Shimoga; ಸಂಪೂರ್ಣ ತುಂಡಾದ ಕೈಯನ್ನು ಯಶಸ್ವಿಯಾಗಿ ಮರುಜೋಡಿಸಿದ ಸರ್ಜಿ ಆಸ್ಪತ್ರೆ ವೈದ್ಯರು
Team Udayavani, Aug 23, 2024, 2:43 PM IST
ಶಿವಮೊಗ್ಗ: ಎರಡು ತುಂಡಾಗಿದ್ದ ಕೈಗೆ ಶಸ್ತ್ರ ಚಿಕಿತ್ಸೆ ನಡೆಸಿ, ಮರು ಜೋಡಿಸುವ ಮೂಲಕ ಅಪರೂಪದ ಸಾಧನೆ ಮಾಡುವಲ್ಲಿ ಇಲ್ಲಿನ ಸರ್ಜಿ ಸೂಪರ್ ಸ್ಪೆಷಾಲಿಟಿ ತಜ್ಞ ವೈದ್ಯರ ತಂಡ ಯಶಸ್ಸು ಸಾಧಿಸಿ ರೋಗಿಗೆ ಮರು ಜೀವನವನ್ನು ಕಲ್ಪಿಸಿದೆ.
ಜಿಲ್ಲೆಯ ಸಾ ಮಿಲ್ ವೊಂದರಲ್ಲಿ ಕೆಲಸ ಮಾಡುತ್ತಿದ್ದ 35 ವರ್ಷದ ಕಾರ್ಮಿಕರೊಬ್ಬರ ಕೈ ಆಕಸ್ಮಿಕವಾಗಿ ಮರ ಕೊಯ್ಯುವ ಯಂತ್ರಕ್ಕೆ ಸಿಲುಕಿ ಎರಡು ತುಂಡಾಗಿತ್ತು. ಸಂಪೂರ್ಣ ಕತ್ತರಿಸಿದ ಮುಂಗೈಯನ್ನು ಐಸ್ ಬಾಕ್ಸ್ ನಲ್ಲಿ ಇಟ್ಟುಕೊಂಡು ರೋಗಿಯು ಆಸ್ಪತ್ರೆಯ ಅಪಘಾಥ ವಿಭಾಗಕ್ಕೆ ದಾಖಲಾಗಿದ್ದರು. ಆಸ್ಪತ್ರೆಯಲ್ಲಿ ಸತತವಾಗಿ 7 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ಮಾಡಿದ್ದು, ಮುಂಗೈನ ಮಾಂಸಖಂಡ, ಮೂಳೆ ಹಾಗೂ ನರಗಳನ್ನು ಯಶಸ್ವಿಯಾಗಿ ಮರು ಜೋಡಿಸಿ ರೋಗಿಗೆ ಹೊಸ ಬದುಕು ಕೊಟ್ಟಿದ್ದಾರೆ.
ರೋಗಿಗೆ ಉತ್ತಮ ಆರೈಕೆ ಮಾಡಿ ಒಂದು ವಾರದ ಬಳಿಕ ಡಿಸ್ಚಾರ್ಜ್ ಮಾಡಲಾಗಿತ್ತು, ಆನಂತರ ಕಾಲ ಕಾಲಕ್ಕೆ ತಪಾಸಣೆ ನಡೆಸಿ, ಇದೀಗ ಕೈ ಚಲನವಲನ ಚೆನ್ನಾಗಿದ್ದು, ರೋಗಿಯು ಚೇತರಿಸಿಕೊಂಡಿದ್ದಾರೆ. ಸರ್ಜಿ ಆಸ್ಪತ್ರೆಯ ಪ್ಲಾಸ್ಟಿಕ್ ಸರ್ಜನ್ ಡಾ.ಚೇತನ್ ಹಾಗೂ ಮೂಳೆ ರೋಗ ತಜ್ಞರಾದ ಡಾ.ಮಂಜುನಾಥ್, ವೈದ್ಯಕೀಯ ಅಧೀಕ್ಷಕ ಹಾಗೂ ಅರಿವಳಿಕೆ ತಜ್ಞರಾದ ಡಾ. ವಾದಿರಾಜ ಕುಲಕರ್ಣಿ ಮತ್ತು ಡಾ.ಮೂರ್ಕಣಪ್ಪ, ಡಾ.ಸಂತೋಷ್, ಡಾ. ಅರ್ಜುನ್ ಅವರ ತಂಡ ಈ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿದೆ.
ತುಂಡಾದ ಕೈ ಮರು ಜೋಡಣೆ, ಹೇಗೆ ಸಾಧ್ಯ?
