ಎಪಿಎಂಸಿ ನಿಯಂತ್ರಣಕ್ಕೆ ಡ್ರೋಣ್‌ ಬಳಕೆ

Team Udayavani, Apr 20, 2020, 3:20 PM IST

20-April-21

ಶಿವಮೊಗ್ಗ: ತರಕಾರಿ ಖರೀದಿ ಮಾಡುತ್ತಿರುವ ಜನ

ಶಿವಮೊಗ್ಗ: ಜನಜಂಗುಳಿಯಿಂದ ಕೂಡಿರುತ್ತಿದ್ದ ಎಪಿಎಂಸಿ ಮಾರುಕಟ್ಟೆಯನ್ನು ನಿಯಂತ್ರಿಸಲು ಜಿಲ್ಲಾಡಳಿತ ಈಗ ಡ್ರೋಣ್‌ ಮೊರೆ ಹೋಗಿದೆ. ಎಷ್ಟೇ ಜಾಗೃತಿ ಮೂಡಿಸಿದರೂ ಸಾಮಾಜಿಕ ಅಂತರ ಕಾಪಾಡಲು ಸಾಧ್ಯವಾಗಿರಲಿಲ್ಲ. ಇದೇ ಕಾರಣಕ್ಕೆ ಡ್ರೋಣ್‌ ಮೂಲಕ ವ್ಯಾಪಾರಸ್ಥರ ಮೇಲೆ ನಿಗಾ ಇಡಲು ಮುಂದಾಗಿದೆ.

ಈ ಕುರಿತು ಭಾನುವಾರ ಬೆಳಗ್ಗೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್‌ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ಅವರು ಎಪಿಎಂಸಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತರಕಾರಿಗಳನ್ನು ಬಿಡಿಯಾಗಿ ಮಾರದಂತೆ, ಹೋಲ್‌ಸೇಲ್‌ ಖರೀದಿದಾರರು ಬಾಕ್ಸ್‌ನಲ್ಲಿ ನಿಂತು ಖರೀದಿಸುವಂತೆ ಹಾಗೂ ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದರು.

ಈ ಕುರಿತು ಮಾತನಾಡಿದ ಜಿಲ್ಲಾ ಧಿಕಾರಿ ಕೆ.ಬಿ.ಶಿವಕುಮಾರ್‌ ಹಾಗೂ ಎಸ್ಪಿ ಕೆ.ಎಂ.ಶಾಂತರಾಜು, ಮಾರುಕಟ್ಟೆಯಲ್ಲಿ ಜನರನ್ನು ನಿಯಂತ್ರಿಸುವಂತೆ ತರಕಾರಿ ಅಂಗಡಿಗಳವರ ಜೊತೆ ಹಲವು ಬಾರಿ ಸಭೆಗಳನ್ನು ನಡೆಸಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಸೂಚಿಸಿದ್ದೆವು. ಹಾಗೂ ವಾಹನಗಳಿಗೆ ಪಾಸ್‌ ವಿತರಿಸಲಾಗಿತ್ತು. ಅದರಂತೆ ಎಪಿಎಂಸಿಯಲ್ಲಿ ಅಂಗಡಿಯವರು ಪಾಲಿಸುತ್ತಿದ್ದಾರೆ. ನಿಯಮ ಉಲ್ಲಂಘಿಸದಂತೆ ಎರಡು ಡ್ರೋಣ್‌ ಕ್ಯಾಮೆರಾಗಳನ್ನು ಬಿಡಲಾಗಿದೆ ಎಂದರು.

ಡಿಸಿ-ಎಸ್‌ಪಿ ಸಿಟಿ ರೌಂಡ್ಸ್‌: ಜಿಲ್ಲಾ ಧಿಕಾರಿ ಕೆ.ಬಿ.ಶಿವಕುಮಾರ್‌ ಮತ್ತು ಎಸ್‌ಪಿ ಕೆ.ಎಂ.ಶಾಂತರಾಜು ಭಾನುವಾರ ಬೆಳಗ್ಗೆ ಸಿಟಿ ರೌಂಡ್ಸ್‌ ಹಾಕಿದರು. ಈ ವೇಳೆ ಗುಂಪುಗುಂಪಾಗಿ ವಾಕಿಂಗ್‌ ಹೋಗುವವರು ಮತ್ತು ಆಟವಾಡುತ್ತಿದ್ದವರಿಗೆ ಬುದ್ಧಿ ಹೇಳಿದರು. ರಾಜೇಂದ್ರ ನಗರದ ಗಣಪತಿ ದೇವಸ್ಥಾನದ ಹಿಂಭಾಗದಲ್ಲಿ ಷಟಲ್‌ ಆಡುವವರಿಗೆ ತಿಳಿ ಹೇಳಿದ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್‌, “ಎಷ್ಟು ಅಂತ ನಿಮಗೆ ಬುದ್ದಿ ಹೇಳಬೇಕು’ ಎಂದು ತರಾಟೆಗೆ ತೆಗೆದುಕೊಂಡರು. ಅಲ್ಲದೇ, ನೆಟ್‌, ಬ್ಯಾಟ್‌ ಹಾಗೂ ಇತರೆ ಆಟದ ವಸ್ತುಗಳನ್ನು ವಶಪಡಿಸಿಕೊಂಡರು. ಅದೇ ರೀತಿ, ಶಿವಮೂರ್ತಿ ವೃತ್ತದ ಬಳಿ ವಾಕಿಂಗ್‌ ಬರುವವರಿಗೆ ಲಾಕ್‌ಡೌನ್‌ ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬಿಸಿ ಮುಟ್ಟಿಸಿದರು.

ತರಕಾರಿ, ದಿನಸಿ ಖರೀದಿಗೆ ಬೆಳಗಿನಿಂದ ಮಧ್ಯಾಹ್ನದ ವರೆಗೆ ಅವಕಾಶ ನೀಡಿರುವುದರಿಂದ ಇದೇ ಅವಕಾಶ ಬಳಸಿಕೊಂಡು ಅನೇಕರು ವಾಕಿಂಗ್‌, ಕ್ರಿಕೆಟ್‌, ಷಟಲ್‌, ಸಿಟಿ ರೌಂಡ್ಸ್‌ ಹಾಕುವ ಪರಿಪಾಠ ರೂಢಿಸಿಕೊಂಡಿದ್ದಾರೆ. ಇದನ್ನೆಲ್ಲ ಅರಿತ ಜಿಲ್ಲಾಡಳಿತ ಎರಡು ದಿನಗಳಿಂದ ಬೆಳ್ಳಂಬೆಳಗ್ಗೆ ಕಾರ್ಯಾಚರಣೆಗೆ ಇಳಿದಿದೆ.

ಟಾಪ್ ನ್ಯೂಸ್

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್‌ ಹಂಚಿಕೆ; ಡಾ.ಸರ್ಜಿ

Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್‌ ಹಂಚಿಕೆ; ಡಾ.ಸರ್ಜಿ

Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ

Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ

7-thirthahalli

Thirthahalli: ಅದ್ಧೂರಿಯಾಗಿ ನಡೆದ ಎಳ್ಳಮಾವಾಸ್ಯೆ ರಥೋತ್ಸವ

1-thirthahalli

ತೀರ್ಥಹಳ್ಳಿಯಲ್ಲಿ ವೈಭವದ ಜಾತ್ರೆ; ಬುರ್ಖಾ ಧರಿಸಿದ್ದ ಅನಾಮಧೇಯ ವ್ಯಕ್ತಿ ಪತ್ತೆ !

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

8

Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

7

Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.