ಕೃಷಿ ಉತ್ಪನ್ನ ಸಾಗಣೆಗೆ ಅವಕಾಶ ಕೊಡಿ

ಆರ್ಥಿಕ ಸಂಕಷ್ಟದಲ್ಲಿ ರೈತರು ಬೆಳೆ ಹಾಳಾಗುವ ಸಾಧ್ಯತೆ ಬಡವರ-ನಿರ್ಗತಿಕರ ನೆರವಿಗೆ ಸರ್ಕಾರ ಧಾವಿಸಲಿ

Team Udayavani, May 1, 2020, 3:45 PM IST

1-May–22

ಶಿವಮೊಗ್ಗ: ಹೊರರಾಜ್ಯಕ್ಕೆ ಕೃಷಿ ಉತ್ಪನ್ನ ಸಾಗಣೆಗೆ ಅವಕಾಶ ಕೋರಿ ಜಿಲ್ಲಾ ಕಾಂಗ್ರೆಸ್‌ನಿಂದ ಮನವಿ ಸಲ್ಲಿಸಲಾಯಿತು

ಶಿವಮೊಗ್ಗ: ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳನ್ನು ಹೊರ ರಾಜ್ಯಗಳಿಗೆ ಸಾಗಿಸಲು ಅನುಮತಿ ನೀಡುವಂತೆ ಒತ್ತಾಯಿಸಿ ಗುರುವಾರ ಜಿಲ್ಲಾ ಕಾಂಗ್ರೆಸ್‌ ಸಮಿತಿ ವತಿಯಿಂದ ಜಿಲ್ಲಾಡಳಿತದ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ರೈತರು ದೇಶದ ಬೆನ್ನೆಲುಬಾಗಿದ್ದು, ರೈತರು ಬೆಳೆದಿರುವ ಬೆಳೆಗಳನ್ನು, ವ್ಯವಸಾಯ ಉತ್ಪಾದನೆಗಳನ್ನು (ಮೆಕ್ಕೆಜೋಳ, ತರಕಾರಿ, ಹಣ್ಣುಗಳು, ಹೂವು) ಸಾಗಾಣಿಕೆಯಲ್ಲಿ ವ್ಯತ್ಯಯ ಉಂಟಾಗಿರುವುದರಿಂದ ರೈತರು ಆರ್ಥಿಕ ಸಂಕಷ್ಟಕ್ಕೊಳಗಾಗಿದ್ದಾರೆ. ಅವರು ತಮ್ಮ ಬೆಳೆಗಳನ್ನು, ಹಣ್ಣುಗಳನ್ನು ಹೊರ ರಾಜ್ಯಗಳಿಗೆ ಮಾರಾಟ ಮಾಡಿ ಮುಂದಿನ ಬೆಳೆಗಳನ್ನು ಬೆಳೆಯಲು ಉತ್ತಮ ಆರ್ಥಿಕತೆ ಹೊಂದಲಾಗದಿದ್ದರೆ ರೈತರು ತಂಬಾ ಸಂಕಷ್ಟಕ್ಕೆ ಸಿಲುಕುತ್ತಾರೆ ಎಂದು ತಿಳಿಸಿದರು.

