ಪ್ರಧಾನಮಂತ್ರಿ ಜನೌಷಧ ಕೇಂದ್ರ ಆರಂಭ

ಪ್ರತಿ ಜಿಪಂ ಕ್ಷೇತ್ರವ್ಯಾಪ್ತಿಯಲ್ಲಿ ಜನೌಷಧ ಕೇಂದ್ರ ತೆರೆಯಲು ಚಿಂತನೆ: ಸಂಸದ ರಾಘವೇಂದ್ರ

Team Udayavani, Mar 8, 2020, 3:41 PM IST

8-March-21

ಶಿವಮೊಗ್ಗ: ಸಮಾಜದ ಕಟ್ಟಕಡೆಯ ವ್ಯಕಿಗೂ ಆರೋಗ್ಯ ಸೇವೆ ನೀಡುವ ಸದುದ್ದೇಶದಿಂದ ಕೇಂದ್ರ ಸರ್ಕಾರವು ಜೀವನಾವಶ್ಯಕ ಮತ್ತು ಗುಣಮಟ್ಟದ ಔಷ ಧಗಳನ್ನು ಅತ್ಯಂತ ಕಡಿಮೆ ದರದಲ್ಲಿ ಒದಗಿಸಲು ಪ್ರಧಾನಮಂತ್ರಿ ಜನೌಷಧ ಕೇಂದ್ರಗಳನ್ನು ಆರಂಭಿಸಲಾಗಿದ್ದು, ಸಾರ್ವಜನಿಕರು ಈ ಸದವಕಾಶದ ಲಾಭ ಪಡೆದುಕೊಳ್ಳುವಂತೆ ಸಂಸದ ಬಿ.ವೈ.ರಾಘವೇಂದ್ರ ಅವರು ಹೇಳಿದರು.

ಶನಿವಾರ ಪ್ರಧಾನ ಮಂತ್ರಿ ಜನೌಷಸಪ್ತಾಹದ ಅಂಗವಾಗಿ ನಗರದ ಜಿಲ್ಲಾಡಳಿತ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜನೌಷ ಧ ಮಳಿಗೆಗಳ ಮುಖ್ಯಸ್ಥರು ಹಾಗೂ ಫಲಾನುಭವಿಗಳ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. ರಾಷ್ಟ್ರವೊಂದು ಅಭಿವೃದ್ಧಿ ಹೊಂದಬೇಕಾದಲ್ಲಿ ರಾಷ್ಟ್ರದ ಪ್ರಜೆಗಳು ಕೂಡ ಆರೋಗ್ಯವಂತರಾಗಿರುವುದು ಕೂಡ ಮುಖ್ಯವಾದುದು ಎಂದರು.

ಸ್ವಾತಂತ್ರ್ಯಾ ನಂತರದ ಹಲವು ದಶಕಗಳಲ್ಲಿ ಅನುಷ್ಠಾನಗೊಳಿಸಲಾದ ಅತ್ಯಪರೂಪದ ಯೋಜನೆಗಳಲ್ಲೊಂದಾಗಿದ್ದು, ಶೇ.30ರಿಂದ ಶೇ.80ರ ರಿಯಾಯಿತಿ ದರದಲ್ಲಿ ಗುಣಮಟ್ಟದ ಔಷಧಗಳನ್ನು ಜನಸಾಮಾನ್ಯರಿಗೆ ಒದಗಿಸಲಾಗುತ್ತಿದೆ. ಈ ಯೋಜನೆ ಕೇವಲ ಪ್ರಚಾರಕ್ಕಾಗಿ ಮಾತ್ರವಾಗಿರದೆ ಜನಸಾಮಾನ್ಯರ ಹಿತ, ಸುಖ ಕಾಪಾಡುವಲ್ಲಿ ಜನಪ್ರಿಯತೆ ಪಡೆದಿದೆ ಎಂದ ಅವರು, ಸಾಮಾನ್ಯ ಜನರಿಗೂ ಈ ಔಷಧಗಳು ತಲುಪಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿಪ್ರತಿ ಜಿಲ್ಲಾ ಪಂಚಾಯತ್‌ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಜನೌಷಧ ಕೇಂದ್ರಗಳನ್ನು ಆರಂಭಿಸುವ ಚಿಂತನೆ ಇದೆ ಎಂದರು.

