ಸಾಗರ: ಸರ್ಕಾರಿ ಶಾಲಾ ಮಕ್ಕಳಿಗೆ ಸಮವಸ್ತ್ರ, ಶೂ ವಿತರಿಸದಿರುವುಕ್ಕೆ ಖಂಡನೆ
ಸಾರ್ವಜನಿಕರ ಬಳಿ ಭಿಕ್ಷಾಟನೆ ಮಾಡಿ ಪ್ರತಿಭಟನೆ
Team Udayavani, Sep 8, 2022, 4:13 PM IST
ಸಾಗರ: ಇಲ್ಲಿನ ತಾಲೂಕು ರೈತ ಸಂಘದ ಡಾ. ಎಚ್.ಗಣಪತಿಯಪ್ಪ ಬಣದ ಆಶ್ರಯದಲ್ಲಿ ಆಮ್ ಆದ್ಮಿ ಪಕ್ಷದ ಸಹಕಾರದೊಂದಿಗೆ ಸರ್ಕಾರಿ ಶಾಲೆಯ ಮಕ್ಕಳಿಗೆ ಶೂ ಸಾಕ್ಸ್ ವಿತರಣೆ ಮಾಡದಿರುವುದು, ಎಲ್ಲ ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದಲ್ಲಿ ಸಮವಸ್ತ್ರ ಕೊಡದಿರುವ ನೀತಿಯನ್ನು ಖಂಡಿಸಿ ಗುರುವಾರ ಸಾರ್ವಜನಿಕರ ಬಳಿ ಭಿಕ್ಷಾಟನೆ ಮಾಡುವ ಮೂಲಕ ದೇಣಿಗೆ ಸಂಗ್ರಹಿಸುವ ವಿನೂತನ ಪ್ರತಿಭಟನೆ ನಡೆಸಲಾಯಿತು.
ಗಣಪತಿ ದೇವಸ್ಥಾನದಿಂದ ಹೊರಟ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಸಾರ್ವಜನಿಕರು ಹಾಗೂ ಅಂಗಡಿ ಮಾಲೀಕರ ಬಳಿ ಸರ್ಕಾರ ಆರ್ಥಿಕ ಸಂಕಷ್ಟದಲ್ಲಿದೆ. ಶೈಕ್ಷಣಿಕ ಚಟುವಟಿಕೆಗೆ ಮೂಲಭೂತ ಸೌಲಭ್ಯ ಒದಗಿಸಲು ಹಣದ ನೆರವು ನೀಡಿ ಎಂದು ಭಿಕ್ಷೆ ಬೇಡುವ ಜೊತೆಗೆ ಹಣ ಸಂಗ್ರಹಿಸಲಾಯಿತು. ನಂತರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ, ಉಪವಿಭಾಗಾಧಿಕಾರಿಗಳ ಕಚೇರಿಗೆ ಮನವಿ ಸಲ್ಲಿಸಲಾಯಿತು.
