರಿ ಬಿಎಸ್‌ವೈ ಬಂದಾಗ ಅವರಿಗೆ ಸಲ್ಲಿಸಿದ ಪೌರ ಸಮ್ಮಾನದ ಸಂದರ್ಭದ ಫೋಟೋವೇ ಇದೆ.
ಈ ಫೋಟೋ ಮೂಲಕ ಬಿಎಸ್‌ವೈ ಇವತ್ತಿಗೂ ಅಧಿಕಾರದಲ್ಲಿದ್ದರೂ ಹಿಡಿತ ಇರಿಸಿಕೊಂಡಿದ್ದಾರೆ ಎಂದು ವಿರೋಧಿಗಳು ಸುಲಭವಾಗಿ ಆರೋಪಿಸುವಂತಹ ಪರಿಸ್ಥಿತಿ ಸಾಗರದಲ್ಲಂತೂ ನಿರ್ಮಾಣವಾಗಿದೆ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.