ಅಧ್ಯಕ್ಷರ ಕೊಠಡಿಗೆ ಬೀಗ ಹಾಕಲು ನಿರ್ಧಾರ
ತಾಪಂ ಅಧ್ಯಕ್ಷರ ವಿರುದ್ಧದ ಅವಿಶ್ವಾಸಕ್ಕೆ ಬೆಲೆ ಇಲ್ಲವೇ?: ಜ್ಯೋತಿ ಕೋವಿ
Team Udayavani, Apr 19, 2020, 1:36 PM IST
ಸಾಗರ: ತಾಪಂ ಸದಸ್ಯೆ ಜ್ಯೋತಿ ಕೋವಿ ಸುದ್ದಿಗೋಷ್ಠಿ ನಡೆಸಿದರು.
ಸಾಗರ: ತಾಪಂ ಅಧ್ಯಕ್ಷ ಬಿ.ಎಚ್. ಮಲ್ಲಿಕಾರ್ಜುನ ಹಕ್ರೆ ವಿರುದ್ಧ ಅವಿಶ್ವಾಸ ನಿರ್ಣಯ ಮಾಡಿ ಒಂದು ತಿಂಗಳು ಕಳೆದಿದೆ. ಈ ಸಂಬಂಧ ವರದಿ ಜಿಲ್ಲಾಧಿಕಾರಿ, ಜಿಪಂ ಸಿಇಒಗೆ ಸಲ್ಲಿಕೆಯಾಗಿದ್ದರೂ ಕ್ರಮ ತೆಗೆದುಕೊಳ್ಳದಿರುವುದು ಖಂಡನೀಯ ಎಂದರು ತಾಪಂ ಸದಸ್ಯೆ ಜ್ಯೋತಿ ಕೋವಿ ಹೇಳಿದರು.
ನಗರದ ಅಣಲೆಕೊಪ್ಪದ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋಮವಾರ ಅವಿಶ್ವಾಸ ಮಂಡಿಸಿರುವ 11 ತಾಪಂ ಸದಸ್ಯರು ಒಟ್ಟಾಗಿ ತಾಪಂ ಅಧ್ಯಕ್ಷರ ಕೊಠಡಿಗೆ ಬೀಗ ಹಾಕಿ ಆಕ್ಷೇಪ ವ್ಯಕ್ತಪಡಿಸುತ್ತೇವೆ ಎಂದು ಅವಿಶ್ವಾಸ ಸಂದರ್ಭದಲ್ಲಿ ಎರಡು ಸಭೆ ನಡೆದಿದೆ. ಉಪಾಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮೂವರನ್ನು ಅಮಾನತು ಮಾಡಿರುವುದು ಕಾನೂನು ಬಾಹೀರವಾಗಿದೆ. ನಂತರ ನಾವು ಹಿರಿಯ ಸದಸ್ಯರನ್ನು ಅಧ್ಯಕ್ಷರನ್ನಾಗಿ ಮಾಡಿ ಸಭೆ ನಡೆಸಿದ್ದೇವೆ. ಯಾವ ಸಭೆ ಅಧಿಕೃತ ಎಂದು ಜಿಲ್ಲಾಧಿಕಾರಿಗಳು, ಜಿಪಂ ಸಿಇಒ ಸ್ಪಷ್ಟಪಡಿಸಬೇಕು. ಅಲ್ಲಿಯವರೆಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡಬೇಕೆಂದು ಒತ್ತಾಯಿಸಿದರು.
ಸಮಿತಿ ಅಧ್ಯಕ್ಷ ಕಲಸೆ ಚಂದ್ರಪ್ಪ, ಸದಸ್ಯರಾದ ಪ್ರಭಾವತಿ ಚಂದ್ರಕಾಂತ್, ಸುವರ್ಣ ಟೀಕಪ್ಪ, ದೇವೇಂದ್ರಪ್ಪ ಯಲಕುಂದ್ಲಿ, ರಘುಪತಿ ಭಟ್, ಎಚ್. ಕೆ.ಪರಶುರಾಮ್ ಹಾಜರಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.