ಜಿಲ್ಲೆಯೊಂದರಲ್ಲಿ ಸಾವಿರಾರು ಹೆಕ್ಟೇರ್‌ಗಳಲ್ಲಿ ಅನಾನಸ್‌, ಕರಬೂಜ, ಬೂದಗುಂಬಳ, ತರಕಾರಿಗಳು ಹೊರ ರಾಜ್ಯಗಳಿಗೆ ರವಾನೆ ಮಾಡದೆ ರೈತರು ಕಂಗಾಲಾಗಿರುತ್ತಾರೆ. ರೈತರು ಬೆಳೆದಿರುವ ಬೆಳೆಗಳನ್ನು, ವ್ಯವಸಾಯ ಉತ್ಪಾದನೆಗಳನ್ನು ಅಂದರೆ ಮೆಕ್ಕೆಜೋಳ, ತರಕಾರಿ, ಹಣ್ಣುಗಳು, ಹೂವುಗಳನ್ನು ಹೊರ ರಾಜ್ಯಗಳಿಗೆ ಸಾಗಾಟ ಮಾಡಲು ವಿಶೇಷ ಪರವಾನಗಿ ಅಥವಾ ಅನುಮತಿಯನ್ನು ಸರ್ಕಾರ ಹಾಗು ಜಿಲ್ಲಾಡಳಿತ ದೊರಕಿಸಿಕೊಡಬೇಕು ಎಂದು ಒತ್ತಾಯಿಸಿದರು. ಅದೇ ರೀತಿ ಅಡಿಕೆ ಬೆಳೆಯನ್ನು ಬೆಳೆದ ರೈತರು, ವರ್ತಕರು, ಅಡಿಕೆ ಬೆಳೆ ಕಾರ್ಮಿಕರು ಅಡಿಕೆ ಬೆಳೆ ಹೊರ ರಾಜ್ಯಗಳಿಗೆ ರವಾನೆಯಾಗದೆ, ಮಾರಾಟವಾಗದೆ ಅ ಧಿಕ ರೀತಿಯ ಆರ್ಥಿಕ ಸಂಕಷ್ಟದಲ್ಲಿದ್ದು, ಮುಂದಿನ ಬೆಳೆಗಳನ್ನು ಬೆಳೆಯಲು ಆರ್ಥಿಕತೆಯ ಅನುಕೂಲ ಹೊಂದಲಾಗದಿದ್ದರೆ ಮುಂದಿನ ಬೆಳೆ ಬೆಳೆಯಲು ಸಾಧ್ಯವಾಗುವುದಿಲ್ಲ. ಹೀಗಾಗಿ ಸರ್ಕಾರ ಈ ಕೂಡಲೇ ರೈತರ ಕಷ್ಟಗಳಿಗಳಿಗೆ ಸ್ಪಂದಿಸಲು ಅಗತ್ಯ ತುರ್ತು ಕ್ರಮ ಕೈಗೊಂಡು ಹೊರ ರಾಜ್ಯಗಳಿಗೆ ರೈತರ ಬೆಳೆಗಳನ್ನು ಸಾಗಾಟ ಮಾಡಲು ವಿಶೇಷ ಪರವಾನಗಿ ಅಥವಾ ಅನುಮತಿಯನ್ನು ಸರ್ಕಾರ ಹಾಗೂ ಜಿಲ್ಲಾಡಳಿತ ದೊರಕಿಸಿಕೊಡಬೇಕು ಎಂದು ಒತ್ತಾಯಿಸಿದರು.

ಕೊರೊನಾ ಲಾಕ್‌ಡೌನ್‌ನಿಂದ ಸಮಸ್ಯೆಗೆ ಒಳಗಾಗಿರುವ ಬಡವರಿಗೆ ಮತ್ತು ನಿರ್ಗತಿಕರಿಗೆ ಮಹಾನಗರ ಪಾಲಿಕೆ ವತಿಯಿಂದ ನೀಡುತ್ತಿರುವ 1000 ಆಹಾರದ ಕಿಟ್‌ ಸಾಕಾಗುತ್ತಿಲ್ಲ. ಹೀಗಾಗಿ ಹೆಚ್ಚುವರಿ ಆಹಾರ ಕಿಟ್‌ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಕೆಲವೇ ಕೆಲವು ಆಹಾರದ ಕಿಟ್‌ ವಿತರಿಸುವುದರಿಂದ ನಿಜವಾದ ಬಡವರಿಗೆ ಅನ್ಯಾಯವಾಗುವ ಸಾಧ್ಯತೆಯಿದೆ. ಹೀಗಾಗಿ ಯಾವ ವಾರ್ಡ್‌ಗಳಲ್ಲಿ ಆಹಾರದ ಕಿಟ್‌ ಅಭಾವ ಉಂಟಾಗುತ್ತದೋ ಅಲ್ಲಿ 1000ಕ್ಕೆ ಬದಲಾಗಿ ಒಂದೂವರೆ ಸಾವಿರ ಮತ್ತು ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಆಹಾರದ ಕಿಟ್‌ ನೀಡಬೇಕು ಎಂದು ಒತ್ತಾಯಿಸಿದರು. ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಎಚ್‌.ಎಸ್‌. ಸುಂದರೇಶ್‌, ಪ್ರಮುಖರಾದ ರಾಮೇಗೌಡ ಮತ್ತಿತರರು ಉಪಸ್ಥಿತರಿದ್ದರು .

ಟಾಪ್ ನ್ಯೂಸ್

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ

BYv-SMG

ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್‌ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ

SMG-Meggan

Shivamogga: ಮೆಗ್ಗಾನ್‌ ಆಸ್ಪತ್ರೆಯಲ್ಲಿ ಬಾಣಂತಿ ಸಾವು

1-sdasad

Shivamogga: ಭದ್ರಾ ಜಲಾಶಯದ ಎಡದಂಡೆ ನಾಲೆಗೆ ಇಂದಿನಿಂದಲೇ ನೀರು

6=anadpura

Anandapura: ಅಪರಿಚಿತ ವ್ಯಕ್ತಿಯ ಶವ ಪತ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

6

Manipal: ಅಪಾಯಕಾರಿ ರೀತಿಯಲ್ಲಿ ಬೈಕ್‌ ಚಾಲನೆ; ಪ್ರಕರಣ ದಾಖಲು

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

de

Kundapura: ಗುಲ್ವಾಡಿ; ಗಾಯಾಳು ಸಾವು

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.