ಜಾತ್ಯತೀತ ಪದಕ್ಕೆ ಅರ್ಥವೇ ಇಲ್ಲ: ಶಾಸಕ ಚನ್ನಬಸಪ್ಪ
Team Udayavani, Apr 21, 2024, 12:18 AM IST
ಶಿವಮೊಗ್ಗ: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಹಿಂದೂಗಳಿಗೆ ಉಳಿಗಾಲವೇ ಇಲ್ಲವಾಗಿದೆ. ಹಿಂದೂಗಳನ್ನು ಹತ್ಯೆ ಮಾಡಲೇಬೇಕು ಎಂಬಂತೆ ಘಟನೆಗಳು ನಡೆಯುತ್ತಿವೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾತ್ಯತೀತ ಎಂಬ ಪದಕ್ಕೆ ಅರ್ಥವೇ ಇಲ್ಲವಾಗಿದೆ. ಲವ್ ಜೆಹಾದ್ ಹೆಸರಿನಲ್ಲಿ ನಡೆಯುವ ಹತ್ಯೆಗಳಿಗೆ ಈ ಕಾಂಗ್ರೆಸ್ ಸರಕಾರ ಶಕ್ತಿ ತುಂಬುತ್ತಿದೆ. ನಮ್ಮ ಹೆಣ್ಣುಮಕ್ಕಳು ಕಾಲೇಜಿಗೆ ಹೋಗುವುದು ಕಷ್ಟವಾಗುತ್ತಿದೆ. ಎಷ್ಟೋ ಕಡೆ ಪೋಷಕರು ತಮ್ಮ ಮಕ್ಕಳನ್ನು ಕಾಲೇಜಿಗೆ ಕಳಿಸುವುದಿಲ್ಲ ಎನ್ನುತ್ತಿದ್ದಾರೆ ಎಂದರು.
ರಾಜ್ಯದಲ್ಲಿ ಕೆಫೆಗಳೂ ಸುರಕ್ಷಿತವಾಗಿಲ್ಲ. ಕಾಫಿ ಕುಡಿಯುವುದು ಕಷ್ಟವಾಗುತ್ತಿದೆ ಮತ್ತು ಶಿವಮೊಗ್ಗದಂತಹ ಪಟ್ಟಣದಲ್ಲೂ ಬಾಂಬ್ ತಯಾರಿಕೆ ನಡೆಯುತ್ತಿದೆ ಎಂದರೆ ಪರಿಸ್ಥಿತಿ ಎಲ್ಲಿಯವರೆಗೆ ಬಂದಿದೆ ಎಂದು ತಿಳಿದುಕೊಳ್ಳಬಹುದು.
ಬಾಂಬ್ ತಯಾರಕರು ಕೂಡ ತೀರ್ಥಹಳ್ಳಿಯವರೇ ಆಗಿದ್ದಾರೆ. ಕರ್ನಾಟಕ ಭಯೋತ್ಪಾದಕರನ್ನು ಸಾಕುವ ತಾಣವಾಗಿದೆ ಎಂದು ಆರೋಪಿಸಿದರು.
ಶಾಂತಿ- ಸುವ್ಯವಸ್ಥೆ ಇದೆ ಎಂದು ರಾಜ್ಯ ಸರಕಾರ ಹೇಳುತ್ತಿದೆ. ಆದರೆ ಕೇವಲ ಎರಡು ತಿಂಗಳುಗಳಲ್ಲಿ ರಾಜ್ಯದಲ್ಲಿ 13,495 ವಿವಿಧ ಪ್ರಕರಣಗಳು ನಡೆದಿವೆ. ಅತ್ಯಾಚಾರ, ಕೊಲೆ, ದರೋಡೆ, ಸರ ಕಳವು ಹೀಗೆ ವಿವಿಧ ರೀತಿಯ ಪ್ರಕರಣಗಳು ದಾಖಲಾಗಿವೆ. ಹೀಗಿರುವಾಗ ರಾಜ್ಯದಲ್ಲಿ ಶಾಂತಿ- ಸುವ್ಯವಸ್ಥೆ ಎಲ್ಲಿದೆ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Shimoga: ಮೊಬೈಲ್ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ
Holehonnur: ಎರಡು ಪ್ರತ್ಯೇಕ ರಸ್ತೆ ಅಪಘಾತ
Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’
Naveen D. Padil: ನಟ ನವೀನ್ ಡಿ. ಪಡೀಲ್‌ರವರಿಗೆ ವಿಶ್ವಪ್ರಭಾ ಪುರಸ್ಕಾರ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Udupi: ಅಂಬಲಪಾಡಿ ಜಂಕ್ಷನ್ ಬಳಿ ಬೃಹತ್ ಹೊಂಡಕ್ಕೆ ಬಿದ್ದ ಕಾರು
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.