ಸರ್ಕಾರಿ ಸೌಲಭ್ಯದ ಸದುಪಯೋಗಕ್ಕೆ ಕರೆ
ತಾಲೂಕಿನಲ್ಲಿ ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ಪೂರ್ಣ: ಸಂಸದ ಬಿ.ವೈ. ರಾಘವೇಂದ್ರ
Team Udayavani, Jan 29, 2020, 1:39 PM IST
ಶಿಕಾರಿಪುರ: ಸರಕಾರ ನೀಡುವ ಸೌಲಭ್ಯ ಪಡೆದು ಉತ್ತಮ ಜೀವನ ನಡೆಸಬೇಕು. ಸೌಲಭ್ಯ ದುರುಪಯೋಗ ಮಾಡಿಕೊಂಡಲ್ಲಿ ಸರಕಾರ ಯೋಜನೆ ಸ್ಥಗಿತಗೊಳಿಸುತ್ತದೆ. ಅದಕ್ಕೆ ಆಸ್ಪದ ನೀಡಬಾರದು ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.
ಪಟ್ಟಣದಲ್ಲಿ ಸೋಮವಾರ ವಿವಿಧ ಇಲಾಖೆಗಳ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯ ವಿತರಿಸಿ ಅವರು ಮಾತನಾಡಿದರು. ಇಲಾಖೆ ನೀಡುವ ಸಾಲ- ಸೌಲಭ್ಯ ಸಾಲ ಪಡೆದ ಉದ್ದೇಶಕ್ಕೆ ಬಳಕೆ ಮಾಡಬೇಕು. ಆಗ ಮರುಪಾವತಿ ಸುಲಭ ಆಗುತ್ತದೆ. ಸಹಾಯ ಧನ ಪಡೆದುಕೊಂಡವರೂ ಅದನ್ನು ಸದುಪಯೋಗ ಮಾಡಿಕೊಳ್ಳಿರಿ ಎಂದರು.
ವಿವಿಧ ಇಲಾಖೆಯ ಸೌಲಭ್ಯ ಫಲಾನುಭವಿಗಳಿಗೆ ನೀಡುವಾಗ ಅದಕ್ಕಾಗಿ ಹಣ ಪಡೆಯುವ ಮಧ್ಯವರ್ತಿಗಳೂ ಹುಟ್ಟಿಕೊಂಡಿರುತ್ತಾರೆ. ಮುಖ್ಯಮಂತ್ರಿಗಳ ಕ್ಷೇತ್ರದಲ್ಲಿ ಇಂತಹದಕ್ಕೆ ಅವಕಾಶ ನೀಡಬಾರದು ಎನ್ನುವ ಉದ್ದೇಶಕ್ಕೆ, ಎಲ್ಲ ಸೌಲಭ್ಯಗಳ ಕುರಿತ ಮಾಹಿತಿ ಜನರಿಗೆ ಸಿಗಬೇಕು ಎನ್ನುವ ಕಾರಣಕ್ಕೆ ಒಂದೆ ವೇದಿಕೆಯಲ್ಲಿ ಎಲ್ಲ ಇಲಾಖೆ ಸೌಲಭ್ಯ ವಿತರಿಸಲಾಗುತ್ತಿದೆ. ತಾಲೂಕಿನ 1500ಕ್ಕೂ ಹೆಚ್ಚು ಫಲಾನುಭವಿಗಳಿಗೆ ಸೌಲಭ್ಯ ನೀಡುತ್ತಿರುವುದು ಸಂತಸ ತಂದಿದೆ ಎಂದರು.