ಕಳೆದ ಮೂರು ವರ್ಷಗಳಿಂದ ಸರ್ಕಾರಿ ಶಾಲೆ ಮಕ್ಕಳಿಗೆ ಶೂ ಸಾಕ್ಸ್ ವಿತರಣೆ ಮಾಡಿಲ್ಲ. ಶಾಲೆ ಪ್ರಾರಂಭವಾಗಿ ಅರ್ಧ ವರ್ಷ ಕಳೆದರೂ ಮಕ್ಕಳಿಗೆ ಪೂರ್ಣ ಪ್ರಮಾಣದಲ್ಲಿ ಸಮವಸ್ತ್ರವನ್ನು ವಿತರಣೆ ಮಾಡಿಲ್ಲ. ಸರ್ಕಾರ ಆರ್ಥಿಕ ಸಂಕಷ್ಟದಲ್ಲಿರುವುದನ್ನು ಮನಗಂಡ ರೈತ ಸಂಘ ಸಾಗರದ ನಾಗರೀಕರಲ್ಲಿ ಭಿಕ್ಷೆ ಎತ್ತುವ ಮೂಲಕ ಹಣ ಸಂಗ್ರಹಿಸಿ ಉಪವಿಭಾಗಾಧಿಕಾರಿಗಳ ಕಚೇರಿ ಮೂಲಕ ಸರ್ಕಾರಕ್ಕೆ ಸಲ್ಲಿಸುತ್ತಿದೆ. ಒಂದು ವಾರದಲ್ಲಿ ಮಕ್ಕಳಿಗೆ ಶೂ ಸಾಕ್ಸ್, ಸಮವಸ್ತ್ರ ಕೊಡದೆ ಹೋದಲ್ಲಿ ಭಿಕ್ಷೆ ಬೇಡಿದ ಹಣದಲ್ಲಿ ರಾಜ್ಯದ ಎಲ್ಲ ಸಚಿವರಿಗೆ, ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸಮವಸ್ತ್ರವನ್ನು ಖರೀದಿಸಿ ಪೋಸ್ಟ್ ಮಾಡಲಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ರೈತ ಸಂಘದ ಪ್ರಮುಖರಾದ ಭದ್ರೇಶ್ ಬಾಳಗೋಡು, ಶಶಿಕುಮಾರ್, ಸೂರಜ್, ಚಂದ್ರಶೇಖರ್, ದೇವರಾಜ್, ಆಮ್‌ಆದ್ಮಿ ಪ್ರಮುಖರಾದ ವಿಜಯಕುಮಾರ್, ಎಲ್.ವಿ.ಸುಭಾಷ್, ರಮೇಶ್, ಪ್ರಮುಖರಾದ ಜಿ.ಟಿ.ಸತ್ಯನಾರಾಯಣ, ಡಿ.ದಿನೇಶ್, ಓಂಕಾರ್ ಎಸ್.ವಿ., ಯಶವಂತ ಪಣಿ, ಶ್ರೀಧರ ಮೂರ್ತಿ ಇನ್ನಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ರಿಪ್ಪನ್ ಪೇಟೆ ಸಮೀಪ ಹಿಟ್ ಅಂಡ್ ರನ್; ಬೈಕ್ ಸವಾರ ಸಾವು
Shivamogga: ಮುಂದುವರಿದ ಕರಡಿಗಳ ಹಾವಳಿ; ಸ್ಥಳೀಯರಲ್ಲಿ ತೀವ್ರ ಆತಂಕ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Shimoga: ಮೊಬೈಲ್ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belthangady: ಶಾಲೆಯ ಮಕ್ಕಳು ನೆಟ್ಟಿದ್ದ ಹೂ ಗಿಡಗಳ ಕುಂಡಗಳನ್ನು ಪುಡಿಗೈದ ಕಿಡಿಗೇಡಿಗಳು
Bantwal: ಸಾಹಿತ್ಯವನ್ನು ಮಕ್ಕಳ ಮನ ಮುಟ್ಟುವಂತೆ ಬೋಧಿಸುವ ಶಿಕ್ಷಕರು ಬೇಕು
Shimoga: ರಿಪ್ಪನ್ ಪೇಟೆ ಸಮೀಪ ಹಿಟ್ ಅಂಡ್ ರನ್; ಬೈಕ್ ಸವಾರ ಸಾವು
TeamIndia; ಮುಗಿಯಿತಾ ರೋಹಿತ್ ವೃತ್ತಿಜೀವನ? ಮೆಲ್ಬೋರ್ನ್ ಗೆ ಬಂದ ಅಗರ್ಕರ್ ಹೇಳಿದ್ದೇನು?
Yash; ಸಂಭಾವನೆ ವಿಚಾರದಲ್ಲಿ ಹೊಸ ದಾಖಲೆ ಬರೆದ ರಾಕಿಂಗ್ ಸ್ಟಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.