ಮತ್ತೆ 37 ಮಂದಿಗೆ ಕೋವಿಡ್

141 ಮಂದಿ ಗುಣಮುಖ227 ಸಕ್ರಿಯ ಪ್ರಕರಣಕಂಟೈನ್‌ಮೆಂಟ್‌ ಝೋನ್‌ನಲ್ಲಿ ಏರಿಕೆ

Team Udayavani, Jul 10, 2020, 1:11 PM IST

10July-12

ಶಿವಮೊಗ್ಗ: ಜಿಲ್ಲೆಯಲ್ಲಿ ಗುರುವಾರ 37 ಮಂದಿಗೆ ಕೋವಿಡ್ ಪಾಸಿಟಿವ್‌ ಬಂದಿದೆ. ಈವರೆಗೆ 141 ಮಂದಿ ಗುಣಮುಖರಾಗಿದ್ದು 227 ಸಕ್ರಿಯ ಪ್ರಕರಣಗಳಿವೆ. ಗಾಂಧಿ ನಗರ ನಿವಾಸಿ ಪಿ-14381 ಜತೆ ಪ್ರಾಥಮಿಕ ಸಂಪರ್ಕ ಹೊಂದಿರುವ ಇಬ್ಬರಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ.

ಪಿ-18070 ಗೋಪಾಳದ ವ್ಯಕ್ತಿಯೊಬ್ಬರೊಂದಿಗೆ ಸಂಪರ್ಕ ಹೊಂದಿದ್ದ ಎರಡು ವರ್ಷದ ಮಗು ಸೇರಿದಂತೆ 30 ವರ್ಷದ ಮಹಿಳೆಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಉಪ್ಪಾರ ಕೇರಿಗೆ ಬಂದಿದ್ದ ಪಿ-21631ಗೆ ಕೋವಿಡ್ ಪಾಸಿಟಿವ್‌ ಬಂದ ನಂತರ ಗಾಂಧಿ  ಬಜಾರ್‌ನಲ್ಲಿ ಹೈ ಅಲರ್ಟ್‌ ಘೋಷಿಸಲಾಗಿತ್ತು. ಜನನಿಬಿಡ ಪ್ರದೇಶ ಆಗಿರುವುದರಿಂದ ಮುತುವರ್ಜಿ ವಹಿಸಲಾಗಿತ್ತು. ಆದರೀಗ, ವ್ಯಕ್ತಿ ಜತೆಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದ 22 ವರ್ಷದ ಮಹಿಳೆಯಲ್ಲೂ ಸೋಂಕು ದೃಢಪಟ್ಟಿದೆ. ಹೀಗಾಗಿ, ಬಡಾವಣೆಯಲ್ಲಿ ಜನರು ಭೀತಿಗೀಡಾಗಿದ್ದಾರೆ. ಇತ್ತೀಚೆಗೆ ಟ್ಯಾಂಕ್‌ ಮೊಹಲ್ಲಾದ 70 ವರ್ಷದ (ಪಿ-18073) ವೃದ್ಧೆ ಮೃತಪಟ್ಟಿದ್ದರು. ಈಕೆಯೊಂದಿಗೆ ಸಂಪರ್ಕ ಹೊಂದಿದ್ದ 1 ವರ್ಷದ ಮಗುವಿನಲ್ಲಿ ಕೋವಿಡ್ ಪಾಸಿಟಿವ್‌ ಬಂದಿದೆ. ಟ್ಯಾಂಕ್‌ ಮೊಹಲ್ಲಾದಲ್ಲೂ ವೃದ್ಧೆಯ ಸಾವು ಜನರು ಧೃತಿಗಡುವಂತೆ ಮಾಡಿದೆ. ಪಿ-25799 ಜತೆ ಸಂಪರ್ಕ ಹೊಂದಿದ್ದ ಮೂವರಿಗೆ ಸೋಂಕು ತಗುಲಿದೆ.