ತಾಲೂಕಿನ ಎಲ್ಲ ಹೋಬಳಿ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು ಮುಖ್ಯಮಂತ್ರಿಗಳು ಆಗಮಿಸಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಶಿವಮೊಗ್ಗ- ರಾಣೆಬೆನ್ನೂರು ರೈಲ್ವೆ ಯೋಜನೆ ಸರ್ವೆ ಕಾರ್ಯ ಆದಷ್ಟು ಬೇಗನೆ ಪೂರ್ಣಗೊಂಡು ಕಾಮಗಾರಿ ಆರಂಭಗೊಳ್ಳುತ್ತದೆ. ತುಮಕೂರು- ಶಿವಮೊಗ್ಗ ಚತುಷ್ಪಥ ರಸ್ತೆ ಕಾಮಗಾರಿಗೆ ಬಂದ ಹಣ ವಾಪಸ್ ಹೋಗದಂತೆ ಮುನ್ನೆಚ್ಚರಿಕೆ ವಹಿಸಿದ್ದು ಕಾಮಗಾರಿ ಆರಂಭಿಸಲಾಗಿದೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಮುಖ್ಯಮಂತ್ರಿಗಳು ಬದ್ಧರಾಗಿದ್ದು ಎಲ್ಲ ಕ್ಷೇತ್ರದ ಅಭಿವೃದ್ಧಿಗೂ ಆದ್ಯತೆ ನೀಡಲಾಗಿದೆ ಎಂದರು.
ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಕೆ.ಎಸ್. ಗುರುಮೂರ್ತಿ ಮಾತನಾಡಿ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ, ಕರ್ನಾಟಕ ಬೋವಿ ಅವೃದ್ಧಿ ನಿಗಮ, ಆದಿಜಾಂಬವ ಅಭಿವೃದ್ಧಿ ನಿಗಮ, ಡಾ| ಅಂಬೇಡ್ಕರ್ ಅಭಿವೃದ್ಧಿ ನಿಗಮ, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಮೂಲಕ ಬೋರ್‌ವೆಲ್ ಕೊರೆಸುವುದಕ್ಕೆ 445 ಫಲಾನುಭವಿಗಳಿಗೆ, ಸ್ವಯಂ ಉದ್ಯೋಗಕ್ಕಾಗಿ 240, ವಿವಿಧ ಸಂಘ- ಸಂಸ್ಥೆಗಳಿಗೆ ನೀಡುವ ಮೈಕ್ರೋ ಫೈನಾನ್ಸ್ ಕ್ರೆಡಿಟ್ ಯೋಜನೆ ಅಡಿ 840 ಫಲಾನುಭವಿಗಳಿಗೆ ಅನುಮೋದನೆ ಪತ್ರ ನೀಡಲಾಗಿದೆ ಎಂದರು.
ಜಿಪಂ ಸದಸ್ಯರಾದ ಅರುಂಧತಿ ರಾಜೇಶ್, ಅಕ್ಷತಾ, ಮಮತಾ ಸಾಲಿ, ರೇಣುಕಾ, ತಾಪಂ ಅಧ್ಯಕ್ಷ ಕೆ.ಆರ್. ಶಂಭು, ತಹಶೀಲ್ದಾರ್ ಕವಿರಾಜ್, ತಾಪಂ ಇಒ ಪರಮೇಶ್ವರ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Anandapura: ನಿಂತಿದ್ದ ಕಾರಿಗೆ ಇನ್ನೊಂದು ಕಾರು ಡಿಕ್ಕಿ ಹೊಡೆದು ಕಾರು ಪಲ್ಟಿ
Sagara: ವಿದ್ಯುತ್ ಟ್ರಾನ್ಸ್ ಫಾರ್ಮರ್‌ಗೆ ನೇಣು ಬಿಗಿದು ಯುವಕ ಆತ್ಮಹತ್ಯೆ
Sagara: ಮಿಡಿ ಮಾವು, ವಿಶ್ವವಿದ್ಯಾಲಯದ ನಡೆದಾಡುವ ವಿಶ್ವಕೋಶ ಬಿ.ವಿ.ಸುಬ್ಬರಾವ್ ಇನ್ನಿಲ್ಲ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
Dandeli: ಕೆನರಾ ಬ್ಯಾಂಕ್ ಎಟಿಎಂ ಕೇಂದ್ರದೊಳಗೆ ಹಾವು ಪ್ರತ್ಯಕ್ಷ
BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ
ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.