ಕುಂದುಕೊರತೆ ಸಭೆಯಲ್ಲಿ ಅಹವಾಲುಗಳ ಮಹಾಪೂರ!
ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಲು ಆಗ್ರಹ
Team Udayavani, Feb 24, 2020, 3:53 PM IST
ಶಿವಮೊಗ್ಗ: ಕಾಲೇಜು ಬಳಿ ರ್ಯಾಗಿಂಗ್, ಅಕ್ರಮ ಮದ್ಯ ಮಾರಾಟ, ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ, ಗಾಂಜಾ ಹಾವಳಿ ಕಡಿವಾಣ, ವೇಗದ ವಾಹನ ಚಾಲನೆ ಇತರೆ ಸಮಸ್ಯೆಗಳು ಭಾನುವಾರ ನಡೆದ ಎಸ್‌ಸಿ/ ಎಸ್‌ಟಿ ಕುಂದುಕೊರತೆ ಸಭೆಯಲ್ಲಿ ಕಂಡುಬಂದವು.
ಇಲ್ಲಿನ ಡಿಎಆರ್ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಎಸ್‌ಸಿ, ಎಸ್‌ಟಿ ಕುಂದುಕೊರತೆ ಸಭೆಯಲ್ಲಿ ಮುಖಂಡರು ತಮ್ಮ ಅಹವಾಲುಗಳನ್ನು ಸಲ್ಲಿಸಿದರು. ಎಸ್‌ಪಿ ಕೆ.ಎಂ. ಶಾಂತರಾಜು ಸಮಸ್ಯೆಗಳನ್ನು ಬಗೆಹರಿಸುವ ಸೂಕ್ತ ಭರವಸೆ ನೀಡಿದರು.
ಹೊಳೆಹೊನ್ನೂರಿನ ಸುತ್ತಮುತ್ತ ಹಲವು ಗ್ರಾಮಗಳಲ್ಲಿ ವಾಹನಗಳಲ್ಲೇ ಮದ್ಯ ಮಾರಾಟ ಮಾಡುತ್ತಿದ್ದಾರೆ. ಇದಕ್ಕೆ ಅನೇಕ ಯುವಕರು ಬಲಿಯಾಗುತ್ತಿದ್ದಾರೆ. ಅಲ್ಲದೆ ಖಾಲಿ ಹಾಗೂ ನಿರ್ಜನ ಪ್ರದೇಶಗಳಲ್ಲಿ ಮದ್ಯಪಾನ ಮಾಡುವ ಜತೆಗೆ ವೇಗವಾಗಿ ವಾಹನ ಚಲಾಯಿಸುವುದು ಕಂಡುಬರುತ್ತಿದೆ. ರಸ್ತೆಯಲ್ಲಿ ಸಂಚರಿಸುವವರ ವಿರುದ್ಧ ಹಲ್ಲೆಗಳು ಹೆಚ್ಚಾಗಿವೆ. ಇದಕ್ಕೆ ಕಡಿವಾಣ ಹಾಕಬೇಕು ಎಂದು ಹೊಳೆಹೊನ್ನೂರಿನ ನಿವಾಸಿ ಹನುಮಂತಪ್ಪ ಮನವಿ ಮಾಡಿದರು.
ಗ್ರಾಮಾಂತರ ಪ್ರದೇಶಗಳಲ್ಲಿ ಅಡಕೆ ಸಿಪ್ಪೆಗಳನ್ನು ರಸ್ತೆ ಮೇಲೆ ಹಾಕುವುದರಿಂದ ರಸ್ತೆ ಅಪಘಾತಗಳಿಗೆ ಕಾರಣವಾಗುತ್ತಿದೆ. ಕೂಡಲೇ ಈ ಬಗ್ಗೆ ಗಮನ ಹರಿಸುವಂತೆ ಸಭೆಯಲ್ಲಿ ಅನೇಕರು ಆಗ್ರಹಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ. ಶಾಂತರಾಜು ಅವರು ಇದಕ್ಕೆ ಸಂಬಂ ಧಿಸಿದಂತೆ ಅಲ್ಲಿನ ಪಿಡಿಒ ಹಾಗೂ ಸ್ಥಳೀಯ ಸಂಸ್ಥೆ ಹಾಗೂ ರೈತರೊಂದಿಗೆ ಸಭೆ ನಡೆಸಿ ಆ ಕುರಿತು ಅರಿವು ಮೂಡಿಸಲಾಗುವುದು ಎಂದು ಭರವಸೆ ನೀಡಿದರು.
