![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Feb 26, 2023, 6:25 AM IST
ಶಿವಮೊಗ್ಗ: ಏಳನೇ ವೇತನ ಆಯೋಗದ ಮಧ್ಯಂತರ ವರದಿ ಅನುಷ್ಠಾನ ಕುರಿತು ಸರ್ಕಾರಿ ಆದೇಶ ಹೊರಡಿಸಿದರೆ ಮಾತ್ರ ಈಗಾಗಲೇ ಕರೆನೀಡಿರುವ ಮುಷ್ಕರ ವಾಪಸ್ ಪಡೆಯಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಸ್ಪಷ್ಪಪಡಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದಿನಿಂದಲೂ ಏಳನೇ ವೇತನ ಆಯೋಗದಿಂದ ಶೀಘ್ರ ಮಧ್ಯಂತರ ವರದಿ ಪಡೆದು ಜಾರಿ ಮಾಡುವಂತೆ ಒತ್ತಾಯಿಸುತ್ತಲೇ ಬರಲಾಗಿದೆ. ಮುಖ್ಯಮಂತ್ರಿಗಳು ಮಂಡಿಸಿದ ಬಜೆಟ್‌ನಲ್ಲಿ ಈ ಬಗ್ಗೆ ಘೋಷಣೆ ಮಾಡುವ ನಿರೀಕ್ಷೆ ಇತ್ತಾದರೂ ಅದು ಹುಸಿಯಾಗಿದೆ.
ಹಾಗಾಗಿ ಅನಿವಾರ್ಯವಾಗಿ ಮಾ.1ರಿಂದ ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಸರ್ಕಾರಿ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದಾರೆ ಎಂದರು.
ಈಗಾಗಲೇ ಫೆ.21ರಂದು ಬೆಂಗಳೂರಿನಲ್ಲಿ 200 ವೃಂದ ಸಂಘಗಳು ಸೇರಿದಂತೆ ಎಲ್ಲ ಸರ್ಕಾರಿ ನೌಕರರ ಸಂಘಟನೆಗಳ ಐದು ಸಾವಿ ರಕ್ಕೂ ಹೆಚ್ಚು ಪ್ರತಿನಿಧಿಗಳು ಸೇರಿ ಸಭೆ ನಡೆಸಲಾಗಿದೆ.
ಕರ್ತವ್ಯಕ್ಕೆ ಗೈರಾಗುವ ಮೂಲಕ ಪ್ರತಿಭಟನೆ ನಡೆಸುವ ಸರ್ವಸಮ್ಮತ ತೀರ್ಮಾನ ಕೈಗೊಳ್ಳಲಾಗಿದೆ. ಅದರಂತೆ ಗ್ರಾಮ ಪಂಚಾಯ್ತಿಯಿಂದ ಹಿಡಿದು ವಿಧಾನಸೌಧದವರೆಗೆ ಎಲ್ಲ ಸೇವೆಗಳಿಗೂ ನೌಕರರು ಗೈರು ಹಾಜರಾಗಲಿದ್ದಾರೆ. ಶಿಕ್ಷಣ, ಆರೋಗ್ಯ, ಕಂದಾಯ ಸೇರಿ ಎಲ್ಲ ಕ್ಷೇತ್ರದ ಸೇವೆಗಳು ಲಭ್ಯವಿರುವುದಿಲ್ಲ ಎಂದು ತಿಳಿಸಿದರು.
ಎರಡು ಪ್ರಮುಖ ಬೇಡಿಕೆಗಳನ್ನು ಈಗಾಗಲೇ ಸರ್ಕಾರದ ಮುಂದಿಡಲಾಗಿದೆ. 1-07-2022ರಿಂದ ಜಾರಿಗೆ ಬರುವಂತೆ ಶೇ.40ರಷ್ಟು ವೇತನ ಹೆಚ್ಚಳ ಸೌಲಭ್ಯ ಒದಗಿಸಬೇಕು. ಎನ್‌ಪಿಎಸ್ ರದ್ದು ಮಾಡಿ, ಓಪಿಎಸ್ ಜಾರಿಗೆ ತರಬೇಕು. ಈ ಸೌಲಭ್ಯದ ಬಗ್ಗೆ ಸರ್ಕಾರದ ಆದೇಶ ಹೊರಡಿಸಬೇಕು ಎಂದರು.
ಸುದ್ದಿಗೋಷ್ಠಿಯಲ್ಲಿ ಪದಾಧಿ ಕಾರಿಗಳಾದ ಮೋಹನ್‌ಕುಮಾರ್, ಮಾರುತಿ, ಸಿದ್ದಪ್ಪ, ರವಿ, ಅರುಣ್‌ಕುಮಾರ್ ಇನ್ನಿತರರು ಇದ್ದರು.
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.