ನರೇಗಾ ಯೋಜನೆಯ ಮಾರ್ಗಸೂಚಿ ಮಾರ್ಪಾಡು
Team Udayavani, Jul 4, 2020, 1:06 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಸಾಗರ: ನರೇಗಾ ಯೋಜನೆಯಡಿಯಲ್ಲಿ ತೆರೆದ ಬಾವಿ ನಿರ್ಮಾಣಕ್ಕೆ ಅನುಮತಿ ನೀಡಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಆದೇಶ ಹೊರಡಿಸಿದೆ.
ಈ ಹಿಂದೆ ನರೇಗಾ ಯೋಜನೆಯಲ್ಲಿ ತೆರೆದ ಬಾವಿ ತೆಗೆಯಲು ಅವಕಾಶವಿತ್ತು. ಕಳೆದ 3-4 ವರ್ಷಗಳಿಂದ ಮಾರ್ಗಸೂಚಿ ಬದಲಾಗಿ ಕೃಷಿ ಬಾವಿ ಎಂದು ಮಾರ್ಪಾಡಾಗಿದೆ. ಇದರಿಂದ ಜನರಿಗೆ ತೀವ್ರ ತೊಂದರೆಯಾಗುತ್ತಿದೆ. ಹಾಗಾಗಿ ಮಲೆನಾಡು ಭಾಗಕ್ಕೆ ಅನುಕೂಲವಾಗುವಂತೆ ಮಾರ್ಗಸೂಚಿ ಬದಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಸ್. ಈಶ್ವರಪ್ಪ ಅವರ ಸಾಗರ ಕ್ಷೇತ್ರದ ಪ್ರವಾಸದ ಸಂದರ್ಭದಲ್ಲಿ ಶಾಸಕ ಎಚ್.ಹಾಲಪ್ಪ ಹರತಾಳು ಮನವರಿಕೆ ಮಾಡಿದ್ದರು.
ಅದರ ಫಲಶ್ರುತಿಯಾಗಿ ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿಯಲ್ಲಿ ವೈಯಕ್ತಿಕ ಮತ್ತು ಸಾರ್ವಜನಿಕ ಕುಡಿಯುವ ನೀರಿನ ತೆರೆದ ಬಾವಿ ನಿರ್ಮಾಣಕ್ಕೆ ಸರ್ಕಾರ ತೀರ್ಮಾನಿಸಿದ್ದು, ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದ ಮುಖ್ಯ ಕಾರ್ಯಾಚರಣಾಧಿಕಾರಿ ಆದೇಶದ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.