Sagara: ಶ್ರೀರಾಮಚಂದ್ರನ ಪ್ರಾಣಪ್ರತಿಷ್ಠೆ; ನಗರದ ಹಲವೆಡೆ ಸಂಭ್ರಮ
Team Udayavani, Jan 22, 2024, 3:47 PM IST
ಸಾಗರ: ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನ ಪ್ರಾಣಪ್ರತಿಷ್ಠೆ ಹಿನ್ನೆಲೆ ಸೋಮವಾರ ಸಾಗರ ನಗರ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಭಕ್ತರು ಶ್ರೀರಾಮನ ಬೃಹತ್ ಫ್ಲೆಕ್ಸ್‌ಗಳನ್ನು ಅಳವಡಿಸಿ, ಪ್ರಮುಖ ಬೀದಿಗಳಿಗೆ ಕೇಸರಿ ಬಂಟಿಂಗ್ಸ್ ಹಾಕುವ ಜೊತೆಗೆ ತಳಿರು ತೋರಣದ ಮೂಲಕ ಶೃಂಗಾರ ಮಾಡಿ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮವನ್ನು ಸಂಭ್ರಮಿಸಿದರು.
ನಗರದ ಗಾಂಧಿಮಂದಿರದಲ್ಲಿ ಕಾಂಗ್ರೆಸ್ ವತಿಯಿಂದ ಶ್ರೀರಾಮನ ಬೃಹತ್ ಭಾವಚಿತ್ರ ಹಾಗೂ ಮಹಾತ್ಮಾ ಗಾಂಧೀಜಿಯವರ ಭಾವಚಿತ್ರಕ್ಕೆ ವಿಶೇಷ ಪೂಜೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಆರ್.ಜಯಂತ್, ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯುತ್ತಿರುವ ಈ ಸಂದರ್ಭದಲ್ಲಿ ನಾವು ಕಾಂಗ್ರೆಸ್ ಕಚೇರಿಯಲ್ಲಿ ವಿಶೇಷ ಕಾರ್ಯಕ್ರಮ ನಡೆಸಿ ದೇಶಕ್ಕೆ ಒಳ್ಳೆಯದಾಗಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದೇವೆ ಎಂದರು.
ಮಹಾತ್ಮಾ ಗಾಂಧೀಜಿಯವರು ರಾಮನ ಪರಮಭಕ್ತರಾಗಿದ್ದು, ರಾಮರಾಜ್ಯ ಸ್ಥಾಪನೆ ಕನಸು ಕಂಡಿದ್ದರು. ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ರಾಮ ಭಜನೆಯನ್ನು ಸಾಮೂಹಿಕವಾಗಿ ನಡೆಸುತ್ತಿದ್ದರು. ಅವರಿಗೆ ಗುಂಡೇಟು ಬಿದ್ದ ಕೊನೆ ಕ್ಷಣದಲ್ಲೂ ಅವರು ಹೇ ರಾಮ್ ಎಂದೇ ಪ್ರಾಣ ಬಿಟ್ಟರು. ನಾವು ಏನೇ ತೊಂದರೆಯಾದರೂ ಮೊದಲು ಅಮ್ಮ ಎಂದು ಉಚ್ಚರಿಸುತ್ತೇವೆ. ಮಹಾತ್ಮಾ ಗಾಂಧೀಜಿಯವರು ಎಂತಹ ದೈವಭಕ್ತರಾಗಿದ್ದರೂ ಮತ್ತು ಶ್ರೀರಾಮನ ಆದರ್ಶವನ್ನು ತಮ್ಮ ಹೃದಯಾಂತರಾಳದಿಂದ ಹೇಗೆ ಗೌರವಿಸುತ್ತಿದ್ದರು ಎನ್ನುವುದು ಇದರಿಂದ ತಿಳಿಯುತ್ತದೆ ಎಂದು ಹೇಳಿದರು.
ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಪ್ರಮುಖರಾದ ಐ.ಎನ್.ಸುರೇಶಬಾಬು, ಚೇತನರಾಜ್ ಕಣ್ಣೂರು, ಜ್ಯೋತಿ ಕೋವಿ, ಅನಿತಾ ಕುಮಾರಿ, ಮಹಾಬಲ ಕೌತಿ, ಸೋಮಶೇಖರ ಲ್ಯಾವಿಗೆರೆ, ಮಧುಮಾಲತಿ, ಪರಿಮಳ, ಗಣಪತಿ ಮಂಡಗಳಲೆ, ಉಮೇಶ್, ಆನಂದ ಭೀಮನೇರಿ, ಮೈಕೆಲ್ ಡಿಸೋಜ, ದಿನೇಶ್ ಡಿ., ಅಶೋಕ ಬೇಳೂರು, ಚಿನ್ಮಯ್, ನಾಗರತ್ನ ಇನ್ನಿತರರು ಹಾಜರಿದ್ದರು.