10 ಮಂದಿಯಲ್ಲಿ ರೋಗದ ಲಕ್ಷಣಗಳು ಪತ್ತೆಯಾಗಿವೆ. ಏಳು ಜನರಿಗೆ ಯಾವುದೇ ಟ್ರಾವೆಲ್‌ ಹಿಸ್ಟರಿ ಇಲ್ಲದಿದ್ದರೂ ಸೋಂಕು ಹೇಗೆ ತಗುಲಿದೆ ಎಂಬುದೇ ಜಿಲ್ಲಾಡಳಿತದ ಪಾಲಿಗೆ ದೊಡ್ಡ ಸವಾಲಾಗಿದೆ. ಇವರ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ. ಬೆಂಗಳೂರಿನಿಂದ ಆಗಮಿಸಿದ್ದ ಎಂಟು ಮಂದಿ ಮತ್ತು ಆಂಧ್ರ ಪ್ರದೇಶದಿಂದ ಬಂದಿದ್ದ ಒಬ್ಬರಲ್ಲಿ ಸೋಂಕು ದೃಢಪಟ್ಟಿದೆ. ಬೆಂಗಳೂರಿನಿಂದ ತೀರ್ಥಹಳ್ಳಿ ತಾಲೂಕು ಮಂಡಗದ್ದೆಯ ಸಿಂದೋಡಿ ಗ್ರಾಮಕ್ಕೆ ಬಂದಿದ್ದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿತ್ತು. ಆತನಿಗೆ ಮೆಗ್ಗಾನ್‌ ಆಸ್ಪತ್ರೆಯ ಕ್ವಾರಂಟೈನ್‌ ವಾರ್ಡ್‌ ನಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ. ಆತ ಗುಣಮುಖನಾಗಿ ಬಿಡುಗಡೆ ಕೂಡ ಆಗಿದ್ದಾನೆ. ಆದರೀಗ, ಪ್ರಾಥಮಿಕ ಸಂಪರ್ಕ ಹೊಂದಿದ್ದ ಆತನ ಅತ್ತೆಗೂ ಕೋವಿಡ್ ಪಾಸಿಟಿವ್‌ ಬಂದಿದೆ. ರೋಗದ ಲಕ್ಷಣಗಳು ಕಂಡುಬಂದಿದ್ದರಿಂದ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗಿದ್ದು, ಸೋಂಕಿರುವುದು ದೃಢಪಟ್ಟಿದೆ.

ಕಂಟೈನ್‌ಮೆಂಟ್‌ ಝೋನ್‌ ಏರಿಕೆ: ನಗರದ ನಾನಾ ಕಡೆ ಕೋವಿಡ್ ಪಾಸಿಟಿವ್‌ ಬಂದ ಹಿನ್ನೆಲೆಯಲ್ಲಿ ಹಲವೆಡೆ ಸೀಲ್‌ ಡೌನ್‌ ಮಾಡಲಾಗಿದೆ. ಮೊಬೈಲ್‌ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ. ಅವರ ಮನೆ ಒ.ಟಿ. ರಸ್ತೆಯಲ್ಲಿದ್ದು, ನೂರು ಮೀಟರ್‌ ವ್ಯಾಪ್ತಿಯಲ್ಲಿ ಸೀಲ್‌ಡೌನ್‌ ಮಾಡಲಾಗಿದೆ. ಮಧ್ಯಾಹ್ನ ಒ.ಟಿ. ರಸ್ತೆಯನ್ನು ಬಂದ್‌ ಮಾಡಲಾಗಿದೆ. ಹೀಗಾಗಿ, ಈ ಭಾಗದಲ್ಲಿರುವ ಅಂಗಡಿ, ಮುಂಗಟ್ಟು ಮಾಲೀಕರಿಗೆ ಭೀತಿ ಶುರುವಾಗಿದೆ. ಗಾಂಧಿ  ಬಜಾರ್‌, ಮಿಳಘಟ್ಟ, ಓಲ್ಡ್‌ ಬಾರ್‌ ಲೈನ್‌ ರೋಡ್‌, ಶರಾವತಿ ನಗರ, ಕುಂಬಾರಗುಂಡಿ, ನ್ಯೂಮಂಡ್ಲಿ, ನಿರ್ಮಲ ನರ್ಸಿಂಗ್‌ ಹೋಂ ರಸ್ತೆ ಸೇರಿದಂತೆ ಹಲವೆಡೆ ರಸ್ತೆಗಳಿಗೆ ಅಡ್ಡಲಾಗಿ ಬ್ಯಾರಿಕೇಡ್‌ಗಳನ್ನು ಹಾಕಿ ಕಂಟೈನ್‌ಮೆಂಟ್‌ ಝೋನ್‌ಗಳೆಂದು ಘೋಷಿಸಲಾಗಿದೆ.

ಟಾಪ್ ನ್ಯೂಸ್

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

sagara

Sagara: ಕಾಡಾನೆಗಳ ಹಾವಳಿ; ಲಕ್ಷಾಂತರ ರೂ. ಬೆಳೆ ನಷ್ಟ

19-thirthahalli

Thirthahalli: ನದಿಗೆ ಹಾರಿ ಕಾಲೇಜು ವಿದ್ಯಾರ್ಥಿ ಮೃತ್ಯು

1-edd

Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

accident

Kundapura: ಕಾರು ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.