ಹಿಂದೂ-ಮುಸ್ಲಿಂರನ್ನು ಬೇರೆ ಮಾಡೋ ಕೆಲಸ ಎಸ್ ಡಿಪಿಐ- ಪಿಎಫ್ಐ ಮಾಡುತ್ತಿದ್ದವು: ಈಶ್ವರಪ್ಪ
Team Udayavani, Sep 27, 2022, 2:50 PM IST
ಶಿವಮೊಗ್ಗ: ರಾಷ್ಟ್ರದ್ರೋಹಿ ಚಟುವಟಿಕೆ ಮಾಡಿದ ಪಿಎಫ್ ಐ ಮತ್ತು ಎಸ್ ಡಿಪಿಐ ನಾಯಕರ ಬಂಧನ ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ನಾನು ಸ್ವಾಗತಿಸುತ್ತೇನೆ ಎಂದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು.
ದೇಶಕ್ಕೆ ಸ್ವಾತಂತ್ರ್ಯ ಬಂದಿದ್ದು ಹಿಂದೂ – ಮುಸ್ಲಿಂ- ಕ್ರೈಸ್ತರು ಒಟ್ಟಾಗಿ ಬಾಳಲು. ಎಸ್ ಡಿಪಿಐ ಮತ್ತು ಪಿಎಫ್ಐ ಹಿಂದೂ-ಮುಸ್ಲಿಂರನ್ನು ಬೇರೆ ಬೇರೆ ಮಾಡು ಕೆಲಸ ಮಾಡುತ್ತಿದ್ದರು. ಗೋಹತ್ಯೆ ಜೊತೆಗೆ ಹಿಂದೂ ಸಂಸ್ಕೃತಿಗೆ ಅವಮಾನ ಮಾಡುವ ಕೆಲಸ ಮಾಡುತ್ತಿದ್ದರು. ಈ ರಾಷ್ಟ್ರದ್ರೋಹಿ ಎಸ್ ಡಿಪಿಐ ಮತ್ತು ಪಿಎಫ್ ಐ ಸಂಘಟನೆ ಇರಬಾರದೆಂದು ರಾಷ್ಟ್ರಭಕ್ತ ಮುಸ್ಲಿಂರೂ ಕೂಡಲೇ ಖಂಡನೆ ಮಾಡಬೇಕು. ಈ ಮೂಲಕ ಕೇಂದ್ರ ಸರ್ಕಾರಕ್ಕೆ ಬೆಂಬಲ ಕೊಡಬೇಕು ಎಂದರು
ಇದನ್ನೂ ಓದಿ:ಭವಿಷ್ಯದ ಪೀಳಿಗೆ ಆರೋಗ್ಯಕರ ಜೀವನ ನಡೆಸುವಂಥ ಸಂಶೋಧನೆಗಳಾಗಲಿ: ಸಿಎಂ ಬೊಮ್ಮಾಯಿ
ಈ ದಾಳಿ ಕುರಿತು ಕಾಂಗ್ರೆಸ್ ನವರು ಇನ್ನೂ ಬಾಯಿ ಬಿಟ್ಟಿಲ್ಲ. ಕೇಂದ್ರ ಸರ್ಕಾರ ಸರಿಯಾದ ಕ್ರಮ ತೆಗೆದುಕೊಂಡಿರುವ ಕುರಿತು ಕಾಂಗ್ರೆಸ್ ನಾಯಕರು ಪ್ರತಿಕ್ರಿಯೆ ಇಲ್ಲ. ಕಾಂಗ್ರೆಸ್ ಹಿಂದಿನಿಂದಲೂ ರಾಷ್ಟ್ರದ್ರೋಹಿಗಳಿಗೆ ಬೆಂಬಲ ಕೊಡುವ ಕೆಲಸ ಮಾಡಿದೆ. ಇದಕ್ಕೂ ನಿಜಕ್ಕೂ ಕೂಡ ದೊಡ್ಡ ಅಪಮಾನ. ರಾಷ್ಟ್ರದ್ರೋಹಿ ಚಟುವಟಿಕೆಗಳು ನಡೆಯುತ್ತಿರುವಲ್ಲಿ ದಾಳಿ ಮುಂದುವರೆಯಬೇಕು. ಕೇಂದ್ರ ಸರ್ಕಾರವು ದೇಶದ್ರೋಹಿ ಸಂಘಟನೆ ವಿರುದ್ಧ ಕಠಿಣ ಕ್ರಮ ತೆಗೆದುಕೊಂಡಿದೆ ಎಂದು ರಾಷ್ಟ್ರ ಭಕ್ತರಿಗೆ ವಿಶ್ವಾಸ ಬರಬೇಕು. ಕೇಂದ್ರ ಸರ್ಕಾರದ ಈ ನಿರ್ಧಾರ ಇಡೀ ದೇಶ ಸ್ವಾಗತ ಮಾಡುತ್ತಿದೆ ಎಂದು ಕೆಎಸ್ ಈಶ್ವರಪ್ಪ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Holehonnuru: ಕಿರು ಅರಣ್ಯ ಪ್ರದೇಶದಲ್ಲಿ ಕಡವೆ ಬೇಟೆ; ಆರೋಪಿ ಬಂಧನ
Hosanagara: ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ; ದೇಗುಲಕ್ಕೆ ಹಾನಿ
Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ
K. S. Eshwarappa: ಮುಸ್ಲಿಮರಿಗೆ ಮೀಸಲು ನೀಡಿದರೆ ಸಂತರ ನೇತೃತ್ವದಲ್ಲಿ ದಂಗೆ
MUST WATCH
ಹೊಸ ಸೇರ್ಪಡೆ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.