ವಿಶ್ವ ಹಿಂದೂ ಪರಿಷತ್‌ನಿಂದ ಸಂಭ್ರಮಾಚರಣೆ: ಇಲ್ಲಿನ ಸುಭಾಷ್ ನಗರ ಚಿಲುಮೆಕಟ್ಟೆ ಭೂತೇಶ್ವರ ದೇವಸ್ಥಾನದ ಸಮೀಪ ವಿಶ್ವಹಿಂದೂ ಪರಿಷತ್ ಮತ್ತು ಭಜರಂಗ ದಳದ ವತಿಯಿಂದ ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಶ್ರೀರಾಮನಿಗೆ ವಿಶೇಷ ಪೂಜೆ ಹಾಗೂ ಭಜನೆ ಕಾರ್ಯಕ್ರಮ ನಡೆಯಿತು. ನಂತರ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ವಿಶ್ವಹಿಂದೂ ಪರಿಷತ್‌ನ ಜಿಲ್ಲಾಧ್ಯಕ್ಷೆ ಪ್ರತಿಮಾ ಜೋಗಿ, ಇದೊಂದು ಐತಿಹಾಸಿಕ ಕ್ಷಣವಾಗಿದೆ. ದೇಶವಾಸಿಗಳ ಶತಮಾನದ ಕನಸನ್ನು ಪ್ರಧಾನಿ ನರೇಂದ್ರ ಮೋದಿಯವರು ನನಸು ಮಾಡಿದ್ದಾರೆ. ಮರ್ಯಾದಾ ಪುರೊಷೋತ್ತಮ ಶ್ರೀರಾಮಚಂದ್ರ ಪ್ರಭುವಿನ ಪ್ರತಿಷ್ಠಾಪನೆ ನೆರವೇರಿರುವುದು ದೇಶದ ಸನಾತನ ಹಿಂದೂ ಧರ್ಮಿಗಳ ಶತಶತಮಾನದ ಆಸೆ ಈಡೇರಿದೆ ಎಂದರು.
ಈ ಸಂದರ್ಭದಲ್ಲಿ ಪುರುಷೋತ್ತಮ್, ಕಿರಣ್ ಗೌಡ, ಮೈತ್ರಿ ಪಾಟೀಲ್, ಶೇಖರ್ ಇನ್ನಿತರರು ಹಾಜರಿದ್ದರು. ಬಿಜೆಪಿ ನಗರ ಮಂಡಲ ಅಧ್ಯಕ್ಷ ಗಣೇಶಪ್ರಸಾದ್, ಪ್ರಮುಖರಾದ ಚೇತನ್, ರವೀಂದ್ರ ಬಿ.ಟಿ., ಅರುಣ ಕುಗ್ವೆ, ಸತೀಶ್ ಮೊಗವೀರ ಇನ್ನಿತರರು ಹಾಜರಿದ್ದರು.
ವಿವಿಧ ಕಡೆ ವಿಶೇಷ ಪೂಜೆ: ಇಲ್ಲಿನ ವಾಸವಿ ಯುವಜನ ಸಂಘದ ವತಿಯಿಂದ ಸೋಮವಾರ ಅಯೋಧ್ಯೆಯಲ್ಲಿ ಶ್ರೀರಾಮದೇವರ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ನಗರೇಶ್ವರ ದೇವಸ್ಥಾನದಲ್ಲಿ ರಾಮತಾರಕ ಹವನ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ಏರ್ಪಡಸಲಾಗಿತ್ತು.
ಸಾಗರದ ಶ್ರೀ ಮಹಾಗಣಪತಿ ದೇವಸ್ಥಾನ, ರಥಬೀದಿಯ ರಾಮಮಂದಿರ, ಅಣಲೆಕೊಪ್ಪದ ಶ್ರೀಪ್ರಸಾದ ಗಣಪತಿ ದೇವಸ್ಥಾನ, ಶಿವಪ್ಪನಾಯಕ ನಗರದ ದೈವಜ್ಞ ಸಮಾಜದ ರಾಮ ದೇವಸ್ಥಾನ, ಉಪ್ಪಾರ ಸಮಾಜದ ವೀರಾಂಜನೇಯ ದೇವಸ್ಥಾನ, ಸತ್ಯನಾರಾಯಣ ಸ್ವಾಮಿ ದೇವಸ್ಥಾನ, ವೆಂಕಟರಮಣಸ್ವಾಮಿ ದೇವಸ್ಥಾನ, ಗುಡಿಗಾರ ಸಮಾಜದ ಶ್ರೀರಾಮ ದೇವಸ್ಥಾನ, ವರದಪುರದ ಶ್ರೀಧರಾಶ್ರಮ, ವರದಾಮೂಲ, ಸಿಗಂದೂರಿನ ಚೌಡೇಶ್ವರಿ ದೇವಸ್ಥಾನ ಒಳಗೊಂಡಂತೆ ನಗರ ಹಾಗೂ ಗ್ರಾಮಾಂತರ ಪ್ರದೇಶಗಳ ಎಲ್ಲಾ ದೇವಾಲಯಗಳಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆ ವಿಶೇಷ ಪೂಜೆ ನಡೆಸಿ ಸಂಭ್ರಮಿಸಲಾಯಿತು.
ನಗರದ ಎಲ್ಲ ವೃತ್ತಗಳಲ್ಲಿ ವಿವಿಧ ಸಂಘ ಸಂಸ್ಥೆಗಳು ಬೃಹತ್ ಭಾವಚಿತ್ರ ಅಳವಡಿಸಿ, ಪಾನಕ, ಕೋಸಂಬರಿ ಹಂಚಿ ಸಂಭ್ರಮಿಸಲಾಯಿತು. ನಗರದ ಪ್ರಮುಖ ವೃತ್ತಗಳಲ್ಲಿ ಟಿವಿ ಅಳವಡಿಸಿ ನೇರಪ್ರಸಾರದ ವ್ಯವಸ್ಥೆ ಮಾಡಿದ್ದರು. ಬಹುತೇಕ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.