ಈ ಜನೌಷಧ ಕೇಂದ್ರಗಳಲ್ಲಿ ಸುಮಾರು 750ಕ್ಕೂ ಹೆಚ್ಚಿನ ಪ್ರಕಾರಗಳ ಔಷಧಗಳು ದೊರೆಯುತ್ತಿದ್ದು, ಅದರಲ್ಲಿ 166 ರೀತಿಯ ಔಷಧಗಳು ಶೇ.10ರ ರಿಯಾಯಿತಿ ದರದಲ್ಲಿ, ಸುಮಾರು 483 ಔಷಧಗಳು ಶೇ.50ರ ರಿಯಾಯಿತಿ ದರದಲ್ಲಿ, 80 ಔಷ ಧಗಳು ಶೇ.25ರ ರಿಯಾಯಿತಿ ದರದಲ್ಲಿಯೂ ದೊರೆಯುತ್ತಿವೆ. ಈ ಯೋಜನೆಯ ಅನುಷ್ಠಾನದಿಂದಾಗಿ ರಿಯಾಯಿತಿ ದರದಲ್ಲಿ ಔಷಧಗಳು, ಆರೋಗ್ಯವರ್ಧಕ ಮಾತ್ರೆಗಳು ದೊರೆಯಲಿವೆ. ಅಲ್ಲದೆ ಲಕ್ಷಾಂತರ ಸಂಖ್ಯೆಯಲ್ಲಿ ಉದ್ಯೋಗಾವಕಾಶಗಳು ದೊರೆಯುತ್ತಿದೆ ಎಂದರು.

ಈ ಕೇಂದ್ರಗಳಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ಜನೌಷಧ ಕೇಂದ್ರಗಳಿಗೆ ಪ್ರಶಸ್ತಿ ನೀಡಿ ಪ್ರೋತ್ಸಾಹ ನೀಡಲಾಗುತ್ತಿದೆ ಎಂದ ಅವರು, ಜನೌಷ ಧ ಕೇಂದ್ರಗಳಲ್ಲಿ ಸೂಚಿಸಿರುವ ಔಷಧಗಳನ್ನಲ್ಲದೇ ಅನ್ಯ ಔಷಧಗಳನ್ನು ಮಾರಾಟ ಮಾಡದಂತೆ ಅವರು ಸೂಚಿಸಿದರು. ಜನಸಾಮಾನ್ಯರಿಗೆ ಆರೋಗ್ಯ ಸೇವೆ ನೀಡುವ ನಿಟ್ಟಿನಲ್ಲಿ ಅನುಷ್ಠಾನಕ್ಕೆ ಬಂದಿರುವ ಆಯುಷ್ಮಾನ್‌ ಭಾರತ್‌-ಆರೋಗ್ಯ ಕರ್ನಾಟಕ ಯೋಜನೆಯಡಿ ಪ್ರತಿ ಬಿ.ಪಿ.ಎಲ್‌. ಕುಟುಂಬಕ್ಕೆ 5.00ಲಕ್ಷ ಹಾಗೂ ಎ.ಪಿ.ಎಲ್‌. ಕುಟುಂಬಕ್ಕೆ 1.50ಲಕ್ಷ ರೂ.ಗಳವರೆಗೆ ಸಹಾಯಧನ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲಾ ವರ್ಗದವರಿಗೂ 15-20ಲಕ್ಷ ರೂ.ಗಳವರೆಗೂ ಆರ್ಥಿಕ ನೆರವು ದೊರೆಯುವಂತಾಗಬೇಕು. ಅದಕ್ಕಾಗಿ ಕೇಂದ್ರದಲ್ಲಿ ಒಮ್ಮತದ ನಿರ್ಣಯ ಕೈಗೊಳ್ಳಲಾಗುವುದು ಎಂದರು.

