ಅಕ್ರಮ ಗೋವು ಕಳ್ಳತನ: ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹ
Team Udayavani, Oct 24, 2021, 4:50 PM IST
ಸಾಗರ: ಅಕ್ರಮ ಗೋವು ಕಳ್ಳತನ ಮಾಡುತ್ತಿರುವವರ ವಿರುದ್ಧ ಸೂಕ್ತ ಕಾನೂನುಕ್ರಮ ಜರುಗಿಸುವಂತೆ ಒತ್ತಾಯಿಸಿ ಭಾನುವಾರ ಬಿಜೆಪಿ ಯುವ ಮೋರ್ಚಾ ವತಿಯಿಂದ ನಗರಠಾಣೆಗೆ ಮನವಿ ಸಲ್ಲಿಸಲಾಯಿತು.
ಅ. 23ರ ಶನಿವಾರ ಮಧ್ಯರಾತ್ರಿ ಸುಮಾರು 2-30ರ ಸುಮಾರಿಗೆ ನಗರದ ಮಾರಿಕಾಂಬಾ ವೃತ್ತದ ಸಮೀಪ ಕಪ್ಪು ಬಣ್ಣದ ಮಹೀಂದ್ರ ಸ್ಕಾರ್ಪಿಯೋ ಕಾರಿನಲ್ಲಿ ಮೂರು ಜನರು ರಸ್ತೆಯಲ್ಲಿ ಮಲಗಿದ್ದ ಗೋವನ್ನು ಅಪಹರಿಸಿಕೊಂಡು ಹೋಗಿದ್ದಾರೆ. ಈ ಬಗ್ಗೆ ಸ್ಥಳೀಯವಾಗಿ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಸಾಗಾಣಿಕೆ ನಡೆಸುತ್ತಿರುವ ದೃಶ್ಯ ದಾಖಲಾಗಿದೆ ಎಂದು ಮನವಿಯಲ್ಲಿ ಹೇಳಲಾಗಿದೆ.
ಇದನ್ನೂ ಓದಿ:ಬಸ್ಸಿಗೆ ಕಾಯುತ್ತಿದ್ದವರಿಗೆ ಢಿಕ್ಕಿ ಹೊಡೆದ ಕಾರು: ಚಾಲಕ ಸಾವು, ಉಳಿದವರ ಸ್ಥಿತಿ ಗಂಭೀರ
ಹಿಂದಿನಿಂದಲೂ ಪಟ್ಟಣ ವ್ಯಾಪ್ತಿಯಲ್ಲಿ ಗೋವು ಕಳ್ಳತನ ಮಾಡುತ್ತಿರುವ ಬಗ್ಗೆ ಯುವಮೋರ್ಚಾ ವತಿಯಿಂದ ದೂರು ನೀಡಲಾಗಿತ್ತು. ಸೂಕ್ತ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಅ. 23ರಂದು ಮತ್ತೆ ಗೋವೊಂದನ್ನು ಗೋಕಳ್ಳರು ಅಕ್ರಮವಾಗಿ ಹೊತ್ತೊಯ್ದಿದ್ದಾರೆ. ತಕ್ಷಣ ಗೋ ಕಳ್ಳಸಾಗಾಣಿಕೆ ಮಾಡುತ್ತಿರುವವರನ್ನು ಬಂಧಿಸಿ, ಸೂಕ್ತ ಕಾನೂನುಕ್ರಮ ಜರುಗಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಈ ಸಂದರ್ಭದಲ್ಲಿ ಯುವಮೋರ್ಚಾ ನಗರ ಅಧ್ಯಕ್ಷ ಅರುಣ ಕುಗ್ವೆ, ನಗರ ಅಧ್ಯಕ್ಷ ಶ್ರೀರಾಮ್, ಪ್ರಮುಖರಾದ ಪರಶುರಾಮ್, ವಿನಯ್ ಪೂಜಾರಿ, ರಾಘವೇಂದ್ರ, ವಿನೋದ್ ರಾಜ್ ಶೆಟ್ಟಿ, ಸಂತೋಷ್ ಕೆ.ಜಿ., ಪ್ರದೀಪ್, ವಿನೋದ್ ಇನ್ನಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ರಿಪ್ಪನ್ ಪೇಟೆ ಸಮೀಪ ಹಿಟ್ ಅಂಡ್ ರನ್; ಬೈಕ್ ಸವಾರ ಸಾವು
Shivamogga: ಮುಂದುವರಿದ ಕರಡಿಗಳ ಹಾವಳಿ; ಸ್ಥಳೀಯರಲ್ಲಿ ತೀವ್ರ ಆತಂಕ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Shimoga: ಮೊಬೈಲ್ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.