Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ
Team Udayavani, Nov 15, 2024, 5:26 PM IST
ಶಿವಮೊಗ್ಗ: ರಾಜ್ಯ ಸರಕಾರ ಅಧಿಕಾರಕ್ಕೆ ಬಂದು ಒಂದೂವರೆ ವರ್ಷವಾಯ್ತು. ಜನರು ಸಂಪೂರ್ಣ ಬಹುಮತ ಕೊಟ್ಟರು. ಒಂದೊಂದು ಹಬ್ಬಕ್ಕೂ ಒಂದೊಂದು ಹಗರಣ ಹೊರಗೆ ಬರುತ್ತಿದೆ. ವಾಲ್ಮೀಕಿ ಹಗರಣ ಹೊರಗೆ ಬಂತು. ವಕ್ಪ್ ಹಗರಣ ಹೊರಗೆ ಬರುತ್ತಿದೆ. ದಕ್ಷ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ಟೀಕೆ ಮಾಡಿದರು.
ಶುಕ್ರವಾರ (ನ.15) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಸಂದರ್ಭದಲ್ಲಿ ಕೆಲವು ಎಮರ್ಜೆನ್ಸಿ ನಿರ್ಧಾರ ತೆಗೆದು ಕೊಳ್ಳಬೇಕಾಗುತ್ತದೆ. ಯಡಿಯೂರಪ್ಪ ಅದೇ ರೀತಿ ನಿರ್ಧಾರ ಕೈಗೊಂಡಿದ್ದಾರೆ. ವಿಜಯೇಂದ್ರ ಬೆಳೆಯುತ್ತಿದ್ದಾರೆ. ವಿಜಯೇಂದ್ರ ಕಟ್ಟಿ ಹಾಕಲು ಸಂಘಟನೆ ಕಟ್ಟಿ ಹಾಕಲು ಸುಳ್ಳು ಆರೋಪ ಮಾಡುತ್ತಿದ್ದಾರೆ. ಬಡವರು ಸೈಟು ಇಲ್ಲ ಎನ್ನುತ್ತಿದ್ದಾರೆ. ಸಿಎಂ ಅವರ ಕುಟುಂಬಕ್ಕೆ 14 ಸೈಟು ಮಾಡಿಕೊಂಡಿದ್ದಾರೆ. ಸಿಎಂ ಡಿಸಿಎಂ ಲೂಟಿ ಸರಕಾರ ಮಾಡುತ್ತಿದ್ದಾರೆ. ಯಡಿಯೂರಪ್ಪ ಕುಟುಂಬಕ್ಕೆ ಇದೆಲ್ಲಾ ಹೊಸದಲ್ಲ. ಕಾನೂನು ಹೋರಾಟ ಮಾಡುತ್ತೇವೆ, ಎದುರಿಸುತ್ತೇವೆ ಎಂದರು.
ರಾಜ್ಯದಾದ್ಯಂತ ಸರಕಾರಿ ನೌಕರರ ಚುನಾವಣೆ ನಡೆಯುತ್ತಿದೆ. ಶಿವಮೊಗ್ಗದಲ್ಲಿ ದಕ್ಷ ಅಧಿಕಾರಿಗಳು ಕೆಲಸ ಮಾಡ್ತಿದ್ದಾರೆ. ಸರಕಾರಿ ನೌಕರರು ಚುನಾವಣೆಗೆ ಸ್ಪರ್ಧೆ ಮಾಡಿದ್ದಾರೆ ಎಂದು ವರ್ಗಾವಣೆ ಮಾಡುತ್ತಿದ್ದಾರೆ. ಅಧಿಕಾರಿಗಳಿಗೆ ಧಮ್ಕಿ ಹಾಕುತ್ತಿದ್ದಾರೆ. ಅಧಿಕಾರಿಗಳ ಸ್ವಾತಂತ್ರ್ಯ ಕಿತ್ತುಕೊಳ್ಳುವ ಕೆಲಸ ಮಾಡುತ್ತಿದ್ದಾರೆ. ಮಧು ಬಂಗಾರಪ್ಪ ಇಂತಹ ಕೆಲಸ ಮಾಡುತ್ತಿದ್ದಾರೆ. ಅಧಿಕಾರಿಗಳನ್ನು ಎದುರಿಸುವ ಕೆಲಸ ಮಾಡುತ್ತಿದ್ದಾರೆ. ತಹಶೀಲ್ದಾರ್ ಶಿವಮೊಗ್ಗಕ್ಕೆ ಬಂದು 9 ತಿಂಗಳು ಆಗಿದೆ. 9 ತಿಂಗಳಿಗೆ ವರ್ಗಾವಣೆ ಮಾಡಿದ್ದಾರೆ. ತಹಶೀಲ್ದಾರ್ ಅವರಿಗೆ ಚುನಾವಣೆಗೆ ಸ್ಪರ್ಧಿಸದಂತೆ ಉಸ್ತುವಾರಿ ಸಚಿವರು ತಿಳಿಸಿದ್ದರು. ಉಸ್ತುವಾರಿ ಸಚಿವರು ಹೇಳಿದ್ದರೂ ಚುನಾವಣೆಗೆ ಸ್ಪರ್ಧೆ ಮಾಡಿದ್ದರೆಂದು ಏಕಾಏಕಿ ವರ್ಗಾವಣೆ ಮಾಡಿದ್ದಾರೆ. ಅಧಿಕಾರಿಗಳು ಯಾರು ಇಂತಹ ಗೊಡ್ಡು ಬೆದರಿಕೆಗೆ ಹೆದರಬಾರದು ಎಂದು ರಾಘವೇಂದ್ರ ಹೇಳಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.