ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ನಿರಂತರ ಪ್ರತಿಭಟನೆ; ತೀನ ಘೋಷಣೆ

Team Udayavani, Mar 15, 2022, 4:57 PM IST

ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ನಿರಂತರ ಪ್ರತಿಭಟನೆ; ತೀನ ಘೋಷಣೆ

ಸಾಗರ: ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಬಗೆಹರಿಸದೆ ಇರುವುದು ಮತ್ತು ಅರಣ್ಯಹಕ್ಕು ಸಮಸ್ಯೆ, ವರಾಹಿ, ಸಾವೆಹಕ್ಲು, ಚಕ್ರ ಆಣೆಕಟ್ಟು ನಿರ್ಮಾಣಕ್ಕೆ ಭೂಮಿ ಕಳೆದುಕೊಂಡವರ ಸ್ಥಿತಿ ಸಹ ಇದೇ ರೀತಿ ಇದೆ. ಈ ಎಲ್ಲ ಸಮಸ್ಯೆಗಳನ್ನು ಮುಂದಿರಿಸಿಕೊಂಡು ಹಕ್ಕು ಪತ್ರ ಕೊಡಿಸಿ, ಭೂಸಮಸ್ಯೆ ಬಗೆಹರಿಸಿ, ಇಲ್ಲವಾದಲ್ಲಿ ರಾಜಿನಾಮೆ ಕೊಡಿ ಎಂದು ಒತ್ತಾಯಿಸಿ ಮಾ. 23ರಿಂದ ನಿರಂತರ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಮಲೆನಾಡು ಭೂಹೋರಾಟ ಸಮಿತಿ ಅಧ್ಯಕ್ಷ ತೀ.ನ.ಶ್ರೀನಿವಾಸ್ ತಿಳಿಸಿದ್ದಾರೆ.

ಮಂಗಳವಾರ ಅಣಲೆಕೊಪ್ಪದ ಪತ್ರಿಕಾಭವನದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾ. 23ರಂದು ಲೋಹಿಯಾ ಮತ್ತು ಗೋಪಾಲಗೌಡರ ಜನ್ಮದಿನದ ಅಂಗವಾಗಿ ಸಾಗರ, ಹೊಸನಗರ, ಸೊರಬ ಮತ್ತು ಶಿಕಾರಿಪುರ ಕ್ಷೇತ್ರವ್ಯಾಪ್ತಿಯ ಸಂತ್ರಸ್ತರ ರೈತರನ್ನು ಒಳಗೊಂಡಂತೆ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದರು.

ನಾಲ್ಕು ತಾಲೂಕುಗಳ ಬಗರ್‌ಹುಕುಂ ಸಾಗುವಳಿ, ಶರಾವತಿ ಮುಳುಗಡೆ ಸಂತ್ರಸ್ತರು ಮತ್ತು ಅರಣ್ಯಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ರೈತರು ಸಾಗರಕ್ಕೆ ಬಂದು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಾರೆ. ಬೆಳಿಗ್ಗೆ 11ಕ್ಕೆ ಗಾಂಧಿ ಮೈದಾನದಿಂದ ಪ್ರತಿಭಟನೆ ಪ್ರಾರಂಭಗೊಂಡು ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಉಪವಿಭಾಗಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಭೂಹೀನರಿಗೆ ಭೂಮಿ ನೀಡುವ ನಿಟ್ಟಿನಲ್ಲಿ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಶರಾವತಿ ಮುಳುಗಡೆ ಸಂತ್ರಸ್ತರ ಸಭೆ ನಡೆದು ಐದು ತಿಂಗಳು ಕಳೆಯುತ್ತಾ ಬಂದಿದ್ದರೂ ಅದು ಕಾರ್ಯರೂಪಕ್ಕೆ ಬಂದಿಲ್ಲ. ಸಭೆಯಲ್ಲಿ ಪಾಲ್ಗೊಂಡಿದ್ದ ಜಿಲ್ಲೆಯ ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಹಾಲಪ್ಪ ಹರತಾಳು ಈತನಕ ಅದರ ಬಗ್ಗೆ ಚಕಾರ ಎತ್ತಿಲ್ಲ ಎಂದು ದೂರಿದರು.

ಮುಖ್ಯಮಂತ್ರಿಗಳಾದಿಯಾಗಿ ಸಂಸದರು, ಸಚಿವರು, ಶಾಸಕರು ಅಧಿಕಾರಿಗಳ ಮರ್ಜಿಯಂತೆ ಕೆಲಸ ಮಾಡುತ್ತಿದ್ದಾರೆ. ಜನರ ಯಾವುದೇ ಕೆಲಸ ಆಗುತ್ತಿಲ್ಲ. ಅರಣ್ಯಹಕ್ಕು, ಶರಾವತಿ ಮುಳುಗಡೆ ಸಂತ್ರಸ್ತರು, ಬಗರ್‌ಹುಕುಂ ಅಡಿ ಸಕ್ರಮಕ್ಕಾಗಿ ಕಾಯುತ್ತಿರುವ ಭೂಹೀನರ ಸಮಸ್ಯೆಗೆ ಸ್ಪಂದಿಸದ ಸರ್ಕಾರದ ವಿರುದ್ಧ ಜಿಲ್ಲಾದ್ಯಂತ ಪ್ರತಿಭಟನೆ ನಡೆಸಲಾಗುತ್ತದೆ. ನಾವು ಕಾನೂನುಭಂಗ, ಜೈಲುಬರೋ ಚಳುವಳಿಗೂ ಸಿದ್ದರಿದ್ದೇವೆ ಎಂದರು.

ಗೋಷ್ಠಿಯಲ್ಲಿ ವೀರೇಶ್ ಗೌಡ, ಅಶೋಕ್ ಮಾಳಗಿ, ಮಹಾದೇವಪ್ಪ ಸಿದ್ದಹಳ್ಳಿ, ಇಮ್ರಾನ್ ಖಾನ್ ಅಂಕರವಳ್ಳಿ, ಶ್ರೀಧರ ನಾರಗೋಡು, ಧರ್ಮೇಂದ್ರ ಸಿರವಾಳ, ಪ್ರೇಮ್‌ಸಿಂಗ್, ಶಿವರಾಮ್, ರಾಜು ನಾಯರ್ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

Central government approves land for Manmohan Singh memorial

Memorial: ಮನಮೋಹನ್‌ ಸಿಂಗ್‌ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ

2-kunigal

Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ

1-horoscope

Daily Horoscope: ದೀರ್ಘ‌ಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

1-NASA

NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!

BUS driver

RTO; ಫಿಟ್‌ನೆಸ್‌ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!

Pro Kabaddi: ಹರಿಯಾಣ- ಪಾಟ್ನಾ ಫೈನಲ್‌ ಹಣಾಹಣಿ

Pro Kabaddi: ಹರಿಯಾಣ- ಪಾಟ್ನಾ ಫೈನಲ್‌ ಹಣಾಹಣಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

Shimoga: ಮೊಬೈಲ್‌ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ

Shimoga: ಮೊಬೈಲ್‌ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ

13-

Holehonnur: ಎರಡು ಪ್ರತ್ಯೇಕ ರಸ್ತೆ ಅಪಘಾತ

Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ

Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Central government approves land for Manmohan Singh memorial

Memorial: ಮನಮೋಹನ್‌ ಸಿಂಗ್‌ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ

2-kunigal

Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ

courts

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು

11

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು

1-horoscope

Daily Horoscope: ದೀರ್ಘ‌ಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.