ಒಂದೇ ಕುಟುಂಬದ ನಾಲ್ವರಿಗೆ ಕೋವಿಡ್
Team Udayavani, Jun 29, 2020, 12:51 PM IST
ಶಿವಮೊಗ್ಗ: ನಗರದ ಬಸವನಗುಡಿಯಲ್ಲಿ ಒಂದೇ ಕುಟುಂಬದ ನಾಲ್ಕು ಜನರಿಗೆ ಕೋವಿಡ್ ಪಾಸಿಟಿವ್ ಬಂದಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 146ಕ್ಕೆ ಏರಿಕೆಯಾಗಿದೆ.
ಇತ್ತೀಚೆಗೆ ಭದ್ರಾವತಿಯ ಬಸ್ ಏಜೆಂಟ್ ಒಬ್ಬರಿಗೆ ಕೋವಿಡ್ ಸೋಂಕಿರುವುದು ದೃಢಪಟ್ಟಿತ್ತು. ಆತ ನಗರದ ಬಸವನಗುಡಿಯಲ್ಲಿರುವ ಸಂಬಂಧಿಕರ ಮನೆಯಲ್ಲಿ ಮರ್‍ನಾಲ್ಕು ದಿನಗಳ ತಂಗಿದ್ದ. ಹೀಗಾಗಿ, ಕುಟುಂಬದಲ್ಲಿರುವವರಲ್ಲೂ ಸೋಂಕು ಪತ್ತೆಯಾಗಿದೆ. ಭದ್ರಾವತಿಯಲ್ಲಿ ಬಸ್ ಏಜೆಂಟ್‌ನಾಗಿ ಕೆಲಸ ಮಾಡುತ್ತಿದ್ದ ಈತನೊಂದಿಗೆ ಎಂಟು ಜನ ಪ್ರಾಥಮಿಕ ಸಂಪರ್ಕದಲ್ಲಿರುವುದು ಪರಿಶೀಲನೆ ವೇಳೆ ಬೆಳಕಿಗೆ ಬಂದಿದೆ. ತಕ್ಷಣ ಎಂಟೂ ಜನರನ್ನು ಕ್ವಾರಂಟೈನ್ ಮಾಡಲಾಗಿತ್ತು. ಅದರಲ್ಲಿ ನಾಲ್ವರಿಗೆ ಕೋವಿಡ್ ದೃಢಪಟ್ಟಿದೆ.
ಈತನೊಂದಿಗೆ ಇನ್ನೂ ಸಾಕಷ್ಟು ಜನ ಸಂಪರ್ಕದಲ್ಲಿದ್ದರು. ಅದನ್ನು ಪತ್ತೆ ಹಚ್ಚಲಾಗುತ್ತಿದೆ. ಹಾಗಾಗಿ, ಬಸವನಗುಡಿ ಪ್ರದೇಶವನ್ನು ಸೀಲ್‌ಡೌನ್ ಮಾಡಲಾಗಿದ್ದು, ಸಾರ್ವಜನಿಕರ ಓಡಾಟದ ಮೇಲೆ ನಿಗಾ ಇಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Puttur: ಬಸ್ – ಬೈಕ್ ಅಪಘಾತ; ಸವಾರ ಸಾವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.