ಶಿವಮೊಗ್ಗ ಶಾಂತ: ನಾಲ್ವರ ಬಂಧನ; ಪೊಲೀಸರ ಮೇಲೆ ಹಲ್ಲೆಗೆ ಯತ್ನ; ಆರೋಪಿ ಕಾಲಿಗೆ ಗುಂಡು

ಶಿವಮೊಗ್ಗ-ಭದ್ರಾವತಿಯಲ್ಲಿ ಮುಂದುವರಿದ ನಿಷೇಧಾಜ್ಞೆ

Team Udayavani, Aug 17, 2022, 7:05 AM IST

ಪ್ರಕ್ಷುಬ್ಧಗೊಂಡಿದ್ದ ಶಿವಮೊಗ್ಗ ಶಾಂತ; ಚಾಕು ಇರಿದು ಹಲ್ಲೆ ನಡೆಸಿದ್ದ ನಾಲ್ವರ ಬಂಧನ

ಶಿವಮೊಗ್ಗ: ಸಾವರ್ಕರ್‌ ಭಾವಚಿತ್ರ ಹಾಕಿದ್ದ ಸಂಬಂಧ ಉಂಟಾದ ಗಲಭೆ ಮತ್ತು ಗಾಂ ಧಿಬಜಾರ್‌ನಲ್ಲಿ ವ್ಯಕ್ತಿಯೊಬ್ಬನಿಗೆ ಚಾಕು ಇರಿತದ ಹಿನ್ನೆಲೆಯಲ್ಲಿ ಉಂಟಾಗಿದ್ದ ಪ್ರಕ್ಷುಬ್ಧ ಸ್ಥಿತಿ ಸದ್ಯ ತಣ್ಣಗಾಗಿದೆ.

ಪ್ರೇಮ್‌ಸಿಂಗ್‌ಗೆ ಚಾಕು ಇರಿದಿದ್ದ ಆರು ಆರೋಪಿಗಳ ಪೈಕಿ ನಾಲ್ವರು ಬಲೆಗೆ ಬಿದ್ದಿದ್ದಾರೆ. ಜೆ.ಸಿ.ನಗರದ ನದೀಮ್‌ (25), ಅಬ್ದುಲ್‌ ರೆಹಮಾನ್‌ (25), ಆರ್‌ಎಂಎಲ್‌ ನಗರದ ತನ್ವೀರ್‌ ಅಹಮ್ಮದ್‌, ಪ್ರಮುಖ ಆರೋಪಿ ಮೊಹಮ್ಮದ್‌ ಜಬೀವುಲ್ಲಾ (30) ಬಂಧಿತರು.

ತೀರ್ಥಹಳ್ಳಿಯ ನಮೋ ಶಂಕರ ಲೇಔಟ್‌ನಲ್ಲಿದ್ದ ಪ್ರಕರಣದ ಪ್ರಮುಖ ಆರೋಪಿ ಜಬೀ ಅಲಿಯಾಸ್‌ ಚರ್ಬಿ ಬಂಧನಕ್ಕೆ ತೆರಳಿದ್ದ ವೇಳೆ ಆರೋಪಿ ಪೊಲೀಸರ ಮೇಲೆಯೇ ಚಾಕುವಿನಿಂದ ಹಲ್ಲೆ ನಡೆಸಲು ಯತ್ನಿಸಿದ್ದಾಗ ವಿನೋಬನಗರ ಠಾಣೆ ಎಸ್‌ಐ ಮಂಜುನಾಥ್‌ ಕುರಿ ಆತನ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಜಬೀಯನ್ನು ಮೆಗ್ಗಾನ್‌ನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಜಬೀ ಹೊರತುಪಡಿಸಿ ಮೂರು ಜನ ಆರೋಪಿಗಳನ್ನು ನ್ಯಾಯಾಲಯ ಎರಡು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡಿದೆ.

ಈ ಮಧ್ಯೆ ಭದ್ರಾವತಿಯಲ್ಲಿ ಯುವಕನೊಬ್ಬನ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದ್ದರಿಂದ ಕೆಲಕಾಲ ಆತಂಕ ಉಂಟಾಗಿತ್ತು. ಎಲ್ಲೆಡೆ ಪೊಲೀಸ್‌ ಬಿಗಿ ಪಹರೆ ಹಾಕಲಾಗಿದ್ದು, ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ.

