ಹಿಂಸೆಗೆ ತಿರುಗಿದ ಹಿಜಾಬ್ – ಕೇಸರಿ ವಿವಾದ: ಶಿವಮೊಗ್ಗದಲ್ಲಿ ಸೆಕ್ಷನ್ 144 ನಿಷೇಧಾಜ್ಞೆ ಜಾರಿ
Team Udayavani, Feb 8, 2022, 2:08 PM IST
ಶಿವಮೊಗ್ಗ: ಶಿವಮೊಗ್ಗದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿರುವ ಹಿಜಾಬ್ – ಕೇಸರಿ ಹೋರಾಟದ ಪರಿಸ್ಥಿತಿ ಮತ್ತಷ್ಟು ವಿಕೋಪಕ್ಕೆ ಹೋಗುತ್ತಿರುವ ಹಿನ್ನೆಲೆಯಲ್ಲಿ ನಗರ ವ್ಯಾಪ್ತಿಯಲ್ಲಿ ಎರಡು ದಿನಗಳ ಕಾಲ ಸೆಕ್ಷನ್ 144 ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್ ಎನ್.ಜೆ.ನಾಗರಾಜ್ ಆದೇಶಿಸಿದ್ದಾರೆ.
ಶಿವಮೊಗ್ಗದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದೆ. ವಿದ್ಯಾರ್ಥಿಗಳು ಪ್ರತಿಭಟನೆಯ ವೇಳೆ ಪರಸ್ಪರ ಕಲ್ಲು-ತೂರಾಟ ಮಾಡುತ್ತಿದ್ದು, ಇದನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಚಾರ್ಜ್ ಪ್ರಯೋಗಿಸಿದ್ದಾರೆ.
ಪರಿಸ್ಥಿತಿ ಮತ್ತಷ್ಟು ವಿಕೋಪಕ್ಕೆ ಹೋಗುತ್ತಿರುವ ಹಿನ್ನೆಲೆಯಲ್ಲಿ ತಹಶೀಲ್ದಾರ್ ಎನ್.ಜೆ.ನಾಗರಾಜ್ ನಗರದಲ್ಲಿ 2 ದಿನಗಳ ಕಾಲ ಸೆಕ್ಷನ್ 144 ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.
ಪ್ರತಿಭಟನೆ ಹೆಚ್ಚುತ್ತಿರುವ ಕಾರಣ ಈಗಾಗಲೇ ಶಾಲಾ- ಕಾಲೇಜುಗಳಿಗೆ ರಜೆ ಸಹ ಘೋಷಣೆ ಮಾಡಲಾಗಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.