ಶಿಕಾರಿಪುರ:ಸಂಗೊಳ್ಳಿ ರಾಯಣ್ಣ ಪುತ್ಥಳಿ ರಾತ್ರೋರಾತ್ರಿ ತೆರವು,ಅಭಿಮಾನಿಯಿಂದ ಆತ್ಮಹತ್ಯೆ ಯತ್ನ
Team Udayavani, Aug 14, 2021, 10:30 AM IST
ಶಿವಮೊಗ್ಗ: ಆಗಸ್ಟ್ 19ರಂದು ಉದ್ಘಾಟನೆ ಮಾಡಲು ಉದ್ದೇಶಿಸಿದ್ದ ಶಿಕಾರಿಪುರದ ಸಂಗೊಳ್ಳಿ ರಾಯಣ್ಣನ ಪುತ್ಥಳಿಯನ್ನು ರಾತ್ರೋ ರಾತ್ರಿ ತೆರವು ಮಾಡಲಾಗಿದೆ. ಘಟನೆಯಿಂದ ನೊಂದ ಅಭಿಮಾನಿಯೊಬ್ಬ ಚಾಕುವಿನಿಂದ ಚುಚ್ಚಿಕೊಂಡು ಆತ್ಮಹತ್ಯೆ ಯತ್ನಿಸಿದ ಘಟನೆಯೂ ಇಂದು ಬೆಳಗ್ಗೆ ನಡೆದಿದೆ.
ಶಿಕಾರಿಪುರದ ಎಸ್.ಎಸ್ ರಸ್ತೆ ಪಕ್ಕದಲ್ಲಿ ಸಂಗೊಳ್ಳಿ ರಾಯಣ್ಣ ಪುತ್ಥಳಿ ಪ್ರತಿಷ್ಠಾಪಿಸಲು ಉದ್ದೇಶಿಸಲಾಗಿತ್ತು. ಇದೇ ತಿಂಗಳ 19ರಂದು ಕುರುಬ ಸಮಾಜದ ಶ್ರೀನಿರಂಜನಾನಂದಪುರಿ ಸ್ವಾಮೀಜಿ ಸೇರಿದಂತೆ ವಿವಿಧ ಸ್ವಾಮೀಜಿಗಳ ಸಮ್ಮುಖದಲ್ಲಿ ಪುತ್ಥಳಿ ಅನಾವರಣಕ್ಕೆ ತೀರ್ಮಾನಿಸಲಾಗಿತ್ತು. ಈ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಹಂಚಲಾಗಿತ್ತು.
ಇದನ್ನೂ ಓದಿ:ಸೌದಿ ದೊರೆಯ ವಿರುದ್ಧ ಪೋಸ್ಟ್ ಪ್ರಕರಣ: ಆ.18ಕ್ಕೆ ಬೆಂಗಳೂರಿಗೆ ಬರಲಿದ್ದಾರೆ ಹರೀಶ್ ಬಂಗೇರ
ಆದರೆ ನಿನ್ನೆ ರಾತ್ರಿ ತಹಶೀಲ್ದಾರ್ ಕವಿರಾಜ್ ಹಾಗೂ ಪುರಸಭೆ ಮುಖ್ಯಾಧಿಕಾರಿ ಸುರೇಶ್ ಅವರು ಪೊಲೀಸ್ ಭದ್ರತೆಯಲ್ಲಿ ಪುತ್ಥಳಿಯನ್ನು ತೆರವುಗೊಳಿಸಿದ್ದಾರೆ ಎನ್ನಲಾಗಿದೆ. ತಾಲೂಕು ಅಡಳಿತದ ಕ್ರಮದಿಂದ ಆಕ್ರೋಶಗೊಂಡ ಸಂಗೊಳ್ಳಿ ರಾಯಣ್ಣ ಅಭಿಮಾನಿಗಳು ಎಸ್.ಎಸ್ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಈ ವೇಳೆ ಅಶೋಕ್ ಎಂಬಾತ ಚಾಕುವಿನಿಂದ ಚುಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದಾನೆ. ಕೂಡಲೇ ಸ್ಥಳದಲ್ಲಿದ್ದವರು ಆತನನ್ನು ರಕ್ಷಣೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
B. Y. Raghavendra: 10 ವರ್ಷದಲ್ಲಿ ವಕ್ಫ್ ಆಸ್ತಿ ಶೇ.135 ಹೆಚ್ಚಳ
Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿಟ್ಟು ವ್ಯಕ್ತಿ ನಾಪತ್ತೆ ಪ್ರಕರಣ; ಶವ ಪತ್ತೆ
ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?
Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ
MUST WATCH
ಹೊಸ ಸೇರ್ಪಡೆ
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.