Sagara ತಹಶೀಲ್ದಾರ್‌ರಿಂದ ಕಿರುಕುಳ ಆರೋಪ: ವಿಎ ಆತ್ಮಹತ್ಯೆ ಯತ್ನ
Team Udayavani, Jul 11, 2024, 5:11 PM IST
ಸಾಗರ: ತಹಶೀಲ್ದಾರ್‌ರ ಕಿರುಕುಳದಿಂದ ಬೇಸತ್ತಿರುವ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಮುಂದಾಗಿರುವುದಾಗಿ ಆರೋಪಿಸಿರುವ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ತಹಶೀಲ್ದಾರರ ಕಚೇರಿಯಲ್ಲಿಯೇ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿರುವ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.
ಕಳೆದ ಮೂರ್ನಾಲ್ಕು ವರ್ಷದಿಂದ ಅರೆಹದ ವೃತ್ತದಲ್ಲಿ ಗ್ರಾಮ ಲೆಕ್ಕಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವಿಮಲಾ ಎನ್ನುವವರು ಗುರುವಾರ ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಇವರ ಬಳಿಯಲ್ಲಿಯೇ ಡೆತ್‌ನೋಟ್ ಸಿಕ್ಕಿದ್ದು, ಆರೋಗ್ಯದ ಸಮಸ್ಯೆಯಿದ್ದರೂ ತಹಶೀಲ್ದಾರರು ದೂರದ ಊರಿನಲ್ಲಿ ಕೆಲಸಕ್ಕೆ ಹಾಕಿದ್ದಾರೆ. ಬದಲಾಯಿಸಿಕೊಡಲು ಒಪ್ಪುತ್ತಿಲ್ಲ. ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ.
ಕಚೇರಿಯಲ್ಲೇ ಅಸ್ವಸ್ಥರಾದ ಅವರನ್ನು ಕೂಡಲೇ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ಕರೆದೊಯ್ಯಲಾಗಿದೆ.
ಪೇಟೆ ಠಾಣೆ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿದ್ದು, ವಿಚಾರಣೆ ಪ್ರಾರಂಭಿಸಿದ್ದಾರೆ.
ತ್ಯಾಗರ್ತಿ ಮೂಲದ ವಿಮಲಾ ಕಳೆದ ಮೂರ್ನಾಲ್ಕು ವರ್ಷದಿಂದ ಅರೆಹದ ವೃತ್ತದಲ್ಲಿ ಗ್ರಾಮ ಲೆಕ್ಕಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಜತೆಯಲ್ಲಿ ಮರತ್ತೂರು ಗ್ರಾಮ ಲೆಕ್ಕಾಧಿಕಾರಿಯಾಗಿಯೂ ಕೆಲಸ ಮಾಡುವಂತೆ ತಹಶೀಲ್ದಾರರು ಸೂಚಿಸಿದ್ದರು. ಆದರೆ ಚುನಾವಣಾ ಸಂದರ್ಭದಲ್ಲಿ ಆರೋಗ್ಯದ ಸಮಸ್ಯೆಯಿಂದಾಗಿ ರಜೆ ಹಾಕಿದ್ದರು. ಈ ಹಿನ್ನೆಲೆಯಲ್ಲಿ ವಿಮಲಾರನ್ನು 15 ದಿನಗಳ ಕಾಲ ಬರೂರು ವೃತ್ತಕ್ಕೆ ವರ್ಗಾಯಿಸಲಾಗಿತ್ತು. ಆರೋಗ್ಯ ಸುಧಾರಿಸಿದ ಬಳಿಕ ಮೊದಲಿನ ಸ್ಥಾನಕ್ಕೆ ಹಾಜರಾಗುವಂತೆ ತಹಶೀಲ್ದಾರರು ನಿರ್ದೇಶಿಸಿದ್ದರು ಎಂದು ಕಚೇರಿ ಸಿಬ್ಬಂದಿ ತಿಳಿಸಿದ್ದಾರೆ.
ಗುರುವಾರ ಬೆಳಗ್ಗೆ ಅರೆಹದ ವೃತ್ತದ ಕಚೇರಿಗೆ ಭೇಟಿ ನೀಡಿದ್ದ ವಿಮಲಾರವರು ಮಧ್ಯಾಹ್ನ ತಹಶೀಲ್ದಾರರ ಕಚೇರಿಯಲ್ಲಿ ಮಾತ್ರೆ ಸೇವಿಸಿದ್ದಾರೆ. ಅಲ್ಲದೆ ತಹಶೀಲ್ದಾರರು ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆ. ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದು, ಮನೆಗೆ ಹತ್ತಿರವಿರುವ ಬರೂರು ವೃತ್ತಕ್ಕೆ ವರ್ಗಾಯಿಸುವಂತೆ ವಿನಂತಿಸಿಕೊಂಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಅರೆಹದದ ಜತೆಯಲ್ಲಿ ಮರತ್ತೂರು ವೃತ್ತವನ್ನೂ ನಿರ್ವಹಿಸುವಂತೆ ನಿರಂತರವಾಗಿ ಒತ್ತಡ ಹೇರುತ್ತಿದ್ದರು. ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದು ರಜೆ ಕೊಡುವಂತೆ ಮನವಿ ಮಾಡಿಕೊಂಡಿದ್ದರೂ, ಉಪ ತಹಶೀಲ್ದಾರರ ಮೂಲಕ ನೋಟೀಸ್ ಕೊಡುತ್ತಿದ್ದಾರೆ. ಇದಕ್ಕಾಗಿ ಮನನೊಂದು ಆತ್ಮಹತ್ಯೆಗೆ ಮುಂದಾಗಿರುವುದಾಗಿ ಅವರು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.