ಸಿಗಂದೂರು ಚೌಡೇಶ್ವರಿ ಜಾತ್ರೆಗೆ ಚಾಲನೆ
ಚಂಡಿಕಾ ಹೋಮ, ವಿವಿಧ ಧಾರ್ಮಿಕ ಕಾರ್ಯಕ್ರಮ ಸಾವಿರಾರು ಭಕ್ತರಿಂದ ದರ್ಶನ
Team Udayavani, Jan 15, 2020, 4:37 PM IST
ಸಾಗರ: ತಾಲೂಕಿನ ಸಿಗಂದೂರು ಕ್ಷೇತ್ರದ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವಕ್ಕೆ ಮಂಗಳವಾರ ಚಾಲನೆ ನೀಡಲಾಯಿತು. ಇಲ್ಲಿನ ಪ್ರಧಾನ ಅರ್ಚಕ ಶೇಷಗಿರಿ ಭಟ್ ನೇತೃತ್ವದಲ್ಲಿ ನಡೆದ ಪೂಜಾ ಕಾರ್ಯಕ್ರಮಗಳಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.
ಸಾಗರ ಕ್ಷೇತ್ರದ ಶಾಸಕ ಎಚ್. ಹಾಲಪ್ಪ ಕುಟುಂಬ ಸಮೇತ ವಿವಿಧ ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾದರು. ಚೌಡೇಶ್ವರಿಯ ಮೂಲ ಸ್ಥಾನವಾದ ಸೀಗೇಕಣಿವೆಯಲ್ಲಿ ಬೆಳಗ್ಗೆ 7 ಗಂಟೆಗೆ ಪ್ರಥಮ ಪೂಜೆ ನಡೆಯಿತು. ಕುಂಭ ಕಳಸ ಹೊತ್ತ ಮಹಿಳೆಯರನ್ನು ಒಳಗೊಂಡ ವೈವಿಧ್ಯಮಯ ಕಲಾ ತಂಡಗಳೊಂದಿಗೆ ಜ್ಯೋತಿ ರೂಪದಲ್ಲಿ ಆಗಮಿಸಿದ ದೇವಿಯ ಮೆರವಣಿಗೆಯನ್ನು ಕ್ಷೇತ್ರದಲ್ಲಿ ಬರಮಾಡಿಕೊಳ್ಳಲಾಯಿತು. ದೇವಿಗೆ ವಿಶೇಷ ಹೂವಿನ ಹಾಗೂ ಆಭರಣ ಅಲಂಕಾರ ಮಾಡಲಾಗಿತ್ತು. ಹಲವು ಪೂಜೆಗಳು, ಚಂಡಿಕಾ ಹೋಮ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಅನ್ನ ದಾಸೋಹ ನಡೆಸಲಾಯಿತು.
ಸಂಜೆ 5.30ರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ 10.30ಕ್ಕೆ ಸಿಗಂದೂರು ಮೇಳದವರಿಂದ ಯಕ್ಷಗಾನ ಪ್ರದರ್ಶನ ನಡೆಯಿತು. ಸಿಗಂದೂರು ರಾಮಪ್ಪ ದಂಪತಿ, ಸಾಗರ ನಗರಸಭಾ ಸದಸ್ಯೆ ಮೈತ್ರಿ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ
MUST WATCH
ಹೊಸ ಸೇರ್ಪಡೆ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Viral: ಇದು ಇರುವೆಗಳ ಎಂಜಿನಿಯರಿಂಗ್ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ
Indian Cricket: ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ
Nature: ಶ್ರೀಮಂತನಾದರೂ, ಬಡವನಾದರೂ ಪ್ರಕೃತಿಗೆ ಅವಲಂಬಿಯೇ ಅಲ್ಲವೇ?
Sandalwood: ‘ಕೋರ’ ಚಿತ್ರದ ಟ್ರೇಲರ್ ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.