Shikaripur Crime: ಹಿಂದೂ ಯುವಕನಿಗೆ ಚಾಕು ಇರಿತ
Team Udayavani, Feb 7, 2024, 9:25 AM IST
ಶಿಕಾರಿಪುರ: ಹಿಂದೂ ಯುವಕನಿಗೆ ಅನ್ಯಕೋಮಿನ ಯುವಕರು ಚಾಕುವಿನಿಂದ ಇರಿದ ಘಟನೆ ಫೆ.6ರ ಮಂಗಳವಾರ ರಾತ್ರಿ ಪಟ್ಟಣದ ದೊಡ್ಡಪೇಟೆಯಲ್ಲಿ ನಡೆದಿದೆ.
ದೊಡ್ಡಪೇಟೆಯಲ್ಲಿ ದ್ವಿಚಕ್ರವಾಹನವನ್ನು ಅಜಾಗರೂಕತೆಯಿಂದ ಓಡಿಸುತ್ತಿದ್ದನ್ನು ಪ್ರಶ್ನಿಸಿದ ಕುಮದ್ವತಿ ಕಾಲೇಜಿನಲ್ಲಿ ಕಂಪ್ಯೂಟರ್ ಆಪರೇಟರ್ ಅಗಿ ಕಾರ್ಯ ನಿರ್ವಹಿಸುತ್ತಿದ್ದ ಯುವಕ ಹಾಗೂ ದೊಡ್ಡಪೇಟೆ ನಿವಾಸಿ ಸುಶೀಲ್(23) ಅವರಿಗೆ ಅನ್ಯಕೋಮಿನ ನಾಲ್ವರು ಯುವಕರ ತಂಡ ಚಾಕುವಿಂದ ಇರಿದಿದೆ. ಚಾಕು ಇರಿತಕ್ಕೆ ಒಳಗಾದ ಯುವಕನನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ನಂತರ ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದೆ.
ಘಟನೆ ನಡೆದ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಹಾಗೂ ಸಂಸದ ಬಿ.ವೈ. ರಾಘವೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಚಾಕು ಇರಿತ ಸಂಬಂಧಿಸಿದಂತೆ ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಹಿಂದೂ ಸಂಘಟನೆ ಪದಾಧಿಕಾರಿಗಳು ಹಾಗೂ ಸ್ಥಳೀಯರು ಒತ್ತಾಯಿಸಿದರು. ಘಟನೆ ಸಂಬಂಧ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಶಿವಮೊಗ್ಗದಲ್ಲಿ ಪ್ರತಿಕ್ರಿಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ
Thirthahalli: ಅದ್ಧೂರಿಯಾಗಿ ನಡೆದ ಎಳ್ಳಮಾವಾಸ್ಯೆ ರಥೋತ್ಸವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.