ಕುಡಿವ ನೀರಿನ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ
ನಿಗದಿತ ಅವಧಿಯಲ್ಲಿ ಕಾಮಗಾರಿ ಮುಗಿಯದಿದ್ದಲ್ಲಿ ಅಧಿಕಾರಿಗಳೇ ಹೊಣೆ: ಸಚಿವ ಈಶ್ವರಪ್ಪ
Team Udayavani, Jun 10, 2020, 2:36 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಶಿವಮೊಗ್ಗ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೈಗೊಂಡಿರುವ ಕುಡಿಯುವ ನೀರಿನ ಕಾಮಗಾರಿಗಳನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸಬೇಕು. ಇಲ್ಲವಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳೇ ಹೊಣೆ ಹೊರಬೇಕಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಎಸ್. ಈಶ್ವರಪ್ಪ ಖಡಕ್ ಸೂಚನೆ ನೀಡಿದರು.
ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಮಂಗಳವಾರ ಕುಡಿಯುವ ನೀರಿನ ಸರಬರಾಜು ಮತ್ತು ಕಾಮಗಾರಿಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಮಾತನಾಡಿ, ನಗರದ 35 ವಾರ್ಡ್ ಗಳಲ್ಲಿ ನಡೆಯುತ್ತಿರುವ ಕುಡಿಯುವ ನೀರಿನ ಕಾಮಗಾರಿಯನ್ನು ಜುಲೈ 8ರೊಳಗೆ ಮುಗಿಸುವಂತೆ ಗಡುವು ನೀಡಿದರು. ಮಹಾನಗರ ಪಾಲಿಕೆ ಸದಸ್ಯ ಎಸ್.ಎನ್. ಚನ್ನಬಸಪ್ಪ ಮಾತನಾಡಿ, ನಗರದ ಅನೇಕ ವಾರ್ಡ್ ಗಳ ಟ್ಯಾಂಕ್‌ಗಳಲ್ಲಿ ನೀರು ಸಂಪೂರ್ಣ ತುಂಬುತ್ತಿಲ್ಲ. ಮೊದಲು ಈ ಸಮಸ್ಯೆ ಬಗೆಹರಿದಲ್ಲಿ ಮಾತ್ರ ಎಲ್ಲಾ ವಾರ್ಡ್‌ಗಳಲ್ಲಿ ಸಮರ್ಪಕವಾಗಿ ನೀರು ಸರಬರಾಜು ಮಾಡಲು ಸಾಧ್ಯ. ಕೂಡಲೇ ಈ ಬಗ್ಗೆ ಗಮನಹರಿಸಿ ಎಂದು ಸಚಿವರಿಗೆ ತಿಳಿಸಿದರು. ಇದಕ್ಕೆ ಧ್ವನಿಗೂಡಿಸಿದ ಸದಸ್ಯ ಶಂಕರಗನ್ನಿ, ಅಧಿಕಾರಿಗಳ ನಡುವಿನ ಸಮನ್ವಯತೆಯ ಕೊರತೆಯಿಂದ ನೀರಿನ ಸಮಸ್ಯೆ ಉಂಟಾಗಿದೆ. ಅಧಿಕಾರಿಗಳ ನಡುವೆ ಹೊಂದಾಣಿಕೆ ಮುಖ್ಯ. ಕೋಟಿಗಟ್ಟಲೆ ಖರ್ಚು ಮಾಡಿ ಕಾಮಗಾರಿ ನಡೆಸುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಈ ಕುರಿತು ಸಂಬಂಧ ಪಟ್ಟ ಅಧಿಕಾರಿ ವಿಚಾರಿಸಿದ ಈಶ್ವರಪ್ಪ, ಟ್ಯಾಂಕ್‌ಗಳಲ್ಲಿ ನೀರು ಸಂಪೂರ್ಣ ತುಂಬಬೇಕು. ಇದರಲ್ಲಿ ಯಾವುದೇ ತೊಡಕುಗಳಿದ್ದರೆ ಕೂಡಲೇ ಪೂರ್ಣಗೊಳಿಸಬೇಕು ಹಾಗೂ ನಾಳೆ ಸಂಜೆ 5 ಗಂಟೆಗೆ ಕುಡಿಯುವ ನೀರಿನ ಮೇಲ್ವಿಚಾರಣೆ ನಡೆಸುವ ಅಧಿಕಾರಿಗಳ ಸಭೆ ಕರೆಯಲು ಸೂಚಿಸಿದರು. ನಗರದಲ್ಲಿ ಯಾವ, ಯಾವ ವಾರ್ಡ್‌ಗಳಲ್ಲಿ ಯುಜಿಡಿ ಕಾಮಗಾರಿ ಪೂರ್ಣಗೊಂಡಿದೆ ಮತ್ತು ಕಾಮಗಾರಿ ಪ್ರಗತಿಯಲ್ಲಿರುವ ವಾರ್ಡ್‌ಗಳ ಸಮಗ್ರ ವಿವರ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದರು. ಅಲ್ಲದೆ ಯುಜಿಡಿ ಕಾಮಗಾರಿ ಮುಗಿದಿರುವ ಕಡೆಗಳಲ್ಲಿ ಆಯಾ ವಾರ್ಡ್‌ನ ಪಾಲಿಕೆ ಸದಸ್ಯರು ಕೂಡಲೇ ಮನೆಗಳಿಗೆ ಸಂಪರ್ಕ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಅಶ್ವಥನಗರ, ಎಲ್ .ಬಿ.ಎಸ್. ನಗರ, ಪಿಟಿ ಕಾಲೋನಿ, ಬಸವೇಶ್ವರ ನಗರ, ಕೃಷಿನಗರ, ಸಹ್ಯಾದ್ರಿನಗರ, ಸಹ್ಯಾದ್ರಿ ಬಡಾವಣೆ, ಅಶೋಕ ನಗರ, ಅರವಿಂದನಗರ, ಮಂಜುನಾಥ ಬಡಾವಣೆ, ಆನಂದರಾವ್ ಬಡಾವಣೆ, ಗೋಪಾಳ, ಮೇಲಿನ ಮತ್ತು ಕೆಳಗಿನ ತುಂಗಾನಗರ, ಆಲ್ಕೋಳ, ಅಮೃತ್ ಲೇಔಟ್, ಸೂರ್ಯ ಬಡಾವಣೆಯಲ್ಲಿ ಬಹುತೇಕ ಕಾಮಗಾರಿ ಪೂರ್ಣಗೊಂಡಿದೆ ಎಂದು ಅಧಿಕಾರಿ ಮಾಹಿತಿ ನೀಡಿದರು. ಸಭೆಯಲ್ಲಿ ಪಾಲಿಕೆ ಉಪಮೇಯರ್ ಸುರೇಖಾ ಮುರಳೀಧರ್, ಆಯುಕ್ತ ಚಿದಾನಂದ ವಟಾರೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.