ಕೋವಿಡ್ ನಿಯಂತ್ರಣಕ್ಕೆ ಜಾಗೃತಿ ಅಗತ್ಯ
Team Udayavani, Jun 8, 2020, 1:38 PM IST
ಸಾಂದರ್ಭಿಕ ಚಿತ್ರ
ಶಿವಮೊಗ್ಗ: ಕೋವಿಡ್-19 ವೈರಸ್ ಹರಡುವಿಕೆ ನಿಯಂತ್ರಿಸುವ ದೃಷ್ಟಿಯಿಂದ ಜಾಗೃತಿ ವಹಿಸುವುದು ತೀರಾ ಅವಶ್ಯಕ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಜೆ.ಆರ್.ವಾಸುದೇವ್ ಹೇಳಿದರು.
ನಗರದ ಗಾರ್ಡನ್ ಏರಿಯಾದಲ್ಲಿ ನಟರಾಜ ಸಮೂಹ ಸಂಸ್ಥೆ ವತಿಯಿಂದ ಜಿಲ್ಲಾ ಹಾರ್ಡ್‌ವೇರ್ ವರ್ತಕರಿಗೆ ಉಚಿತವಾಗಿ 500 ಸ್ಯಾನಿಟೈಸರ್ ಕಿಟ್ ಗಳನ್ನು ವಿತರಿಸಿ ಮಾತನಾಡಿದ ಅವರು, ಕೋವಿಡ್-ಹರಡುವಿಕೆ ತಡೆಗಟ್ಟಲು ಪ್ರತಿಯೊಬ್ಬರು ಮಾಸ್ಕ್ ಹಾಗೂ ಸ್ಯಾನಿಟೈಸರ್ ಅನ್ನು ಕಡ್ಡಾಯವಾಗಿ ಬಳಸಬೇಕೆಂದು ಸಲಹೆ ನೀಡಿದರು. ಸಾರ್ವಜನಿಕ ವಲಯದ ಉದ್ಯಮದಲ್ಲಿ ನಿರಂತರ ಸಂಪರ್ಕದಲ್ಲಿರುವ ಹಾರ್ಡ್ ವೇರ್ಸ್ ವರ್ತಕರು ಮಹಾಮಾರಿ ವೈರಸ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ಪಾಲಿಸಬೇಕು. ನಟರಾಜ ಸಮೂಹ ಸಂಸ್ಥೆಯವರು ಎಲ್ಲ ವರ್ತಕರಿಗೂ ಸ್ಯಾನಿಟೈಸರ್ ಕಿಟ್‌ಗಳನ್ನು ವಿತರಿಸುತ್ತಿರುವುದು ಅಭಿನಂದನಾರ್ಹ ಎಂದರು. ಪ್ರತಿನಿತ್ಯ ವರ್ತಕರು ವ್ಯಾಪಾರ ವಹಿವಾಟು ಮಾಡುವುದರಿಂದ ಕೋವಿಡ್ ವೈರಸ್ ಹೇಗೆ ಬರುತ್ತದೆ ಎಂದು ಊಹಿಸಲು ಸಾಧ್ಯವಿಲ್ಲ. ಆದ್ದರಿಂದ ಸಾಧ್ಯವಾದಷ್ಟು ಮಟ್ಟಿಗೆ ಡಿಜಿಟಲ್ ಪೇಮೆಂಟ್ ಮೂಲಕ ವ್ಯವಹರಿಸಬೇಕು. ಸಾಮಾಜಿಕ ಅಂತರದೊಂದಿಗೆ ಕೆಲಸ ಮಾಡಬೇಕು ಎಂದರು.
ನಟರಾಜ ಮಾರ್ಕೆಟಿಂಗ್ ಮಾಲೀಕ ಡಿ.ಎಲ್.ಮಂಜುನಾಥ್ ಮಾತನಾಡಿ, ಕೋವಿಡ್ ಹಿನ್ನೆಲೆಯಲ್ಲಿ ವರ್ತಕರು ವ್ಯಾಪಾರ ಮಾಡುವ ಸ್ಥಳದಲ್ಲಿ ಅತ್ಯಂತ ಜಾಗರೂಕರಾಗಿ ಇರಬೇಕು. ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಪ್ರತಿಯೊಬ್ಬರು ಮಾಸ್ಕ್ ಧರಿಸಬೇಕು ಎಂದು ಹೇಳಿದರು. ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ನಿರ್ದೇಶಕ ಡಿ.ಪಿ.ಸಂದೀಪ್, ಶ್ರೀಮಾತಾ ಎಂಟರ್‌ಪ್ರ„ಸಸ್ ಮಾಲೀಕ ಡಿ.ಎಂ.ಅರ್ಜುನ್, ಎಸ್‌ಎಲ್‌ಆರ್ ಇಂಡಸ್ಟ್ರೀಸ್ ಮಾಲೀಕ ಸಿ.ಎನ್. ಶ್ರೀನಿವಾಸ್, ಸ್ಮಾರ್ಟ್ ಕಲೆಕ್ಷನ್ ಮಾಲೀಕ ಡಿ.ಎಲ್.ನಟರಾಜ್, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಎಸ್.ಎಸ್.ಉದಯ್‌ಕುಮಾರ್, ಕಾರ್ಯದರ್ಶಿ ಬಿ.ಗೋಪಿನಾಥ್, ನಿರ್ದೇಶಕರದ ಎ.ಎಂ.ಸುರೇಶ್, ಜಿ.ವಿಜಯ್‌ಕುಮಾರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.