ಅಪಘಾತ ಅಥವಾ ದುರಂತದಲ್ಲಿ ಕೈ- ಕಾಲು, ಬೆರಳು ಸೇರಿದಂತೆ ಯಾವುದೇ ಅಂಗಗಳು ಕತ್ತರಿಸಿದಾಗ ಅಯ್ಯೋ ಜೀವನ ಮುಗಿದೇ ಹೋಯ್ತು ಎಂದು ಚಿಂತಾಕ್ರಾಂತರಾಗುವುದಕ್ಕಿಂತ ಆ ಕ್ಷಣ ಸ್ವಲ್ಪ ಯೋಚಿಸಿ ಮುಂಜಾಗ್ರತಾ ಕ್ರಮಗಳನ್ನು ಕ್ರಮ ಕೈಗೊಂಡರೆ ಮತ್ತೆ ಹೊಸ ಬದಕನ್ನು ಕಂಡು ಕೊಳ್ಳಬಹುದು. ಅವಘಡ ಸಂಭವಿಸಿ ಕೈ- ಕಾಲು, ಬೆರಳು ಸೇರಿದಂತೆ ಯಾವುದೇ ಅಂಗಗಳು ತುಂಡಾಗಿದ್ದರೆ ಭಯಪಡದೆ ಆತ್ಮಸ್ಥೈರ್ಯದೊಂದಿಗೆ ತುಂಡಾದ ಭಾಗವನ್ನು ಪ್ಲಾಸ್ಟಿಕ್ ಕವರ್ ನೊಂದಿಗೆ ಐಸ್ ಬಾಕ್ಸ್ ನಲ್ಲಿಟ್ಟು 6 ಗಂಟೆಯೊಳಗೆ ಆಸ್ಪತ್ರೆಗೆ ತಂದರೆ ಶಸ್ತ್ರ ಚಿಕಿತ್ಸೆ ಮಾಡಿ ಮರು ಜೋಡಿಸಲು ಸಾದ್ಯವಿದೆ.
ಆದರೆ ಇದು ಬಹಳಷ್ಟು ಜನರಿಗೆ ಸಾಧ್ಯವಾಗುವುದಿಲ್ಲ. ಘಟನೆ ನಡೆದಾಗ ಭಯಭೀತರಾಗಿ ತುಂಡಾದ ಭಾಗವನ್ನು ತರದೇ ಮರೆತು ಆಸ್ಪತ್ರೆಗೆ ಬರುವ ಸಾಧ್ಯತೆಗಳೇ ಹೆಚ್ಚು. ಇಲ್ಲವೆ ಬಹಳ ತಡವಾಗಿ ಬಂದರೆ ತುಂಡಾದ ಭಾಗದ ಮಾಂಸ ಖಂಡಗಳು ಕೊಳೆತಂತಾಗುತ್ತವೆ, ಜೀವಕೋಶಗಳು ಸಾಯುತ್ತವೆ, ಹಾಗಾಗಿ ಚಿಕಿತ್ಸೆ ಮಾಡಿದರೂ ಯಶಸ್ವಿ ಆಗುವುದಿಲ್ಲ. ಆದರೆ ಈ ಘಟನೆಯಲ್ಲಿ ರೋಗಿಯು ಎಚ್ಚೆತ್ತುಕೊಂಡು ಸಕಾಲಕ್ಕೆ ತುಂಡಾದ ಕೈಯೊಂದಿಗೆ ಬಂದಿದ್ದರಿಂದ 7 ಗಂಟೆಗಳ ಕಾಲ ಶಸ್ತ್ರ ಚಿಕಿತ್ಸೆ ನಡೆಸಿ ಮರು ಜೋಡಿಸಲು ಸಾಧ್ಯವಾಗಿದೆ. ತುಂಡಾದ ಭಾಗಗಳನ್ನು ಯಾವುದೇ ಕಾರಣಕ್ಕೂ ನೇರವಾಗಿ ನೀರಿನಲ್ಲಿ ಅಥವಾ ಐಸ್ ಬಾಕ್ಸ್ ನೊಳಗೆ ಇಟ್ಟುಕೊಂಡು ಬರಬಾರದು. ಬದಲಾಗಿ ಪ್ಲಾಸ್ಟಿಕ್ ಕವರ್ ನಲ್ಲಿಟ್ಟು ಐಸ್ ಬಾಕ್ಸ್ ನಲ್ಲಿಟ್ಟು ತರಬೇಕು, ಹೀಗೆ ಮಾಡಿದಾಗ ಜೀವಕೋಶಗಳು ಸಾಯುವುದಿಲ್ಲ, ಅಂಗಾಂಗಳ ಮರು ಜೋಡಣೆ ಮಾಡುವ ಸೌಕರ್ಯ ಹಾಗೂ ಅತ್ಯಾಧುನಿಕ ಶಸ್ತ್ರ ಚಿಕಿತ್ಸಾ ಘಟಕವನ್ನು ಸರ್ಜಿ ಆಸ್ಪತ್ರೆಯು ಹೊಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್ ಫಿಕ್ಸ್
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.