Shimoga ಬಾಕ್ಸ್ ಪತ್ತೆ ವಿಚಾರ: ಇಬ್ಬರು ಪೊಲೀಸ್ ವಶಕ್ಕೆ; ಕ್ರಿಮಿನಲ್ ಹಿನ್ನೆಲೆ ಶಂಕೆ
Team Udayavani, Nov 6, 2023, 11:51 AM IST
ಶಿವಮೊಗ್ಗ: ಇಲ್ಲಿನ ರೈಲು ನಿಲ್ದಾಣದಲ್ಲಿ ಅನುಮಾನಾಸ್ಪದ ಬಾಕ್ಸ್ ಪತ್ತೆಯಾದ ವಿಚಾರಕ್ಕೆ ಸಂಬಂಧಿಸಿ ಸಿಸಿಟಿವಿ ದಾಖಲೆ ಆಧರಿಸಿ ಇಬ್ಬರನ್ನು ವಶಕ್ಕೆ ಪಡೆದಿದ್ದೇವೆ. ಮಾರುತಿ ಓಮಿನಿಯಲ್ಲಿ ಬಂದು ಬಾಕ್ಸ್ ಗಳನ್ನು ಇಟ್ಟು ಹೋಗಿದ್ದು ಕಂಡು ಬರುತ್ತದೆ. ಯಾಕೆ ಈ ಬಾಕ್ಸ್ ಇಟ್ಟರು, ಅವರ ಉದ್ದೇಶ ಏನು ಎಂಬುದು ಗೊತ್ತಾಗಬೇಕು. ಈ ಆಯಾಮದಲ್ಲಿ ತನಿಖೆ ನಡೆಯುತ್ತಿದೆ ಎಂದು ಎಸ್.ಪಿ. ಮಿಥುನ್ ಕುಮಾರ್ ಹೇಳಿದರು.
ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಬಾಕ್ಸ್ ನಲ್ಲಿ ಸ್ಫೋಟಕ ವಸ್ತುಗಳು ದೊರೆತಿಲ್ಲ. ನ. 3 ನೇ ತಾರಿಖು ಇಟ್ಟು ಯಾಕೆ ಹೋಗಿದ್ದರು ಎನ್ನುವುದರ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ. ವಶಕ್ಕೆ ಪಡೆದವರ ಕ್ರಿಮಿನಲ್ ಹಿನ್ನೆಲೆ ಕಂಡು ಬರುತ್ತಿದೆ. ಪರಿಶೀಲನೆ ನಡೆಸಿ ತನಿಖೆ ನಡೆಸಲಾಗುತ್ತಿದೆ ಎಂದರು.
ಮೇಡ್ ಇನ್ ಬಾಂಗ್ಲಾದೇಶ ಎಂಬ ಗೋಣಿಚೀಲದಲ್ಲಿ ಬಾಕ್ಸ್ ಸುತ್ತಲಾಗಿತ್ತು. ಆದರೆ ಬಾಕ್ಸ್ ಒಳಗಿರುವ ವಸ್ತುಗಳು ನಮಗೆ ಮುಖ್ಯ. ಈ ಬಗ್ಗೆ ನಮ್ಮ ತಜ್ಞರ ತಂಡ ಪರಿಶೀಲನೆ ನಡೆಸುತ್ತಿದ್ದಾರೆ. ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದರು.
ನಿನ್ನೆ ಹಲವು ಆಯಾಮಗಳಲ್ಲಿ ತನಿಖೆ ನಡೆಸಲಾಗಿದೆ. ಬಾಂಬ್ ನಿಷ್ಕ್ರಿಯ ದಳದ ಬೆಂಗಳೂರು ಸಿಬ್ಬಂದಿ ಬಂದು ಹೆಚ್ಚು ತನಿಖೆ ನಡೆಸಿದ್ದಾರೆ. ಅವರು ನಾಲ್ಕು ರೀತಿಯ ಪರೀಕ್ಷೆ ನಡೆಸಿದರು. ಅದರಲ್ಲಿ ಯಾವುದೇ ಸ್ಫೋಟಕ ವಸ್ತುಗಳು ಇಲ್ಲ ಎಂಬುದನ್ನು ಖಾತರಿಪಡಿಸಿಕೊಂಡು ಪರಿಶೀಲನೆ ನಡೆಸಿದರು. ಎರಡೂ ಬಾಕ್ಸ್ ಗಳಲ್ಲಿ ವೇಸ್ಟ್ ಪೇಪರ್ ಗಳು ಹಾಗೂ ಟೇಬಲ್ ಸಾಲ್ಟ್ ದೊರೆತಿದೆ. ಪ್ರಾಥಮಿಕ ಹಂತದ ತನಿಖೆಯಲ್ಲಿ ಇದು ತಿಳಿದು ಬಂದಿದೆ ಎಂದು ಮಿಥುನ್ ಕುಮಾರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫಲ: ವಿಜಯೇಂದ್ರ ಮೇಲೂ ಪರಿಣಾಮ?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.