Sagara: ಹೊಸ ಕಲ್ಲುಕ್ವಾರೆಗೆ ಅವಕಾಶ ಬೇಡ; ಎಸಿಗೆ ಮನವಿ
Team Udayavani, Sep 26, 2023, 3:31 PM IST
ಸಾಗರ: ತಾಲೂಕಿನ ಇರುವಕ್ಕಿ ಆಸುಪಾಸು ಹೊಸ ಕಲ್ಲುಕ್ವಾರೆಗೆ ಅವಕಾಶ ನೀಡದಂತೆ ಗ್ರಾಮಸ್ಥರು ಶಾಸಕ ಗೋಪಾಲಕೃಷ್ಣ ಬೇಳೂರಿಗೆ ಹಾಗೂ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಇರುವಕ್ಕಿ ಗ್ರಾಮದ ಸ.ನಂ. 30 ಮತ್ತು 31 ರಲ್ಲಿ ಹೊಸ ಕಲ್ಲುಕ್ವಾರೆ ಪ್ರಾರಂಭಿಸುವ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿರುವುದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಕಲ್ಲುಕ್ವಾರೆಗೆ ಪ್ರಸ್ತಾಪಿಸಿರುವ ಜಾಗದ ವ್ಯಾಪ್ತಿಯಲ್ಲಿಯೇ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಬರುತ್ತದೆ. ಶರಾವತಿ ನದಿಯ ಉಪನದಿಯ ದಂಡೆ ಇದಾಗಿದ್ದು, ಕೃಷಿಗೆ ನೀರು ಪೂರೈಕೆ ಈ ಉಪ ನದಿಯಿಂದ ಆಗುತ್ತಿದೆ. ಇಂತಹ ಜಾಗದ 500 ಮೀಟರ್ ಅಂತರದಲ್ಲಿ ಮನೆ, ಕೃಷಿ ಜಮೀನು, ತೋಟ ಇದೆ ಎಂದು ಮನವಿಯಲ್ಲಿ ಹೇಳಲಾಗಿದೆ.
ಈ ಜಾಗದಲ್ಲಿ ಕಲ್ಲುಕ್ವಾರೆ ಮಾಡಿದರೆ ಪರಿಸರ ನಾಶದ ಜೊತೆಗೆ ನೀರು ಮಲಿನವಾಗುತ್ತದೆ. ಅಕ್ಕಪಕ್ಕದ ನಿವಾಸಿಗಳಿಗೆ ಸಹ ವಾಯುಮಾಲಿನ್ಯದಿಂದ ಬದುಕಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗುತ್ತದೆ. ಆದ್ದರಿಂದ ಯಾವುದೇ ಕಾರಣಕ್ಕೂ ಇಲ್ಲಿ ಹೊಸದಾಗಿ ಕಲ್ಲುಕ್ವಾರೆ ಮಾಡಲು ಅವಕಾಶ ನೀಡಬಾರದು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಗ್ರಾಮಸ್ಥರಾದ ಮೇಘರಾಜ ಎಸ್., ಮೆಡಿಕಲ್ ಮಂಜುನಾಥ್, ಜಗದೀಶ್, ಪ್ರಶಾಂತ್, ಸತೀಶ್, ಲೋಕೇಶ್, ಗಣಪತಿ, ಜ್ಞಾನೇಶ್, ಸೋಮಶೇಖರ್, ಸಂತೋಷ್ ಇನ್ನಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಜಮೀನಿನ ವಿದ್ಯುತ್ ಪರಿವರ್ತಕ ವಿಚಾರದ ಗಲಾಟೆ ಕೊಲೆಯಲ್ಲಿ ಅಂತ್ಯ; ಆರೋಪಿಗಳ ಬಂಧನ
Sagara: ಕುವೆಂಪು ವಿವಿ ಭ್ರಷ್ಟಾಚಾರ; ತನಿಖೆಗೆ ರಾಜ್ಯಪಾಲರಿಗೆ ಮನವಿ
Thirthahalli: ಚುನಾವಣೆ ಸಮಯದಲ್ಲಿ ರಾಮ ರಾಮ – ವರ್ಷವಾದ ನಂತರ ರಾಮನಿಗೆ ನಾಮ..!?
Hosanagar: ನಾಪತ್ತೆಯಾದ 78 ದಿನದ ಬಳಿಕ ವ್ಯಕ್ತಿಯ ಮೃತದೇಹ ಪತ್ತೆ, ತನಿಖೆಗೆ ಪತ್ನಿಯ ಆಗ್ರಹ
Ripponpet ಬೀದಿ ನಾಯಿ ಕೊಂದು ಆಟೋಗೆ ಕಟ್ಟಿಕೊಂಡು ಎಳೆದೊಯ್ದ ಕ್ರೂರಿ
MUST WATCH
ಹೊಸ ಸೇರ್ಪಡೆ
Shimoga: ಜಮೀನಿನ ವಿದ್ಯುತ್ ಪರಿವರ್ತಕ ವಿಚಾರದ ಗಲಾಟೆ ಕೊಲೆಯಲ್ಲಿ ಅಂತ್ಯ; ಆರೋಪಿಗಳ ಬಂಧನ
Los Angeles: ಮತ್ತೊಂದು ಕಾಡ್ಗಿಚ್ಚು; 30 ಸಾವಿರಕ್ಕೂ ಹೆಚ್ಚು ಜನರ ಸ್ಥಳಾಂತರ
Threat Mail: ಹಾಸ್ಯ ನಟ ಕಪಿಲ್ ಶರ್ಮಾ ಸೇರಿದಂತೆ ನಾಲ್ವರು ಸೆಲೆಬ್ರಿಟಿಗಳಿಗೆ ಜೀವ ಬೆದರಿಕೆ
Karkala: ಸಾಣೂರಿನಲ್ಲಿ ಟೆಂಪೊಗೆ ಸರಕಾರಿ ಬಸ್ ಢಿಕ್ಕಿ, 10ಕ್ಕೂ ಅಧಿಕ ಮಂದಿಗೆ ಗಾಯ
Donald Trump: ಚೀನಾ ಆಮದು ಮೇಲೆ ಶೇ.10 ಸುಂಕ… ನೂತನ ಅಧ್ಯಕ್ಷ ಟ್ರಂಪ್