ಡಿಎಸ್‌ಎಸ್ ಗ್ರಾಮಾಂತರ ಸಂಚಾಲಕ ಬಿ. ಕೃಷ್ಣಪ್ಪ ಅವರು ಮಾತನಾಡಿ, ಹೊಳೆಹೊನ್ನೂರು ಸಮೀಪದ ಕಲ್ಲಿಹಾಳ್ ಪಿಯುಸಿ ಕಾಲೇಜಿನ ಆವರಣದಲ್ಲಿ ಮದ್ಯಪಾನ ಮಾಡಿ ಎಲ್ಲೆಂದರಲ್ಲಿ ಮದ್ಯದ ಬಾಟಲಿಗಳನ್ನು ಹಾಕಿರುತ್ತಾರೆ. ಅಲ್ಲದೆ ಹುಡುಗಿಯರಿಗೆ ಚುಡಾಯಿಸುತ್ತಾರೆ. ಈ ಬಗ್ಗೆ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಅಲ್ಲದೆ ಇಲ್ಲಿನ ಮುದ್ರ ಇಲಾಖೆಗೆ ಸೇರಿದ ದೇವಾಲಯಗಳಲ್ಲಿ ದಲಿತರ ಪ್ರವೇಶಕ್ಕೆ ಅವಕಾಶ ನೀಡುವುದಿಲ್ಲ ಹಾಗೂ ಆರತಿ ಕೊಡುವುದಿಲ್ಲ ಎಂದು ದೂರಿದರು. ನಗರದ ನಿವಾಸಿ ದಲಿತ ಸಂಘರ್ಷ ಸಮಿತಿಯ ಮುಖಂಡರಾದ ಶಿವಕುಮಾರ್ ಅವರು ಮಾತನಾಡಿ, ಇಲ್ಲಿನ ಜೆಸಿ ನಗರದ ಕೆಲವು ಮನೆಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾರೆ. ಇಲ್ಲಿ ಹೆಚ್ಚಾಗಿ ಕಾರ್ಮಿಕ ಕುಟುಂಬದವರೇ ವಾಸಿಸುತ್ತಿದ್ದು, ಈ ರೀತಿಯ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವಂತೆ ಮನವಿ ಮಾಡಿದರು.
ಈಗಲೂ ಸಹ ಶಾಲಾ ವಾಹನಗಳು ಹಾಗೂ ಕೆಲವು ಆಟೋಗಳಲ್ಲಿ ಹೆಚ್ಚಿನ ಸಂಖ್ಯೆಗಳಲ್ಲಿ ಶಾಲಾ ಮಕ್ಕಳನ್ನು ತುಂಬಿಕೊಂಡು ಹೋಗುತ್ತಾರೆ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ನಗರದ ನಿವಾಸಿ ಶ್ರೀನಿವಾಸ್ ಅವರು ತಿಳಿಸಿದರು.
ಡಿಎಸ್‌ಎಸ್ ಜಿಲ್ಲಾ ಸಂಚಾಲಕ ಡಿ.ಎಚ್. ಹಾಲೇಶಪ್ಪ ಅವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದ್ದು, ಅದೇ ರೀತಿ ಸೊರಬ ತಾಲೂಕಿನ ನಕಲಿ ವೈದ್ಯರ ವಿರುದ್ಧ ದೂರು ದಾಖಲಿಸಲಾಗಿದ್ದು, ಎಫ್ ಐಆರ್ ಆಗಿದ್ದರೂ ಸಹ ಕ್ರಮ ಕೈಗೊಂಡಿಲ್ಲ.