ಈ ಯೋಜನೆಯಡಿ ಇತ್ತೀಚೆಗೆ ಅಟಲ್‌ ಜೀ ಜನ್ಮದಿನ ಹಾಗೂ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಜನ್ಮದಿನಾಚರಣೆ ಸಂದರ್ಭದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಜಿಲ್ಲಾಡಳಿತದ ಸಹಯೋಗದೊಂದಿಗೆ ಏರ್ಪಡಿಸಲಾಗಿದ್ದ ಉಚಿತ ಆರೋಗ್ಯ
ತಪಾಸಣಾ ಕಾರ್ಯಕ್ರಮದಡಿ ಸುಮಾರು 1.50 ಲಕ್ಷ ಕುಟುಂಬಗಳಿಗೆ ಆಯುಷ್ಮಾನ್‌ ಕಾರ್ಡ್  ನ್ನು ವಿತರಿಸಲಾಗಿದೆ. ಈ ಕಾರ್ಯಕ್ರಮದಅನುಷ್ಠಾನದಲ್ಲಿ ಸಹಕರಿಸಿದ ಎಲ್ಲರೂ
ಅಭಿನಂದನಾರ್ಹರು ಎಂದರು.

ಮುಖ್ಯಮಂತ್ರಿಗಳು ಮಂಡಿಸಿದ ಬಜೆಟ್‌ನಲ್ಲಿ ಜಿಲ್ಲೆಯಲ್ಲಿ ಬುಡಕಟ್ಟು ವೈದ್ಯ ಪದ್ಧತಿ ಕೇಂದ್ರ ಆರಂಭಿಸಲು ಉದ್ದೇಶಿಸಿದೆ. ಅಲ್ಲದೇ ಜಿಲ್ಲೆಯಲ್ಲಿ ಆಯುರ್ವೇದಿಕ್‌ ವಿಶ್ವವಿದ್ಯಾಲಯ ಆರಂಭಿಸಲು ಬಜೆಟ್‌ನಲ್ಲಿ ಅನುದಾನವನ್ನು ನಿಗ ಪಡಿಸಿದ್ದು, ಅದಕ್ಕಾಗಿ ಸೋಗಾನೆ ವಿಮಾನ ನಿಲ್ದಾಣಕ್ಕೆ ಹೊಂದಿಕೊಂಡಂತೆ ಸ್ಥಳವನ್ನು ಗುರುತಿಸಲಾಗಿದೆ. ಇರುವಕ್ಕಿ ನಿರ್ಮಾಣ ಹಂತದಲ್ಲಿರುವ ಕೃಷಿ ಮತ್ತು ತೋಟಗಾರಿಕೆ ವಿವಿಯ ಚಟುವಟಿಕೆಗಳಿಗೆ 150ಕೋಟಿ. ರೂ., ಜೋಗಫಾಲ್ಸ್‌ ಪ್ರವಾಸೋದ್ಯಮ ಕಾರ್ಯಕ್ರಮಗಳಿಗೆ ವಿಶೇಷ ಯೋಜನೆ ಹಾಗೂ ಲಯನ್‌ ಸಫಾರಿ ಅಭಿವೃದ್ಧಿಗೆ 5.00 ಕೋಟಿ ರೂ.ಗಳನ್ನು ಕಾಯ್ದಿರಿಸಲಾಗಿದೆ.

ಅಲ್ಲದೆ ಮಂಗನ ಕಾಯಿಲೆ ನಿಯಂತ್ರಣಕ್ಕೆ, ರಿಂಗ್‌ ರೋಡ್‌ ನಿರ್ಮಾಣ, ತುಮಕೂರು- ಶಿವಮೊಗ್ಗ, ಶಿವಮೊಗ್ಗ- ಚಿತ್ರದುರ್ಗ ಚತುಷ ಥ ರಸ್ತೆ ವಿಸ್ತರಣೆ ಕಾಮಗಾರಿಗಳಿಗೆ ವಿಶೇಷ ಅನುದಾನ ಘೋಷಿಸಿದೆ. ಇದರೊಂದಿಗೆ ಕೊಡಚಾದ್ರಿ- ಕೊಲ್ಲೂರು ನಡುವೆ ಸಂಪರ್ಕ ಕಲ್ಪಿಸಲು ಕೇಬಲ್‌ಕಾರ್‌ ನಿರ್ಮಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದರು.

