ಕೋವಿಡ್ ಕರ್ತವ್ಯ ವೇಳೆ ಕುಸಿದು ಬಿದ್ದ ವಾರಿಯರ್
Team Udayavani, Jul 1, 2020, 5:10 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಶಿಕಾರಿಪುರ: ಕರ್ತವ್ಯನಿರತ ಆಶಾ ಕಾರ್ಯಕರ್ತೆಯೊಬ್ಬರು ಏಕಾಏಕಿ ಅಸ್ವಸ್ಥರಾಗಿ ಕುಸಿದು ಬಿದ್ದ ಘಟನೆ ಪಟ್ಟಣದಲ್ಲಿ ನಡೆದಿದೆ.
ಒಂದು ವಾರದ ಹಿಂದೆ ಪಟ್ಟಣದ ಕಂಟೈನ್ಮೆಂಟ್ ವಲಯ ಕುಂಬಾರಗುಂಡಿ ಬೀದಿಯಲ್ಲಿನ ನಿವಾಸಿಯೊಬ್ಬರಿಗೆ ಕೋವಿಡ್ ಪಾಸಿಟಿವ್ ಬಂದಿತ್ತು. ಆದರೆ, ಒಂದು ವಾರದಿಂದ ಇಲ್ಲಿನ ನಿವಾಸಿಗಳ ಆರೋಗ್ಯ ತಪಾಸಣೆ ನಡೆಸಿಲ್ಲ ಎಂದು ಸ್ಥಳೀಯರು ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಮಂಗಳವಾರ ಆರೋಗ್ಯ ಇಲಾಖೆ ಸಿಬ್ಬಂದಿ ಜನರ ಆರೋಗ್ಯ ತಪಾಸಣೆಗಾಗಿ ಆಗಮಿಸಿದ್ದರು. ಈ ವೇಳೆ ಆಶಾ ಕಾರ್ಯಕರ್ತೆ ನೇತ್ರಾವತಿ ನಿಶ್ಯಕ್ತಿಯಿಂದ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆರೋಗ್ಯ ಇಲಾಖೆ ಸಿಬ್ಬಂದಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಆಶಾ ಕಾರ್ಯಕರ್ತೆ ಕರ್ತವ್ಯದ ವೇಳೆ ಧರಿಸಿದ ಪಿಪಿಟಿ ಕಿಟ್ ಹಾಗೂ ಫೇಸ್ ಮಾಸ್ಕ್ ನಿಂದ ಉಸಿರಾಡಲು ತೊಂದರೆಯಾಗಿದೆ. ಅವರಿಗೆ ಯಾವುದೇ ರೀತಿಯ ರೋಗದ ಲಕ್ಷಣಗಳಿಲ್ಲ. ಹಾಗಾಗಿ, ಯಾರೂ ಆತಂಕ ಪಡುವ ಅಗತ್ಯವಿಲ್ಲ. ಬಿಸಿಲಿನ ತಾಪಕ್ಕೆ ನಿಶ್ಯಕ್ತಿ ಉಂಟಾಗಿ ಹೀಗಾಗಿದೆ ಎಂದು ತಪಾಸಣೆ ನಡೆಸಿದ ವೈದ್ಯ ಡಾ| ವಿನಯ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
B. Y. Raghavendra: 10 ವರ್ಷದಲ್ಲಿ ವಕ್ಫ್ ಆಸ್ತಿ ಶೇ.135 ಹೆಚ್ಚಳ
Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿಟ್ಟು ವ್ಯಕ್ತಿ ನಾಪತ್ತೆ ಪ್ರಕರಣ; ಶವ ಪತ್ತೆ
ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?
Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.