Shimoga: ಮೊಬೈಲ್ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ
Team Udayavani, Dec 26, 2024, 1:06 PM IST
ಶಿವಮೊಗ್ಗ: ಮೊಬೈಲ್ ಕೊಡದಿದ್ದಕ್ಕೆ ಆತ್ಮಹತ್ಯೆ ಯತ್ನ ಮಾಡಿದ್ದ ಕಾಲೇಜು ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಗುರುವಾರ (ಡಿ.26) ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹಾರನಹಳ್ಳಿಯಲ್ಲಿ ಘಟನೆ ನಡೆದಿದೆ.
ಧನುಶ್ರೀ (20) ಆತ್ಮಹತ್ಯೆ ಮಾಡಿಕೊಂಡ ಯುವತಿ. ಕಳೆದ ಸೋಮವಾರ ಸಂಜೆ 7.30 ಗೆ ಕಾಲೇಜು ಮುಗಿಸಿ ಮನೆಗೆ ಬಂದಾಗ ಘಟನೆ ನಡೆದಿದೆ.
ಮೊಬೈಲ್ ಹಾಗೂ ಟಿವಿ ನೋಡಬೇಡ ಎಂದು ತಾಯಿ ಹೇಳಿದಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕಳೆನಾಶಕ ಕುಡಿದು ಆತ್ಮಹತ್ಯೆ ಯತ್ನ ಮಾಡಿದ್ದು, ಆಯನೂರು ಸರ್ಕಾರಿ ಆಸ್ಪತ್ರೆಯಲ್ಲಿ ಮೊದಲು ಚಿಕಿತ್ಸೆ ನೀಡಲಾಗುತ್ತು. ನಂತರ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅದರೆಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ.
ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಡೆಂಗ್ಯೂ, ಮಂಗನಕಾಯಿಲೆ ನಿಯಂತ್ರಣದ ಪೂರ್ವಭಾವಿ ಸಭೆ
Karnataka BJP: ಒಂದು ವಾರದ ಬಳಿಕ ಎಲ್ಲವೂ ಸರಿಯಾಗುತ್ತದೆ…: ವಿಜಯೇಂದ್ರ ವಿಶ್ವಾಸ
ಲಿಂಗನಮಕ್ಕಿ ಪವರ್‌ಹೌಸ್: 40 ವರ್ಷದ ಟರ್ಬೈನ್ ರನ್ನರ್ ಸ್ಥಗಿತ
K. S. Eshwarappa; ಫೆ.4ಕ್ಕೆ ಕ್ರಾಂತಿವೀರ ಬ್ರಿಗೇಡ್ ಉದ್ಘಾಟನೆ:1008 ಸ್ವಾಮಿಗಳ ಪಾದಪೂಜೆ
Shivamogga: ಸಾಲಬಾಧೆಗೆ ಬೇಸತ್ತು ರೈತ ಆತ್ಮ*ಹತ್ಯೆ