ಬಹುಮುಖ್ಯವಾಗಿ ಜಿಲ್ಲೆಯ ನೀರಾವರಿ ಯೋಜನೆಗಳಿಗೆ 1500 ಕೋಟಿ ರೂ.ಗಳನ್ನು
ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಜಿಲ್ಲೆಯ ಸರ್ವಾಂಗೀಣ ವಿಕಾಸಕ್ಕೆ ಅಗತ್ಯ ಕ್ರಮ ವಹಿಸಲಾಗುವುದು. ಈ ಎಲ್ಲಾ ಅಭಿವೃದ್ಧಿ ಚಟುವಟಿಕೆಗಳಿಗೆ ಅನುದಾನ ಕಾಯ್ದಿರಿಸಿದ ಮುಖ್ಯಮಂತ್ರಿಗಳಿಗೆ ಜಿಲ್ಲೆಯ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸಲಾಗುವುದು
ಎಂದರು. ಮೇಯರ್‌ ಸುವರ್ಣ ಶಂಕರ್‌, ಉಪಮೇಯರ್‌ ಸುರೇಖಾ ಮುರಳೀಧರ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ಎಂ. ಶಾಂತರಾಜು, ಜಿಪಂ ಮುಖ್ಯ ಕಾರ್ಯ ನಿರ್ವಾಹಕ
ಅಧಿಕಾರಿ ಎಂ.ಎಲ್‌. ವೈಶಾಲಿ, ಅಪರ ಜಿಲ್ಲಾಧಿಕಾರಿ ಅನುರಾಧಾ ಜಿ. ಮತ್ತಿತರರು ಇದ್ದರು.

ಟಾಪ್ ನ್ಯೂಸ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

one-Health-misson

Infectious Disease: ರಾಜ್ಯಕ್ಕೂ ಬೇಕಿದೆ “ವಿಷಾಣು ಯುದ್ಧ ಅಭ್ಯಾಸ್‌”

Sagara: ಭೀಕರ ಅಪಘಾತ… ರಿಕ್ಷಾ ಚಾಲಕ ಸೇರಿ ಇಬ್ಬರು ಮೃತ್ಯು, ಮೂವರಿಗೆ ಗಾಯ

Sagara: ಭೀಕರ ಅಪಘಾತ… ರಿಕ್ಷಾ ಚಾಲಕ ಸೇರಿ ಇಬ್ಬರು ಮೃತ್ಯು, ಮೂವರಿಗೆ ಗಾಯ

Anandapura: ಬಟ್ಟೆ ತೊಳೆಯಲು ಹೋದ ಮಹಿಳೆ ಕೆರೆಗೆ ಬಿದ್ದು ಮೃತ್ಯು

Anandapura: ಬಟ್ಟೆ ತೊಳೆಯಲು ಹೋದ ಮಹಿಳೆ ಕೆರೆಗೆ ಬಿದ್ದು ಮೃತ್ಯು

20-hosanagara

Hosanagara: ಬಿಸಿ ಟೀ ಮೈ ಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದ ಎರಡು ವರ್ಷದ ಮಗು ಸಾವು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್‌

Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್‌

2(1)

Puttur: ವಿದ್ಯುತ್‌ ಕಂಬ ಏರುವ ತರಬೇತಿ!; ಪವರ್‌ಮನ್‌ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ

1(1)

Belthangady: ಗ್ರಾಮೀಣ ರಸ್ತೆಗಳಲ್ಲೂ ಗುಂಡಿ

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.