ಕೋವಿಡ್ ವಾರಿಯರ್ಸ್ ಗೆ ಸನ್ಮಾನ
Team Udayavani, Jun 29, 2020, 4:56 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಶಿವಮೊಗ್ಗ: ನಗರದ ಕೋಟೆ ಶ್ರೀ ಸೀತಾರಾಮಂಜನೇಯ ಸ್ವಾಮಿ ದೇವಾಲಯದ ಪ್ರಧಾನ ಅರ್ಚಕರಾಗಿದ್ದು, ವಿಶೇಷವಾಗಿ ಶ್ರೀ ಆಂಜನೇಯನ ಉಪಾಸಕರಾಗಿದ್ದ ಭಕ್ತ ಶಿರೋಮಣಿ ಅನಂತರಾಮ ಅಯ್ಯಂಗಾರ್ ಅವರ 120ನೇ ಸಂಸ್ಮರಣಾ ಕಾರ್ಯಕ್ರವನ್ನು ಕುಟುಂಬ ವರ್ಗ, ದೇವಾಲಯದ ಭಜನಾ ಮಂಡಳಿ ಹಾಗೂ ಭಾರತೀಯ ವಿಚಾರ ವೇದಿಕೆಗಳ ಸಂಯುಕ್ತ ಆಶ್ರಯದಲ್ಲಿ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ವಿಶೇಷವಾಗಿ ಕೋವಿಡ್ ವಾರಿಯರ್ಗಳಾಗಿ ಕಾರ್ಯನಿರ್ವಹಿಸುತ್ತಿರುವ ಐವರು ಆ್ಯಂಬುಲೆನ್ಸ್ ಚಾಲಕರಾದ ಅರುಣ್, ರಮೇಶ್, ಗ್ರೂಪ್ ಡಿ ನೌಕರರಾದ ಶಬರೀಶ್ ಹಾಗೂ ಲ್ಯಾಬ್ ತಂತ್ರಜ್ಞ ರಾಕೇಶ್ ಅವರನ್ನು ಗೌರವಿಸಲಾಯಿತು. ಸನ್ಮಾನಿತರ ಪರವಾಗಿ ಮಾತನಾಡಿದ ರಾಕೇಶ್, ಪವಿತ್ರ ಸ್ಥಳದಲ್ಲಿ ಗೌರವಿಸಿರುವುದು ನಿಜಕ್ಕೂ ಆತ್ಮವಿಶ್ವಾಸ ಹೆಚ್ಚಿಸಿದೆ. ಇನ್ನಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಲು ಸ್ಫೂರ್ತಿ ನೀಡಿದೆ. ಮಾರುತಿಯ ದಯೆದಿಂದ ಕೋವಿಡ್ ಹಾವಳಿ ಶೀಘ್ರದಲ್ಲಿ ಕೊನೆಗೊಳ್ಳಲಿ ಎಂದು ಆಶಿಸಿದರು.
ಕಾರ್ಯಕ್ರಮದಲ್ಲಿ ದೇವಾಲಯದ ಪ್ರಧಾನ ಅರ್ಚಕ ಹೊ.ಅ.ಅನಂತರಾಮ ಅಯ್ಯಂಗಾರ್, ಎಚ್.ಆರ್.ಭಾರ್ಗವ ರಾಮ್, ಎಚ್.ಬಿ.ರಾಮಚರಣ್ ಹಾಗೂ ಎಚ್.ಕೆ.ದೀನದಯಾಳು ರಾಮಪ್ರಸಾದ್ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
MUST WATCH
ಹೊಸ ಸೇರ್ಪಡೆ
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.