ಭದ್ರಾವತಿಯ ಪ್ರಮುಖ ವೃತ್ತಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸುವಂತೆ ಈ ಬಗ್ಗೆ ಅನೇಕ ಬಾರಿ ಮನವಿ ಸಲ್ಲಿಸಿದರೂ ಕಾರ್ಯರೂಪಕ್ಕೆ ಬಂದಿಲ್ಲ. ಕೂಡಲೇ ನಗರದ ಪ್ರಮುಖ ವೃತ್ತಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸುವ ಮೂಲಕ ಹೆಚ್ಚುತ್ತಿರುವ ಅಪರಾಧಗಳ ಸಂಖ್ಯೆಗೆ ಕಡಿವಾಣ ಹಾಕುವಂತೆ ಹಾಗೂ ಯತೇತ್ಛವಾಗಿ ನಡೆಯುತ್ತಿರುವ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವಂತೆ ಮನವಿ ಮಾಡಿದರು.
ಡಿಎಸ್‌ಎಸ್ ಮಹಿಳಾ ಘಟಕದ ಸಂಚಾಲಕಿ ರುದ್ರಮ್ಮ ಮಾತನಾಡಿ, ನಗರದ ಬಸ್ ನಿಲ್ದಾಣದಲ್ಲಿ ಕೆಲವು ಯುವಕರ ಗುಂಪು ಅಲ್ಲಿಗೆ ಬರುವ ಯುವತಿಯರು ಹಾಗೂ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿ ಅಸಭ್ಯವಾಗಿ ಮಾತನಾಡುತ್ತಾರೆ ಎಂದು ದೂರಿದರು.
ಅಪರ ಜಿಲ್ಲಾ ರಕ್ಷಣಾಧಿಕಾರಿ ಶೇಖರ್ ಅವರು ಮಾತನಾಡಿ, ಮಹಿಳೆಯರ ರಕ್ಷಣೆಗಾಗಿ ನಗರದಲ್ಲಿ ಎರಡು ಓಬವ್ವ ಪಡೆಯಿದೆ. ಸಾರ್ವಜನಿಕ ಸ್ಥಳಗಳಲ್ಲಿ ಓಬವ್ವ ಪಡೆ ಕಾರ್ಯಪ್ರವೃತ್ತವಾಗಿದೆ. ಇನ್ನು ಮುಂದೆ ಬಸ್ ನಿಲ್ದಾಣದ ಒಳಗೂ ಸಹ ಈ ಪಡೆ ಕಾರ್ಯ ನಿರ್ವಹಿಸಲಿದೆ ಎಂದರು.
ರಂಗಸ್ವಾಮಿ ಅವರು ಮಾತನಾಡಿ, ಇಲ್ಲಿನ ಬುದ್ಧನಗರದಲ್ಲಿ ಪ್ರತಿ ಮಂಗಳವಾರ ಸಂತೆ ನಡೆಯುತ್ತದೆ. ಈ ಸಮಯದಲ್ಲಿ 10-15 ಮೊಬೈಲ್‌ಗಳ ಕಳವು ಆಗುತ್ತಿರುತ್ತದೆ. ಇಲ್ಲಿಯವರೆಗೆ ಮೊಬೈಲ್ ಕಳೆದುಕೊಂಡವರ ಮೊಬೈಲ್‌ಗಳು ವಾಪಸ್ ಸಿಕ್ಕಿಲ್ಲ ಎಂದು ದೂರಿದರು. ಅಪರ ಜಿಲ್ಲಾ ರಕ್ಷಣಾ ಧಿಕಾರಿ ಶೇಖರ್ ಅವರು
ಪ್ರತಿಕ್ರಿಯಿಸಿ ಮೊಬೈಲ್ ಕಳೆದುಕೊಂಡವರು ಕೂಡಲೇ ದೂರು ನೀಡಬೇಕು. ಇಲ್ಲವಾದರೆ ಬೇರೆ ಬೇರೆ ರೀತಿಯ ದುಷ್ಕೃತ್ಯಗಳಿಗೆ ಕಳೆದುಕೊಂಡವರ ಮೊಬೈಲ್‌ಗಳನ್ನು ಬಳಸಿಕೊಳ್ಳುವ ಸಾಧ್ಯತೆಗಳಿರುತ್ತವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
40 percent commission ಸುಳ್ಳು ಸಾಬೀತು : ಕಾಂಗ್ರೆಸಿಗರಿಗೆ ತಾಕೀತು ಮಾಡಿದ ಯಡಿಯೂರಪ್ಪ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ
Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್‌ವೈ
Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.