Sagara: ಪ್ರವಾಸಿ ಬಸ್ ಅಪಘಾತ; 15ಕ್ಕೂ ಹೆಚ್ಚು ಮಂದಿಗೆ ಗಾಯ
Team Udayavani, Dec 15, 2024, 5:25 PM IST
ಸಾಗರ: ತಾಲೂಕಿನ ಜೋಗ ಕಾರ್ಗಲ್ ಸಮೀಪದ ಅರಲಗೋಡು ರಸ್ತೆ ತಿರುವಿನಲ್ಲಿ ಮಂಗಳೂರಿನಿಂದ ಜೋಗಕ್ಕೆ ಬಂದಿದ್ದ ಪ್ರವಾಸಿ ಬಸ್ಸು ಅಪಘಾತವಾಗಿದ್ದು, 15ಕ್ಕೂ ಹೆಚ್ಚು ಜನರಿಗೆ ತೀವ್ರವಾಗಿ ಗಾಯಗಳಾದ ಘಟನೆ ಭಾನುವಾರ(ಡಿ.15) ನಡೆದಿದೆ.
ಅರಳಗೋಡು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಬಸ್ಸು ಪಲ್ಟಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದು, ಬಸ್ಸಿನಲ್ಲಿ ಸುಮಾರು 55 ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿದೆ. ಹೆಚ್ಚಿನ ಪ್ರಯಾಣಿಕರಿಗೆ ತೀವ್ರವಾಗಿ ಗಾಯವಾಗಿದ್ದು, ಗಾಯಾಳುಗಳನ್ನು ಕಾರ್ಗಲ್ ಆಸ್ಪತ್ರೆಗೆ ಹಾಗೂ ಸಾಗರ ಉಪವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕಾರ್ಗಲ್‌ನ ಸಾಧಿಕ್ ಮತ್ತವರ ಸ್ನೇಹಿತರ ಸಹಕಾರದೊಂದಿಗೆ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಶಾಸಕರ ಆಪ್ತ ಕಾರ್ಯದರ್ಶಿ ಶ್ರೀನಿವಾಸ್ ಮೂರ್ತಿ, ನಗರಸಭೆ ಸದಸ್ಯೆ ಮಧುಮಾಲತಿ, ಲಿಂಗರಾಜು ಇತರರು ಸಾಗರ ಆಸ್ಪತ್ರೆಯಲ್ಲಿ ಮೇಲ್ವಿಚಾರಣೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಹಿರಿಯ ಮಾತೆ ಭಾಗ್ಯ ಸತ್ಯನಾರಾಯಣ್‌ಗೆ ಶ್ರೀಕೃಷ್ಣ ಗೀತಾನುಗ್ರಹ ಪ್ರಶಸ್ತಿ ಪ್ರದಾನ
Davanagere: ಮುಂಬರುವ ಫೆಬ್ರವರಿಯಲ್ಲಿ ಬಿಎಸ್‌ವೈ ಜನ್ಮದಿನ ಅದ್ಧೂರಿ ಆಚರಣೆ: ರೇಣುಕಾಚಾರ್ಯ
Waqf: ಅನ್ವರ್ ಮಾಣಿಪ್ಪಾಡಿಗೆ ಲಂಚ ನೀಡಲು ಯತ್ನ: ಆರೋಪ ತಳ್ಳಿ ಹಾಕಿದ ವಿಜಯೇಂದ್ರ
‘Pushpa 2: 10 ದಿನಗಳಲ್ಲಿ ಹೊಸ ದಾಖಲೆಯ ಕಲೆಕ್ಷನ್ ಕಂಡು ಮುನ್ನುಗ್ಗುತ್ತಿರುವ ಪುಷ್ಪ 2
Sambhal; ಮತ್ತೆ ತೆರೆದ ದೇವಾಲಯ ಇತಿಹಾಸದ ಸತ್ಯವನ್ನು ಪ್ರತಿನಿಧಿಸುತ್ತದೆ: ಸಿಎಂ ಯೋಗಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.