ಮತ್ತೆ ಮೂವರಿಗೆ ಕೋವಿಡ್
Team Udayavani, Jun 25, 2020, 12:40 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಶಿವಮೊಗ್ಗ: ಜಿಲ್ಲೆಯಲ್ಲಿ ಬುಧವಾರ ಮೂರು ಜನರಲ್ಲಿ ಸೋಂಕು ಪತ್ತೆಯಾಗಿದೆ. ಈವರೆಗೆ 119 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 88 ಜನರು ಗುಣಮುಖರಾಗಿದ್ದಾರೆ. 30 ಸಕ್ರಿಯ ಪ್ರಕರಣಗಳಿವೆ.
ಬುಧವಾರ ಇಲ್ಲಿನ ಪುರಲೆಯಲ್ಲಿ ವಾಸವಾಗಿದ್ದ ಮೂವರಲ್ಲಿ ಬುಧವಾರ ಕೋವಿಡ್ ಸೋಂಕು ಪತ್ತೆಯಾಗಿವೆ. ಮಹಾರಾಷ್ಟ್ರದ ಪುಣೆಯಿಂದ ಜೂನ್ 4ರಂದು ಶಿವಮೊಗ್ಗಕ್ಕೆ ಬಂದಿದ್ದ ಇವರನ್ನು ಜೂ.9ರ ವರೆಗೆ ಸಾಂಸ್ಥಿಕ ಕ್ವಾರಂಟೈನ್ ನಲ್ಲಿ ಇರಿಸಲಾಗಿತ್ತು. ಈ ಅವಧಿಯಲ್ಲಿ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿದಾಗ ವರದಿ ನೆಗೆಟಿವ್ ಬಂದಿತ್ತು. ಹೀಗಾಗಿ, ಅವರನ್ನು ಹೋಂ ಕ್ವಾರಂಟೈನ್‌ನಲ್ಲಿ ಇರುವಂತೆ ನಿರ್ದೇಶನ ನೀಡಲಾಯಿತ್ತು. ಜೂ.18ರಂದು ಇವರಲ್ಲಿ ಐಎಲ್‌ಐ ಲಕ್ಷಣಗಳು ಕಂಡುಬಂದಿದ್ದು, ತಕ್ಷಣ ಆರೋಗ್ಯ ಇಲಾಖೆ ಸಿಬ್ಬಂದಿ ಇವರ ಸ್ವಾಬ್ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿದ್ದಾರೆ. ಆಗ ಮೂವರಲ್ಲಿ ಕೊರೊನಾ ಸೋಂಕಿರುವುದು ದೃಢಪಟ್ಟಿದೆ.
14 ಜನ ಪ್ರಾಥಮಿಕ ಸಂಪರ್ಕ: ಪಿ-9897 (36 ವರ್ಷ), ಪಿ-9898 (20) ಮತ್ತು ಪಿ-9899(21) ಇವರು ಶಿವಮೊಗ್ಗದ ಮಾಚೇನಹಳ್ಳಿ ಕೈಗಾರಿಕಾ ವಲಯದಲ್ಲಿರುವ ಶಾಹಿ ಗಾರ್ಮೆಂಟ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಆದರೆ, ಪುಣೆಯಿಂದ ಶಿವಮೊಗ್ಗೆಕ್ಕೆ ವಾಪಸ್ ಬಂದ ಬಳಿಕ ಅವರು ಕರ್ತವ್ಯಕ್ಕೆ ಹಾಜರಾಗಿಲ್ಲ. ಆರೋಗ್ಯ ಇಲಾಖೆ ನಿರ್ದೇಶನದಂತೆ ಮನೆಯಲ್ಲಿಯೇ ಇದ್ದರು. ಆದರೆ ಈ ಅವಧಿಯಲ್ಲಿ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುವ ಸಹೋದ್ಯೋಗಿಗಳು ಯೋಗಕ್ಷೇಮ ವಿಚಾರಿಸಲು ಪುರಲೆಯಲ್ಲಿರುವ ಮನೆಗೆ ಭೇಟಿ ನೀಡಿದ್ದಾರೆ. ಈ ವೇಳೆ, 14 ಜನ ಸಂಪರ್ಕಕ್ಕೆ ಬಂದಿರುವುದು ಪರಿಶೀಲನೆ ವೇಳೆ ತಿಳಿದುಬಂದಿದೆ. ಅವರನ್ನೂ ಕ್ವಾರಂಟೈನ್ ಮಾಡಲಾಗಿದೆ. ತಹಶೀಲ್ದಾರ್ ನಾಗರಾಜ್ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿ ಕೂಡ ಗಾರ್ಮೆಂಟ್ಸ್ ಗೆ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ. ಕಾರ್ಖಾನೆಯನ್ನು ಸ್ಯಾನಿಟೈಸ್ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.