ನಿಷೇಧಾಜ್ಞೆ ಹಿನ್ನೆಲೆಯಲ್ಲಿ ಮಂಗಳವಾರ ನೆಹರು ರಸ್ತೆ, ಗಾಂ ಧಿಬಜಾರ್‌, ಓಟಿ ರಸ್ತೆ, ಎಂಕೆಕೆ ರಸ್ತೆ, ಬಿಎಚ್‌ ರಸ್ತೆಯಲ್ಲಿ ಅಂಗಡಿ ಮುಂಗಟ್ಟುಗಳನ್ನು ಬಂದ್‌ ಮಾಡಲಾಗಿತ್ತು. ಜನ ಸಂಚಾರ ಎಂದಿನಂತೆ ಇತ್ತು. ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ, ಭದ್ರಾವತಿ ಪಟ್ಟಣ ವ್ಯಾಪ್ತಿಯ ಶಾಲೆ-ಕಾಲೇಜಿಗೆ ರಜೆ ಘೋಷಿಸಿದ್ದರಿಂದ ವಿದ್ಯಾರ್ಥಿಗಳ ಓಡಾಟ ಇರಲಿಲ್ಲ. ಆರ್‌ಎಎಫ್‌ ತುಕಡಿ ಶಿವಪ್ಪ ನಾಯಕ ವೃತ್ತದಿಂದ ಅಮೀರ್‌ ಅಹಮದ್‌ ವೃತ್ತ, ಎಂಕೆಕೆ ರಸ್ತೆ, ಗಾಂಧಿ  ಬಜಾರ್‌, ಕೆ.ಆರ್‌.ಪುರಂ ಸೇರಿದಂತೆ ಹಳೆ ಶಿವಮೊಗ್ಗ ಭಾಗದಲ್ಲಿ ಪಥ ಸಂಚಲನ ನಡೆಸಿತು.

ವೈಯಕ್ತಿಕ ದ್ವೇಷಕ್ಕೆ ಭದ್ರಾವತಿಯಲ್ಲಿ ಹಲ್ಲೆ
ಭದ್ರಾವತಿಯಲ್ಲಿ ನಡೆದ ಹಲ್ಲೆ ವಿಚಾರ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದಂತೆ ಭಾವಚಿತ್ರ ವಿವಾದ ಇರಬಹುದೆಂದು ಶಂಕಿಸಲಾಗಿತ್ತು. ಆದರೆ ಇದು ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ನಡೆದ ಘಟನೆಯಾಗಿದೆ. ಅದಕ್ಕೆ ಪೂರಕವಾಗಿ ಹಲ್ಲೆಗೆ ಒಳಗಾದ ಸುನಿಲ್‌ ಕುರಿತಾದ ವಿಡಿಯೋ ವೈರಲ್‌ ಆಗಿದೆ. ಈ ಹಿಂದೆ ನಡೆದಿದ್ದ ಗಲಾಟೆ ಕಾರಣದಿಂದ ಜೈಲಿನಿಂದ ಹೊರಬಂದ ಮುಬಾರಕ್‌ ಎಂಬಾತ ಈಗ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಭದ್ರಾವತಿ ಹಳೇಟೌನ್‌ ಠಾಣೆಯಲ್ಲಿ ಹಲ್ಲೆ ಪ್ರಕರಣ ದಾಖಲಾಗಿದೆ.

ಶಿವಮೊಗ್ಗದ ಘಟನೆ ಹಿನ್ನೆಲೆಯಲ್ಲಿ ಐಜಿಪಿ ತ್ಯಾಗರಾಜನ್‌ ಸೋಮವಾರ ರಾತ್ರಿಯೇ ನಗರಕ್ಕಾಗಮಿಸಿದ್ದು ನಗರದ ಹಲವು ಪ್ರದೇಶಗಳಲ್ಲಿ ಸಂಚರಿಸಿ ಪರಿಶೀಲನೆ ನಡೆಸಿದರು. ಎನ್‌ಟಿ ರಸ್ತೆ, ನ್ಯೂ ಮಂಡ್ಲಿ, ಊರಗಡೂರು, ಸೀಗೆಹಟ್ಟಿ, ಗಾಂಧಿ  ಬಜಾರ್‌ನಲ್ಲಿ ಸಂಚರಿಸಿದರು. ಈ ಪ್ರದೇಶಗಳ ಸೂಕ್ಷ್ಮ ಪಾಯಿಂಟ್‌ಗಳಲ್ಲಿ ಕೆಎಸ್‌ಆರ್‌ಪಿ ತುಕಡಿ ನಿಯೋಜಿಸಿದ್ದಾರೆ.

ಡಬಲ್‌ ರೈಡ್‌ ಕ್ಯಾನ್ಸಲ್‌
ಗುರುವಾರ ರಾತ್ರಿ 10ರವರೆಗೆ ನಗರದಲ್ಲಿ ನಿಷೇಧಾಜ್ಞೆ ಮುಂದುವರೆಸಿರುವ ಹಿನ್ನೆಲೆಯಲ್ಲಿ ಎಡಿಜಿಪಿ ಅಲೋಕುಮಾರ್‌ ಸೋಮವಾರ ರಾತ್ರಿ ನಗರಕ್ಕಾಗಮಿಸಿದ್ದು, ಬಿಗಿ ಬಂದೋಬಸ್ತ್ ಮಾಡಲಾಗಿದೆ. 40 ವರ್ಷಕ್ಕಿಂತ ಕೆಳಗಿನವರು ಬೈಕ್‌ನಲ್ಲಿ ಡಬಲ್‌ ರೈಡ್‌ನ‌ಲ್ಲಿ ಹೋಗುವಂತಿಲ್ಲ. ಈ ನಿಯಮದಿಂದ ಮಹಿಳೆಯರಿಗೆ ವಿನಾಯಿತಿ ನೀಡಲಾಗಿದೆ. ರಾತ್ರಿ 9ರಿಂದ ಬೆಳಗಿನ 5ರವರೆಗೆ ದ್ವಿಚಕ್ರ ವಾಹನ ಸಂಚಾರ ನಿಷೇಧಿ ಸಲಾಗಿದೆ. ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮಂಗಳವಾರ ಭದ್ರಾವತಿ ಮತ್ತು ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿ ಸಲಾಗಿತ್ತು.

