ಪಿಯು ಮೌಲ್ಯಮಾಪನ ಜಿಲ್ಲಾ ಮಟ್ಟದಲ್ಲೇ ನಡೆಸಿ: ಉಪನ್ಯಾಸಕರ ಸಂಘದ ಮನವಿ
Team Udayavani, May 28, 2020, 4:52 PM IST
ಸಾಂದರ್ಭಿಕ ಚಿತ್ರ
ಶಿವಮೊಗ್ಗ: ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಮೌಲ್ಯಮಾಪನವನ್ನು ಜಿಲ್ಲಾ ಮಟ್ಟದಲ್ಲಿ ನಡೆಸುವಂತೆ ಒತ್ತಾಯಿಸಿ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದಿಂದ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಮಾತನಾಡಿದ ಸಂಘದ ಮುಖಂಡರು, ಕೋವಿಡ್ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಮೌಲ್ಯಮಾಪನ ಕೇಂದ್ರಗಳನ್ನು ಪ್ರತಿ ಜಿಲ್ಲೆಗಳಲ್ಲಿ ಆರಂಭಿಸುವಂತೆ ಮನವಿ ಮಾಡಲಾಗಿದೆ. ಮೌಲ್ಯಮಾಪನ ಪ್ರಕ್ರಿಯೆಯನ್ನು ಈ ಬಾರಿ ವಿಕೇಂದ್ರೀಕರಿಸುವಂತೆ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವರಿಗೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರಿಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.
ಈಗಾಗಲೇ ಮಂಡ್ಯ, ಮೈಸೂರು ಹಾಗೂ ಬೆಂಗಳೂರು ಕೇಂದ್ರಗಳಲ್ಲಿ ಅರ್ಥಶಾಸ್ತ್ರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಆರಂಭವಾಗಿದೆ. ಮೇ 28ರಿಂದ ಅನೇಕ ಜಿಲ್ಲಾ ಕೇಂದ್ರಗಳಲ್ಲಿ ಇನ್ನುಳಿದ ವಿಷಯಗಳ ಮೌಲ್ಯಮಾಪನ ಕಾರ್ಯ ಆರಂಭವಾಗುತ್ತಿದ್ದು, ಈ ಕಾರ್ಯದಲ್ಲಿ ಉಪನ್ಯಾಸಕರು ಮತ್ತು ಪ್ರಾಂಶುಪಾಲರು ಹಾಜರಾಗುವಂತೆ ಇಲಾಖೆಯಿಂದ ಸಂದೇಶ ಬಂದಿದೆ ಎಂದು ತಿಳಿಸಿದರು.
ಮೌಲ್ಯಮಾಪನ ಮಾಡುವುದು ನಮ್ಮ ಆದ್ಯ ಕರ್ತವ್ಯ. ಅದಕ್ಕೆ ನಾವು ಸಿದ್ಧರಿದ್ದೇವೆ. ಆದರೆ ಇಲ್ಲಿ ಕೆಲವು ಮುಖ್ಯ ಸಮಸ್ಯೆಗಳಿದ್ದು, ಅವುಗಳು ಪರಿಹಾರವಾಗದ ಹೊರತು ಮೌಲ್ಯಮಾಪನ ಮಾಡುವುದು ಕಷ್ಟದ ಮಾತು ಎಂದು ಆತಂಕ ವ್ಯಕ್ತಪಡಿಸಿದ ಅವರು, ಈ ನಿಟ್ಟಿನಲ್ಲಿ ಸರ್ಕಾರ ಗಮನ ಹರಿಸಬೇಕೆಂದು ಒತ್ತಾಯಿಸಿದರು. ಈ ವೇಳೆ ಯೋಗೀಶ್, ಕಲಿಂಮುಲ್ಲಾ, ರಾಜಶೇಖರ್, ಚಂದ್ರಶೇಖರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.