ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡಿ
ದೂರು ಬರದಂತೆ ಕೆಲಸ ನಿರ್ವಹಿಸಿನಿಗದಿತ ಸಮಯಕ್ಕೆ ಕೆಲಸಕ್ಕೆ ಹಾಜರಾಗಿಖಾಲಿ ಹುದ್ದೆಗಳ ಭರ್ತಿಗೆ ಕ್ರಮ
Team Udayavani, Apr 30, 2020, 3:34 PM IST
ಶಿವಮೊಗ್ಗ: ಸಿಮ್ಸ್‌ನಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ಸಭೆ ನಡೆಯಿತು
ಶಿವಮೊಗ್ಗ: ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ದೊರಕಬೇಕು. ಯಾವುದೇ ದೂರು ಕೇಳಿ ಬರಬಾರದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ಮೆಗ್ಗಾನ್ ಆಸ್ಪತ್ರೆ ಸಭಾಂಗಣದಲ್ಲಿ ಬುಧವಾರ ಆಸ್ಪತ್ರೆ ವೈದ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಆಸ್ಪತ್ರೆಯ ಮೇಲಧಿಕಾರಿಗಳು ಸಮಯಕ್ಕೆ ಸರಿಯಾಗಿ ಕೆಲಸ ಮಾಡಬೇಕು. ಆಗ ಕೆಳಗಿನ ಸಿಬ್ಬಂದಿ ಕೂಡ ತಮ್ಮ ಕರ್ತವ್ಯವನ್ನು ಸರಿಯಾಗಿ ನಿಭಾಯಿಸುತ್ತಾರೆ. ಯಾವುದೇ ಕಾರಣಕ್ಕೂ ದೂರು ಕೇಳಿ ಬರಬಾರದು ಎಂದರು. ಮೆಗ್ಗಾನ್ ಆಸ್ಪತ್ರೆಯಲ್ಲಿ ಕೆಲವು ವಿಭಾಗದಲ್ಲಿ ಸರಿಯಾಗಿ ಚಿಕಿತ್ಸೆ ದೊರಕುತ್ತಿಲ್ಲ ಎಂಬ ದೂರು ಇದೆ. ಇಂತಹ ಕೆಟ್ಟ ಅಭಿಪ್ರಾಯ ಹೋಗಲಾಡಿಸಬೇಕು. ಪ್ರತಿ ಬಾರಿ ಸಭೆ ನಡೆದಾಗ ಈ ವಿಷಯದ ಕುರಿತು ಚರ್ಚೆ ನಡೆಸುವುದು ಸರಿಯಲ್ಲ ಎಂದು ಹೇಳಿದರು. ಆಸ್ಪತ್ರೆಯಲ್ಲಿನ ಖಾಲಿ ಹುದ್ದೆ ಭರ್ತಿ ರೋಸ್ಟರ್ ಪದ್ಧತಿ ಪ್ರಕಾರ ನಡೆಸಬೇಕು ಎಂದು ಹೇಳಿದರು.
ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಮಾತನಾಡಿ, ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲು ಕ್ರಮ ಕೈಗೊಳ್ಳಬೇಕು. ಆಸ್ಪತ್ರೆಗೆ ದಾಖಲಾಗುವ ಪ್ರತಿ ರೋಗಿಗಳ ದಾಖಲಾತಿಯನ್ನು ತಪ್ಪದೇ ಮಾಡಿಕೊಳ್ಳಬೇಕು. ಬಯೋಮೆಟ್ರಿಕ್ ವ್ಯವಸ್ಥೆ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. ಸಿಮ್ಸ್ ನಿರ್ದೇಶಕರು, ಸರ್ಜನ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.