ಇಂದಿನಿಂದ ಶಾಲೆಗಳು ಪುನಾರಂಭ
ಶಿವಮೊಗ್ಗ ನಗರ ಹಾಗೂ ಭದ್ರಾವತಿ ಪಟ್ಟಣ ವ್ಯಾಪ್ತಿಯ ಶಾಲೆಗಳು ಆ.17ರಿಂದ ಎಂದಿನಂತೆ ಪುನಾರಂಭವಾಗಲಿವೆ. ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ಆ.16, 17ರಂದು ಜಿಲ್ಲಾಧಿಕಾರಿಗಳು ಶಾಲೆಗಳಿಗೆ ರಜೆ ಘೋಷಿಸಿದ್ದರು. ಆದರೆ ಪರಿಸ್ಥಿತಿ ತಹಬದಿಗೆ ಬಂದ ಹಿನ್ನೆಲೆಯಲ್ಲಿ ಇಂದಿನಿಂದ ಶಾಲೆಗಳು ಆರಂಭವಾಗಲಿವೆ.

ತುಮಕೂರಲ್ಲೂ ಕಿಡಿಗೇಡಿಗಳ ದುಷ್ಕೃತ್ಯ
ತುಮಕೂರು ನಗರದಲ್ಲಿಯೂ ವೀರ ಸಾವರ್ಕರ್‌ ಭಾವಚಿತ್ರ ಹರಿದು ಹಾಕಿದ ಪ್ರಕರಣ ಬೆಳಕಿಗೆ ಬಂದಿದೆ. ಆ.15ರ ಸ್ವಾತಂತ್ರ್ಯ ದಿನದ ಕಾರ್ಯಕ್ರಮಕ್ಕಾಗಿ ಶಾಸಕ ಶಾಸಕ ಜಿ.ಬಿ.ಜ್ಯೋತಿ ಗಣೇಶ್‌ ಅವರು ಭಾವಚಿತ್ರ ಹಾಕಿಸಿದ್ದರು. ಅವುಗಳನ್ನು ತೆರವುಗೊಳಿಸುವ ಮೊದಲೇ ಅವುಗಳನ್ನು ಹರಿದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಾಹುಲ್‌ ಕುಮಾರ್‌ ಶಹಪುರ್‌ ವಾಡ್‌ ಅವರಿಗೆ ದೂರು ನೀಡಿದ್ದಾರೆ. ಸುದ್ದಿ ತಿಳಿದ ಕೂಡಲೇ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸಿದ್ದಾರೆ. ಟೌನ್‌ ಹಾಲ್‌ ಬಿಜಿಎಸ್‌ ವೃತ್ತದಲ್ಲಿ ಪೊಲೀಸ್‌ ಭದ್ರತೆ ಒದಗಿಸಲಾಗಿದೆ.

ಶಿವಮೊಗ್ಗದಲ್ಲಿ ಮಂಗಳವಾರ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಪ್ರಕ್ರಿಯೆ ನಡೆಯುವಾಗ ಹೇಳಿಕೆ ನೀಡುವುದು ಸರಿಯಲ್ಲ. ಕಾನೂನಿನ ಪ್ರಕಾರ ಕಟ್ಟುನಿಟ್ಟಿನ ತನಿಖೆ ಮಾಡಲು ಆದೇಶಿಸಲಾಗಿದೆ. ಪೊಲೀಸರು ತಮ್ಮ ಕರ್ತವ್ಯ ಮಾಡಲಿದ್ದಾರೆ.
-ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ

ಟಾಪ್ ನ್ಯೂಸ್

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

6-ptr

Puttur: ಬಸ್ – ಬೈಕ್‌ ಅಪಘಾತ; ಸವಾರ ಸಾವು

Parliament; Pushing in front of Parliament House; Two MPs injured, allegations against Rahul Gandhi

Parliament; ಸಂಸತ್‌ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್‌ ವಿರುದ್ದ ಆರೋಪ

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

3

Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್‌ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

2

Mudbidri: ಸರಕಾರಿ ಬಸ್ಸಿಗಿಲ್ಲ ನಿಲ್ದಾಣ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.