ಸಾಗರ: ನಾಲ್ಕು ತಿಂಗಳಿಂದ ಕೆಟ್ಟು ನಿಂತ ಲಾಂಚ್
ಚನ್ನಗೊಂಡ ಗ್ರಾಮ ಪಂಚಾಯತ್ ಸಂಪರ್ಕಿಸಲು ಸಿಗ್ಗಲು, ಚಂಬಳಿ ಗ್ರಾಮಸ್ಥರ ಪರದಾಟ
Team Udayavani, Sep 29, 2022, 12:15 PM IST
ಸಾಗರ: ತಾಲೂಕಿನ ಶರಾವತಿ ಎಡದಂಡೆಯ ಕರೂರು ಹೋಬಳಿಯ ಚನ್ನಗೊಂಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಗಾರು -ಸಿಗ್ಗಲು ಲಾಂಚ್ ಕಳೆದ ನಾಲ್ಕು ತಿಂಗಳಿಂದ ಶರಾವತಿ ಹಿನ್ನೀರಿನ ಮಧ್ಯೆ ಕೆಟ್ಟು ನಿಂತು ಸಿಗ್ಗಲು, ಚಂಬಳಿ ಮುಂತಾದ ಗ್ರಾಮಗಳ ಜನರು ಪರದಾಡುವಂತಾಗಿದೆ.
ಈ ಗ್ರಾಮದ ಜನರು ತಮ್ಮ ಪಂಚಾಯತ್ ಕೇಂದ್ರ, ಬ್ಯಾಂಕ್, ಪಡಿತರ, ವ್ಯಾಪಾರ ವಹಿವಾಟು ಸೇವೆಗೆ ನದಿ ದಾಟಿ ಹೋಗಲು ಲಾಂಚ್ ನೀಡಿ ಎಂದು ಗ್ರಾಮಸ್ಥರು 2018ರಲ್ಲಿ ಚುನಾವಣೆ ಬಹಿಷ್ಕರಿಸಲು ನಿರ್ಧರಿಸಿದ್ದರು. ಆ ಸಂದರ್ಭದಲ್ಲಿ ಸ್ಥಳಕ್ಕೆ ಬಂದ ಸಾಗರ ಉಪವಿಭಾಗದ ಸಹಾಯಕ ಆಯುಕ್ತರು ಭರವಸೆ ನೀಡಿ ಗ್ರಾಮಸ್ಥರ ಮನವೊಲಿಸಿದ್ದರು.
ಸಾಗರ ಶಾಸಕ ಹರತಾಳು ಹಾಲಪ್ಪ ಒಳನಾಡು ಜಲಸಾರಿಗೆ ಇಲಾಖೆಯ ಹಸಿರುಮಕ್ಕಿ ಮಾರ್ಗದ ಹಳೆ ಲಾಂಚ್ ಈ ಪ್ರದೇಶಕ್ಕೆ ವರ್ಗಾಯಿಸಿ ಚನ್ನಗೊಂಡ ಗ್ರಾಮ ಪಂಚಾಯತ್ ಉಸ್ತುವಾರಿ ನೋಡಿಕೊಳ್ಳುವಂತೆ ವ್ಯವಸ್ಥೆ ಮಾಡಿ ಕಳೆದ ಬೇಸಿಗೆಯಲ್ಲಿ ಉದ್ಘಾಟಿಸಿದ್ದರು. ಮೂರು ತಿಂಗಳು ಸೇವೆ ನೀಡಿದ ಲಾಂಚ್ ಸಮರ್ಪಕ ನಿರ್ವಹಣೆ ಇಲ್ಲದೆ ಸ್ಥಗಿತಗೊಂಡಿದೆ.
ಒಳನಾಡು ಜಲಸಾರಿಗೆ ಇಲಾಖೆ ಒಡೆತನದ ಈ ಲಾಂಚ್‌ನ ಬೆಲೆ 25 ಲಕ್ಷ ರೂ.ಗೂ ಹೆಚ್ಚಿದ್ದು, ಪಂಚಾಯತ್ ರಾಜ್ ಇಲಾಖೆಗೆ ಅದನ್ನು ಹಸ್ತಾಂತರ ಮಾಡಿ ಇಲಾಖೆ ತನ್ನ ಜವಾಬ್ದಾರಿ ಕಳಚಿಕೊಂಡಿದೆ. ಈಗ ಚನ್ನಗೊಂಡ ಗ್ರಾಮ ಪಂಚಾಯತ್ ನಿರ್ವಹಣೆಯಲ್ಲಿ ಇದೆ. ನಿರ್ವಹಣೆಯ ವೆಚ್ಚವನ್ನು ಭರಿಸಲಾಗದೆ ಪಂಚಾಯತ್ ಕೈಚೆಲ್ಲಿದೆ.
ಪಂಚಾಯತ್ ಇದರ ತಾಂತ್ರಿಕ ನಿರ್ವಹಣೆ ಮಾಡಬೇಕಾಗಿತ್ತು. ಸರಿಯಾಗಿ ನಿರ್ವಹಿಸದ ಕಾರಣ ಈ ಲಾಂಚ್ ಸ್ಥಗಿತಗೊಂಡಿದೆ. – ಧನೇಂದ್ರ, ಕಡವು ನಿರೀಕ್ಷಕ, ಸಾಗರ
ಕೆಸರಿನಲ್ಲಿ ನಿಂತಿರುವ ಲಾಂಚ್ ಹೊರತೆಗೆಯಲು ಹಲವು ಬಾರಿ ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಎರಡು ಇಂಜಿನ್ ಹೊಂದಿರುವ ಲಾಂಚ್ ನಿರ್ವಹಣೆ ದುಬಾರಿ ವೆಚ್ಚದ್ದು. ಪಂಚಾಯತ್ ಆದಾಯದಲ್ಲಿ ಅದು ಕಷ್ಟವಾಗುತ್ತಿದೆ. ಕಡವು ಇಲಾಖೆ ಹಾಗೂ ಶಾಸಕರಿಗೆ ಈ ವಿಷಯ ಗಮನಕ್ಕೆ ತರಲಾಗಿದೆ. – ಪದ್ಮರಾಜ, ಚನ್ನಗೊಂಡ ಗ್ರಾಮ ಪಂಚಾಯತ್ ಅಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.